Karnataka Rain: ಬೆಂಗಳೂರಿನಲ್ಲಿ ಮಳೆ ಹೆಚ್ಚಾಗಿದ್ದು, ಬನ್ನೇರುಘಟ್ಟ, ನೆಲಮಂಗಲ, ರಿಚ್ಮಂಡ್ ಸರ್ಕಲ್, ಶಾಂತಿನಗರ, ಮೆಜೆಸ್ಟಿಕ್, ಎಂಜಿ ರಸ್ತೆ, ಲಾಲ್ಬಾಗ್, ಬಸವನಗುಡಿ, ಜಯನಗರ, ಜೆಪಿ ನಗರ, ಕೋರಮಂಗಲ, ಹಲಸೂರಿನ ಸುತ್ತಮುತ್ತ ಭಾರೀ ಮಳೆಯಾಗುತ್ತಿದೆ. ಸಂಜೆಯಿಂದ ದಿಢೀರನೆ ಮಳೆ ಸುರಿಯುತ್ತಿರುವುದರಿಂದ ಆಫೀಸಿನಿಂದ ಮನೆಗೆ ವಾಪಾಸ್ ಹೊರಟ ಜನರು ರಸ್ತೆಮಧ್ಯೆಯೇ ಸಿಲುಕಿ, ಬಸ್ಸ್ಟಾಂಡ್, ಅಂಗಡಿಗಳ ಕೆಳಗೆ ಆಶ್ರಯ ಪಡೆಯುತ್ತಿರುವ ದೃಶ್ಯ ಕಂಡುಬಂದಿತು.
ಇಂದು ಕರ್ನಾಟಕದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಇನ್ನೂ 3 ದಿನ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ. ಹೀಗಾಗಿ, ಕರಾವಳಿಯಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಜೂನ್ 15ರಿಂದ ಮಳೆ ಹೆಚ್ಚಾಗಲಿದೆ. ಜೂನ್ 16ರಿಂದ ಉತ್ತರ ಒಳನಾಡಿನಲ್ಲಿ ಚದುರಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
6.40 PM Update:#Bangalorerains #Monsoon2022
Dark North West horizon from Bannerghatta road.
TS to North West near Nelamangala pic.twitter.com/9fIXp7TbzU— Namma Weather (@namma_vjy) June 14, 2022
ನಾಳೆಯಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆ ತೀವ್ರತೆ ಪಡೆದುಕೊಳ್ಳಲಿದೆ. ಇಂದು ಕಾಸರಗೋಡು, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಸಂಜೆಯಿಂದ ಮಳೆಯಾಗುತ್ತಿದೆ. ಕೊಡಗು, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ, ಪಾವಗಢ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರದಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗದ ಹಿರಿಯೂರು ತಾಲೂಕಿನಾದ್ಯಂತ ಧಾರಾಕಾರ ಮಳೆ, ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿ 4ರ ಸರ್ವಿಸ್ ರಸ್ತೆ ಜಲಮಯವಾಗಿದೆ.
Its Raining in Bangalore.. A bright Sunny ? day.. and its pouring.. wow.. what a weather.. #Bangalore and its weather Love Stories continues to surprise ???? #bangalorerains #Rain #monsoon Rain #Bengaluru pic.twitter.com/lgYFgTI4tO
— Bijender Singh ????? (@BijenderSingh04) June 14, 2022
ಇದನ್ನೂ ಓದಿ: Guwahati Rain: ಗುವಾಹಟಿಯಲ್ಲಿ ಭಾರೀ ಮಳೆಯಿಂದ ಭೂಕುಸಿತ; ನಾಲ್ವರು ಕಾರ್ಮಿಕರು ಜೀವಂತ ಸಮಾಧಿ
ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜೂ. 15ರಿಂದ ಹಾಗೂ ಉತ್ತರ ಒಳನಾಡಿನಲ್ಲಿ ಜೂ. 16ರಿಂದ ಮಳೆ ಬಿರುಸು ಪಡೆಯಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಯಾದಗಿರಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಬೆಳಗಾವಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:12 pm, Tue, 14 June 22