AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಮಳೆ ಅವಾಂತರ ಬಗೆಹರಿಸಲು ಸಹಾಯವಾಣಿ ತೆರೆದ BBMP; ಇಲ್ಲಿದೆ ವಿವರ

ಹಲವು ತಿಂಗಳಿನಿಂದ ಬಿಸಿಲು ಝಳದ ಬಳಿಕ ಇದೀಗ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೆಲ ದಿನಗಳಿಂದ ಮಳೆಯಾಗುತ್ತಿದೆ. ಮುಂದಿನ ದಿನಗಳಲ್ಲೂ ಮತ್ತಷ್ಟು ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದ ಇತ್ತ ಬಿಬಿಎಂಪಿ ಸಹ ಮಳೆ ಅವಾಂತರಗಳನ್ನು ಬೇಗ ಬಗೆಹರಿಸಲು ಸಜ್ಜಾಗಿದ್ದು, ವಿಪತ್ತು ನಿರ್ವಹಣೆಯ ಕಂಟ್ರೋಲ್ ರೂಂ ಸ್ಥಾಪನೆ ಮಾಡಿದೆ.

ಬೆಂಗಳೂರಲ್ಲಿ ಮಳೆ ಅವಾಂತರ ಬಗೆಹರಿಸಲು ಸಹಾಯವಾಣಿ ತೆರೆದ BBMP; ಇಲ್ಲಿದೆ ವಿವರ
ಬೆಂಗಳೂರಲ್ಲಿ ಮಳೆ ಅವಾಂತರ ಬಗೆಹರಿಸಲು ಸಹಾಯವಾಣಿ
Shivaraj
| Edited By: |

Updated on: May 09, 2024 | 7:35 PM

Share

ಬೆಂಗಳೂರು,ಮೇ.09: ಬೆಂಗಳೂರಿನಲ್ಲಿ ಕಳೆದ ನಾಲ್ಕೈದು ದಿನದಿಂದ ಮಳೆಯಾಗುತ್ತಿದ್ದು, ನಿನ್ನೆ(ಮೇ.08) ಸುರಿದ ಮಳೆ (Rain)ಗೆ ಕೆಲವೆಡೆ ರಸ್ತೆಗಳು ಕುಸಿದರೆ, ಇನ್ನು ಹಲವೆಡೆ ಮರಗಳು ಬಿದ್ದಿವೆ. ಈ ಹಿನ್ನಲೆ ಅವಾಂತರಗಳನ್ನು ಬೇಗ ಬಗೆಹರಿಸಲು ಬಿಬಿಎಂಪಿ (BBMP) ಹೊಸ ಪ್ಲ್ಯಾನ್ ಮಾಡಿದ್ದು, ವಿಪತ್ತು ನಿರ್ವಹಣಾ ಸಹಾಯವಾಣಿ ನಂಬರ 1533 ತೆರದಿದೆ. ಬೆಂಗಳೂರಿನ 8 ವಲಯಗಳಲ್ಲಿ ಪ್ರತ್ಯೇಕವಾಗಿ ಕಂಟ್ರೋಲ್ ರೂಂ ಓಪನ್ ಮಾಡಿದ್ದು, ಕರೆ ಮಾಡಿದ ತಕ್ಷಣ ಹೋಗಿ ಅಲ್ಲಿಯ ಸಮಸ್ಯೆಯನ್ನು ಬಗೆಹರಿಸುವ ಕೆಲಸ ಪಾಲಿಕೆ ಮಾಡುತ್ತಿದೆ.

ಇಲ್ಲಿದೆ ಸಹಾಯವಾಣಿ ವಿವರ

ಬೊಮ್ಮನಹಳ್ಳಿ ವಲಯ-080-25732447, 25735642, 9480685707

ದಾಸರಹಳ್ಳಿ ವಲಯ-080-28394909, 9480685709

ಪೂರ್ವ ವಲಯ-080-22975803, 9480685702

ಮಹದೇವಪುರ ವಲಯ-080-28512300, 9480685706

ರಾಜರಾಜೇಶ್ವರಿ ನಗರ ವಲಯ-080-28601851, 9480685708

ದಕ್ಷಿಣ ವಲಯ-9480685704, 8026566362, 8022975703

ಪಶ್ಚಿಮ ವಲಯ-080-23463366, 23561692, 9480685703

ಯಲಹಂಕ ವಲಯ-080-23636671, 22975936, 9480685705

ತುರ್ತು ಸಂದರ್ಭಗಳಲ್ಲಿ ಕಂಟ್ರೋಲ್ ರೂಂಗೆ ಕರೆ ಮಾಡಲು ಅವಕಾಶ ಕಲ್ಪಿಸಿದ್ದು, ಮಳೆ ಸಂದರ್ಭದಲ್ಲಿ ವಲಯವಾರು ಸಮಸ್ಯೆ ಬಗೆಹರಿಸಲು ಬಿಬಿಎಂಪಿ ಈ ಕ್ರಮಕೈಗೊಂಡಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಭಾರಿ ಮಳೆ ಎಚ್ಚರಿಕೆ, ಜಾಗ್ರತೆಯಿಂದ ಇರಲು ಕೆಲ ಸಲಹೆ ಕೊಟ್ಟ ಹವಾಮಾನ ಇಲಾಖೆ

ಬೆಸ್ಕಾಂ ಗ್ರಾಹಕರಿಗೆ ಪರ್ಯಾಯ ವಾಟ್ಸ್‌ ಆಪ್‌/ಎಸ್‌ಎಂಎಸ್‌ ದೂರವಾಣಿ ಸಂಖ್ಯೆಗಳು

ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಗಾಳಿ-ಮಳೆಗೆ ವಿದ್ಯುತ್‌ ಕಂಬಗಳು ಮುರಿದು, ವಿದ್ಯುತ್‌ ಮೂಲ ಸೌಕರ್ಯಗಳು ಹಾನಿಗೊಳಗಾಗಿವೆ. ಹೀಗಾಗಿ ಬೆಸ್ಕಾಂ ಸಹಾಯವಾಣಿ 1912ಗೆ ದೂರುಗಳು ಹರಿದು ಬಂದಿದ್ದು, ಕರೆಗಳ ಒತ್ತಡದಿಂದಾಗಿ ಗ್ರಾಹಕರಿಗೆ 1912 ಸಂಪರ್ಕ ಸಾಧ್ಯವಾಗುತ್ತಿಲ್ಲ. ಮಳೆಗಾಲದಲ್ಲಿ ಗ್ರಾಹಕರ ವಿದ್ಯುತ್‌ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ಗ್ರಾಹಕರಿಗೆ ಈ ಕೆಳಕಂಡ ಪಯಾರ್ಯ ವಾಟ್ಸ್‌ ಆಪ್‌ ಸಂಖ್ಯೆಗಳನ್ನು ನೀಡಲಾಗಿದೆ.

ವಾಟ್ಸ್‌ಪ್‌ ಸಂಖ್ಯೆಗಳಿಗೆ ಗ್ರಾಹಕರು ಸಂದೇಶ ಹಾಗೂ ಛಾಯಚಿತ್ರಗಳನ್ನು ತಮ್ಮ ವಿಳಾಸದೊಂದಿಗೆ ಕಳುಹಿಸಿ ತಮ್ಮ ವಿದ್ಯುತ್‌ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದಾಗಿದೆ. ಜೊತೆಗೆ ಎಸ್​ಎಂಎಸ್​ಗಳನ್ನು ಕಳುಹಿಸಲು ಬೆಸ್ಕಾಂ ಬೆಂಗಳೂರು ಮಹಾನಗರ ವ್ಯಾಪ್ತಿಯ ಗ್ರಾಹಕರಿಗೆ 12 ಮೊಬೈಲ್‌ ಸಂಖ್ಯೆಗಳನ್ನು ಕೂಡ ಒದಗಿಸಲಾಗಿದೆ.

ಜಿಲ್ಲಾವಾರು ವಾಟ್ಸ್‌ ಆಪ್‌ ಸಂಖ್ಯೆಗಳು

ಬೆಂಗಳೂರು ಪೂರ್ವ- 8277884013, ಬೆಂಗಳೂರು ಪಶ್ಚಿಮ- 8277884012, ಬೆಂಗಳೂರು ಉತ್ತರ- 8277884014, ಬೆಂಗಳೂರು ದಕ್ಷಿಣ- 8277884011. ಕೋಲಾರ- 8277884015, ಚಿಕ್ಕಬಳ್ಳಾಪುರ- 8277884016, ಬೆಂಗಳೂರು ಗ್ರಾಮಾಂತರ- 8277884017, ರಾಮನಗರ- 8277884018, ತುಮಕೂರು- 8277884019, ಚಿತ್ರದುರ್ಗ- 8277884020 ಹಾಗೂ ದಾವಣಗೆರೆ- 8277884021. ಸುರಕ್ಷತೆ ಸಂಬಂಧಿಸಿದ ದೂರುಗಳಿಗೆ ವಾಟ್ಸ್‌ ಆಪ್‌ ಸಂಖ್ಯೆ – 9483191212, 9483191222 ಮತ್ತು ಬೆಸ್ಕಾಂ ಸಾಮಾನ್ಯ ವಾಟ್ಸ್‌ ಆಪ್‌ ಸಂಖ್ಯೆ- 9449844640.

ಈ ಕೆಳಗಿನ ಮೊಬೈಲ್‌ ಸಂಖ್ಯೆಗಳು- ಕೇವಲ ಎಸ್‌ಎಂಎಸ್‌ ಗಳಿಗೆ ಮಾತ್ರ

9480816108, 9480816109, 9480816110, 9480816111, 9480816112, 9480816113, 9480816114, 9480816115, 9480816116, 9480816117, 9480816118 ಮತ್ತು 9480816119.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?