ಮಳೆ ಸೃಷ್ಟಿಸಿದ ಅವಾಂತರ ಬಗ್ಗೆ ಮಾಹಿತಿ ಪಡೆದ ಡಿಕೆ ಶಿವಕುಮಾರ್; ನಗರಾಭಿವೃದ್ಧಿ ಸಚಿವರ ನೈಟ್ ರೌಡ್ಸ್, ಬಿಬಿಎಂಪಿ ಅಧಿಕಾರಿಗಳಿಗೆ ಕ್ಲಾಸ್
ಇಂಜಿನಿಯರ್ಗಳು ಹಾಗೂ ಸಿಬ್ಬಂದಿ ತುರ್ತು ಕೆಲಸ ಮಾಡುತ್ತಿದ್ದಾರೆ. ಯಾವುದೇ ಕಡೆ ಹಾನಿಯಾಗದಂತೆ ತುರ್ತು ಕೆಲಸ ಮಾಡುತ್ತಿದ್ದಾರೆ. ವಿಮಾನ ನಿಲ್ದಾಣದ ಕಡೆ ಸ್ವಲ್ಪ ಜಲಾವೃತವಾಗಿದೆ. ಆರ್.ಆರ್.ನಗರದಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿದಿದೆ. ಕೆ.ಆರ್.ಸರ್ಕಲ್ ಅಂಡರ್ಪಾಸ್ ಬಗ್ಗೆಯೂ ಮಾಹಿತಿ ಪಡೆದಿದ್ದೇನೆ. ಯಾವುದೇ ಅನಾಹುತ ಆಗದಂತೆ ನೋಡಿಕೊಳ್ಳಲು ಸೂಚಿಸಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
ಬೆಂಗಳೂರು ನ.07: ರಾಜ್ಯದಲ್ಲಿ ಮುಂಗಾರು ಕೈಕೊಟ್ಟಿದ್ದು, ಹಿಂಗಾರು ಕೈ ಹಿಡಿಯುವ ಆಶಾಭಾವನೆ ಮೂಡಿದೆ. ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಸೃಷ್ಟಿಯಿಂದಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಸೋಮವಾರ ಭಾರಿ ಮಳೆಯಾಗಿತ್ತು. ಇದರಿಂದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ, ರಸ್ತೆ, ಕೆಳಸೇತುವೆಗಳಲ್ಲಿ ನೀರು ನಿಂತು ಜನಜೀವನ ಅಸ್ತವ್ಯಸ್ತವಾಗಿತ್ತು. ಧಾರಾಕಾರ ಮಳೆಯಿಂದ (Rain) ಅವಾಂತರ ಸೃಷ್ಟಿಯಾದ ಹಿನ್ನೆಲೆಯಲ್ಲಿ ಬಿಬಿಎಂಪಿ (BBMP) ಕೇಂದ್ರ ಕಚೇರಿಯ ವಾರ್ ರೂಮ್ಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಭೇಟಿ ನೀಡಿದರು.
ಬಿಬಿಎಂಪಿಯ ಕೇಂದ್ರ ಕಚೇರಿ ವಾರ್ ರೂಂನಿಂದಲೇ ಎಂಟೂ ವಲಯದ ಅಧಿಕಾರಿಗಳಿಗೆ ಕರೆ ಮಾಡಿ ಅಲ್ಲಿನ ಪರೀಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡರು. ಮಳೆಯಿಂದ ಎಲ್ಲೆಲ್ಲಿ ಮರ ಬಿದ್ದಿವೆ, ನೀರು ನುಗ್ಗಿರುವ ಬಗ್ಗೆ ಮಾಹಿತಿ ಪಡೆದರು. ಅಲ್ಲದೇ ಏರ್ಪೋರ್ಟ್ ರಸ್ತೆಯಲ್ಲಿ ಉಂಟಾಗಿದ್ದ ಟ್ರಾಫಿಕ್ಜಾಮ್ ಬಗ್ಗೆಯೂ ಮಾಹಿತಿ ಪಡೆದರು. ಎಲ್ಲ ವಲಯಗಳಲ್ಲಿ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಎಲ್ಲರೂ ಸರಿಯಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಭಾರೀ ಮಳೆ, ತುಮಕೂರಿನಲ್ಲಿ ನೀರಿನಲ್ಲಿ ಸಿಲುಕಿದ ಆ್ಯಂಬುಲೆನ್ಸ್
ಡಿಕೆ ಶಿವಕುಮಾರ್ ಮಳೆ ಪ್ರಮಾಣ ಕುರಿತಂತೆಯೂ ಮಾಹಿತಿ ಪಡೆದರು. ಆರ್.ಆರ್.ನಗರದಲ್ಲಿ ಮಳೆ ಪ್ರಮಾಣ ಹೆಚ್ಚಾಗಿರುವ ಕುರಿತು ಹವಾಮಾನ ಇಲಾಖೆ ಅಧಿಕಾರಿಯಿಂದ ಮಾಹಿತಿ ಪಡೆದರು. ಏರ್ ಪೋರ್ಟ್ ರಸ್ತೆ, ಮಾರತ್ತ ಹಳ್ಳಿ ಸೇರಿದಂತೆ ಹಲವೆಡೆ ಹೆಚ್ಚು ಮಳೆಯಾಗಿದೆ. ಸ್ಟ್ರಾಮ್ ವಾಟರ್ ಫ್ಲೋಯಿಂಗ್ ಕುರಿತಂತೆ ಮಾಹಿತಿ ಸಂಗ್ರಹಿಸಿದರು.
ಈ ವೇಳೆ ಡಿಕೆ ಶಿವಕುಮಾರ್ ಬಿಬಿಎಂಪಿ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಪ್ರಸಂಗವೂ ನಡೆಯಿತು. ಕಮಾಂಡ್ ಆ್ಯಂಡ ಕಂಟ್ರೋಲ್ ರೂಮ್ನಲ್ಲಿ ಯಾಕೆ ಡಿಸ್ಪ್ಲೇ ಇಲ್ಲ? ಮೊಬೈಲ್ನಲ್ಲಿ ಯಾಕೆ ತೋರಿಸ್ತಿದೀರಿ? ಎಂದು ಪ್ರಶ್ನಿಸಿದರು. ಇದಕ್ಕೆ ಅಧಿಕಾರಿಗಳು ಪಾಸ್ವರ್ಡ್ ಇನ್ನೂ ಅಪ್ರೂವಲ್ ಆಗಿಲ್ಲ ಸರ್ ಅಂತ ಉತ್ತರ ನೀಡಿದರು.
ಅಧಿಕಾರಿಗಳಿಂದ ಮಾಹಿತಿ ಪಡೆದು ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಇಂಜಿನಿಯರ್ಗಳು ಹಾಗೂ ಸಿಬ್ಬಂದಿ ತುರ್ತು ಕೆಲಸ ಮಾಡುತ್ತಿದ್ದಾರೆ. ಯಾವುದೇ ಕಡೆ ಹಾನಿಯಾಗದಂತೆ ತುರ್ತು ಕೆಲಸ ಮಾಡುತ್ತಿದ್ದಾರೆ. ವಿಮಾನ ನಿಲ್ದಾಣದ ಕಡೆ ಸ್ವಲ್ಪ ಜಲಾವೃತವಾಗಿದೆ. ಆರ್.ಆರ್.ನಗರದಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿದಿದೆ. ಕೆ.ಆರ್.ಸರ್ಕಲ್ ಅಂಡರ್ಪಾಸ್ ಬಗ್ಗೆಯೂ ಮಾಹಿತಿ ಪಡೆದಿದ್ದೇನೆ. ಯಾವುದೇ ಅನಾಹುತ ಆಗದಂತೆ ನೋಡಿಕೊಳ್ಳಲು ಸೂಚಿಸಿದ್ದೇನೆ ಎಂದು ಹೇಳಿದರು.
ಮಳೆ ಬರುವ ನಿರೀಕ್ಷೆ ಇತ್ತು. ಟ್ರಾಫಿಕ್ ಸಮಸ್ಯೆ ಇರುತ್ತದೆ. ಯಾವುದೇ ಕಡೆ ಹಾನಿಯಾಗದಂತೆ ಎಮರ್ಜೆನ್ಸಿಗೆ ಸಿಬ್ಬಂದಿ, ಇಂಜಿನಿಯರ್ಸ, ಕೆಲಸ ಮಾಡುತ್ತಿದ್ದಾರೆ. ಯಾವ ವಲಯದಲ್ಲಿ ಎಷ್ಟು ಪ್ರಮಾಣದಲ್ಲಿ ಮಳೆ ಬರುತ್ತಿದೆ ಅಂತ ಮಾಹಿತಿ ಪಡೆದಿದ್ದೇನೆ. ವಲಯ ಆಯುಕ್ತರು ನೋಡುತ್ತಿದ್ದಾರೆ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ