
ಬೆಂಗಳೂರು, ಅಕ್ಟೋಬರ್ 23: ಕರ್ನಾಟಕದಲ್ಲಿ ಹಿಂಗಾರು ಮಳೆಯ (rain) ಆರ್ಭಟ ಜೋರಾಗಿದೆ. ನಿರಂತರ ಮಳೆಗೆ ಬೆಳೆಗಳು ನೀರು ಪಾಲಾದರೆ, ಜನಜೀವನ ಅಸ್ತವ್ಯಸ್ತವಾಗಿದೆ. ಇತ್ತ ಸಿಲಿಕಾನ್ ಸಿಟಿಯಲ್ಲೂ (bangaluru) ಮಳೆ ಅಬ್ಬರಿಸಿದೆ. ನಗರದಲ್ಲಿ ಕಳೆದ ರಾತ್ರಿ ಭಾರೀ ಮಳೆ ಸುರಿದಿದೆ. ಪರಿಣಾಮ ಕೆಲವು ಅವಾಂತರಗಳು ಸಂಭವಿಸಿವೆ. ಏಕಾಏಕಿ ಬೃಹತ್ ಮರದ ಕೊಂಬೆ ರಸ್ತೆಗೆ ಉರುಳಿ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಮೂವರು ಪಾರಾಗಿದ್ದಾರೆ.
ನಗರದಲ್ಲಿ ರಾತ್ರಿ ಸುರಿದ ಮಳೆಗೆ ಅಲಿ ಆಸ್ಗರ್ ರಸ್ತೆಯ ಪೊಲೀಸ್ ಕಮಿಷನರ್ ಕಚೇರಿ ಹಿಂದಿನ ಗೇಟ್ ಬಳಿ ಬೆಳಗ್ಗೆ 7:30 ರ ವೇಳೆಗೆ ಬೃಹತ್ ಮರದ ಕೊಂಬೆ ಏಕಾಏಕಿ ರಸ್ತೆಗೆ ಉರುಳಿ ಬಿದ್ದ ಘಟನೆ ನಡೆದಿದೆ. ಓರ್ವ ಟ್ರಾಫಿಕ್ ಪೊಲೀಸ್, ಸೆಕ್ಯೂರಿಟಿ ಗಾರ್ಡ್ ಮತ್ತು ಬಿಬಿಎಂಪಿ ಸಿಬ್ಬಂದಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಆ ಮೂಲಕ ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದೆ.
ಸಂಚಾರ ಸಲಹೆ ”
ಅಲಿ ಅಸ್ಕರ್ ರಸ್ತೆಯಲ್ಲಿ ಮರ ಬಿದ್ದ ಪರಿಣಾಮ ಕನ್ನಿಂಗ್‌ಹ್ಯಾಮ್ ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಪ್ರಯಾಣಿಕರು ಪರ್ಯಾಯ ಮಾರ್ಗವಾಗಿ ಇನ್‌ಫೆಂಟ್ರಿ ರಸ್ತೆಯನ್ನು ಬಳಸುವಂತೆ ಸೂಚಿಸಲಾಗಿದೆ.
“Traffic advisory”
Due to a Tree fall at Ali Asker Road towards Cunningham Road has been temporarily… pic.twitter.com/lM47qB39pS— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) October 23, 2025
ಇನ್ನು ಈ ಬಗ್ಗೆ ಬೆಂಗಳೂರು ಸಂಚಾರಿ ಪೊಲೀಸರು ಟ್ವೀಟ್ ಮಾಡಿದ್ದು, ಅಲಿ ಅಸ್ಕರ್ ರಸ್ತೆಯಲ್ಲಿ ಮರ ಬಿದ್ದ ಪರಿಣಾಮ ಕನ್ನಿಂಗ್‌ಹ್ಯಾಮ್ ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಪ್ರಯಾಣಿಕರು ಪರ್ಯಾಯ ಮಾರ್ಗವಾಗಿ ಇನ್‌ಫೆಂಟ್ರಿ ರಸ್ತೆಯನ್ನು ಬಳಸುವಂತೆ ಸೂಚಿಸಿದ್ದಾರೆ.
ಇದನ್ನೂ ಓದಿ: Karnataka Rains: ಕರ್ನಾಟಕದಾದ್ಯಂತ ಅ.29ರವರೆಗೂ ವಿಪರೀತ ಮಳೆ, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಅದೇ ರೀತಿಯಾಗಿ ಆರ್‌ಸಿ ಪುರದಲ್ಲಿ ಕೂಡ ಮರ ಧರೆಗುರುಳಿ ಬಿದ್ದಿದೆ. ಪರಿಣಾಮ ರಾಮಚಂದ್ರಾಪುರ ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಪ್ರಯಾಣಿಕರು ಪರ್ಯಾಯ ಮಾರ್ಗವಾಗಿ ಭೂಪಸಂದ್ರ ರಸ್ತೆಯನ್ನು ಬಳಸುವಂತೆ ಬೆಂಗಳೂರು ಸಂಚಾರಿ ಪೊಲೀಸರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:21 am, Thu, 23 October 25