ಬೆಂಗಳೂರಿನಲ್ಲಿ ಭಾರಿ ಮಳೆ ಎಚ್ಚರಿಕೆ, ಜಾಗ್ರತೆಯಿಂದ ಇರಲು ಕೆಲ ಸಲಹೆ ಕೊಟ್ಟ ಹವಾಮಾನ ಇಲಾಖೆ

ಬಿರುಬಿಸಿಲಿಗೆ ಹೈರಾಣಾಗಿದ್ದ ಬೆಂಗಳೂರಿಗರಿಗೆ ಕಳೆದ ನಾಲ್ಕೈದು ದಿನಗಳಿಂದ ಆಗುತ್ತಿರುವ ಮಳೆ ಸಂತಸ ತಂದಿದೆ. ಆದರೆ, ಕೆಲವೆಡೆ ಅನಾಹುತಗಳಾಗಿದ್ದು, ಬಿಬಿಎಂಪಿ ಹೆಲ್ಪಲೈನ್​ ಕೂಡ ಸ್ಥಾಪನೆ ಮಾಡಿದೆ. ಅದರಂತೆ ಇಂದು (ಮೇ.09) ಕೂಡ ನಗರದಲ್ಲಿ ದಟ್ಟವಾಗಿ ಮೋಡ ಕವಿದ ವಾತಾವರಣವಿದೆ. ಹೀಗಾಗಿ ಗುಡುಗು ಸಹಿತ 40 ರಿಂದ 50 ಕೀ.ಮಿ ವೇಗದಲ್ಲಿ ಗಾಳಿಯೊಂದಿಗೆ ಮಳೆ ಬರಲಿದ್ದು, ಮಳೆಯಿಂದ ಜನರು ಜಾಗ್ರತೆ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. 

ಬೆಂಗಳೂರಿನಲ್ಲಿ ಭಾರಿ ಮಳೆ ಎಚ್ಚರಿಕೆ, ಜಾಗ್ರತೆಯಿಂದ ಇರಲು ಕೆಲ ಸಲಹೆ ಕೊಟ್ಟ ಹವಾಮಾನ ಇಲಾಖೆ
ಬೆಂಗಳೂರಿನಲ್ಲಿ ಭಾರಿ ಮಳೆ ಎಚ್ಚರಿಕೆ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:May 09, 2024 | 6:52 PM

ಬೆಂಗಳೂರು, ಮೇ.09: ಕಳೆದ ನಾಲ್ಕೈದು ದಿನಗಳಿಂದ ಬೆಂಗಳೂರು ನಗರದಲ್ಲಿ ಮಳೆ(Bengaluru Rain)ಯ ಅಬ್ಬರ ಜೋರಾಗಿದ್ದು, ಇಂದು (ಮೇ.09) ಕೂಡ ನಗರದಲ್ಲಿ ದಟ್ಟವಾಗಿ ಮೋಡ ಕವಿದ ವಾತಾವರಣವಿದೆ. ಹೀಗಾಗಿ ಗುಡುಗು ಸಹಿತ 40 ರಿಂದ 50 ಕೀ.ಮಿ ವೇಗದಲ್ಲಿ ಗಾಳಿಯೊಂದಿಗೆ ಮಳೆ ಬರಲಿದ್ದು, ಮಳೆಯಿಂದ ಜನರು ಜಾಗ್ರತೆ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.  ಜೊತೆಗೆ ಇನ್ನೂ ಮೇ. 12 ನೇ ತಾರೀಖಿನವರೆಗೂ ಬೆಂಗಳೂರಿನಲ್ಲಿ ಸಾಧಾರಣ ಮಳೆ ಸಾಧ್ಯತೆಯಿದೆ ಎಂದು ಮೂನ್ಸುಚನೆ ನೀಡಿದೆ.

ಸಾರ್ವಜನಿಕರಿಗೆ ಹವಾಮಾನ ಇಲಾಖೆ ಕೆಲ ಸಲಹೆ

ಮಳೆ ಸಂದರ್ಭದಲ್ಲಿ ಅವಘಡ ಸಂಭವ ಹಿನ್ನಲೆ ಸಾರ್ವಜನಿಕರಿಗೆ ಹವಾಮಾನ ಇಲಾಖೆ ಕೆಲ ಸಲಹೆಗಳನ್ನು ಕೊಟ್ಟಿದೆ.

  • ಮನೆಯೊಳಗೆ ಕಿಟಕಿಗಳು ಮತ್ತು ಬಾಗಿಲುಗಳನ್ನು ಮುಚ್ಚಿ ಇರಬೇಕು.
  • ಸಾಧ್ಯವಾದರೆ ಪ್ರಯಾಣವನ್ನು ತಪ್ಪಿಸಿ ಸುರಕ್ಷಿತ ಆಶ್ರಯವನ್ನು ತೆಗೆದುಕೊಳ್ಳಿ.
  • ಮರಗಳ ಕೆಳಗೆ ಆಶ್ರಯ ಪಡೆಯಬೇಡಿ.
  • ಕಾಂಕ್ರೀಟ್ ಗೋಡೆಗಳಿಗೆ ಒರಗಬೇಡಿ.
  • ಎಲೆಕ್ನಿಕಲ್/ಎಲೆಕ್ಟ್ರಾನಿಕ್ ಉಪಕರಣಗಳನ್ನು ತಕ್ಷಣವೇ ಅನ್‌ಪ್ಲಗ್ ಮಾಡಿ.
  • ಮಳೆ ವೇಳೆ ತಕ್ಷಣ ಜಲಮೂಲಗಳಿಂದ ಹೊರ ಬರುವಂತೆ ಸೂಚನೆ.
  • ವಿದ್ಯುಚ್ಛಕ್ತಿಯನ್ನು ನಡೆಸುವ ಎಲ್ಲಾ ವಸ್ತುಗಳಿಂದ ದೂರವಿರಿ.
  • ಪ್ರಯಾಣಿಸುತ್ತಿದ್ದರೆ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ನಿನ್ನೆ ಸುರಿದ ಮಳೆಗೆ ಹಲವೆಡೆ ಅನಾಹುತ; ಪಾಲಿಕೆ ಹೆಲ್ಪ್ ಲೈನ್​ಗೆ ಬಂತು ನೂರಾರು ದೂರುಗಳು

ಏರ್ಪೋಟ್​ನಲ್ಲಿ ಮಳೆಯ ಸಿಂಚನ

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ತುಂತುರು ಮಳೆ ಆರಂಭವಾಗಿದ್ದು, ಮಳೆಯಿಂದಾಗಿ ಕೆಂಪೇಗೌಡ ಏರ್ಪೋಟ್ ಕೂಲ್ ಆಗಿದೆ. ಬೆಳಗಿನಿಂದ ಬಿಸಿಲಿಗೆ ಕಂಗೆಟ್ಟಿದ್ದ ಏರ್ಪೋಟ್ ಪ್ರಯಾಣಿಕರು, ಟ್ಯಾಕ್ಸಿ ಚಾಲಕರು ಮಳೆ ಆಗಮನದಿಂದ ಖುಷ್​ ಆಗಿದ್ದು, ಏರ್ಪೋಟ್ ವಾತಾವರಣ ತಂಪಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:48 pm, Thu, 9 May 24

ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್
ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು
ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು