Bengaluru Rain: ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ತುಂತುರು ಮಳೆ; ಚಳಿಯೂ ಹೆಚ್ಚಳ

Karnataka Weather Today: ಬೆಂಗಳೂರಿನಲ್ಲಿ ಮಾತ್ರವಲ್ಲದೆ ಇಂದಿನಿಂದ 3 ದಿನ ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ.

Bengaluru Rain: ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ತುಂತುರು ಮಳೆ; ಚಳಿಯೂ ಹೆಚ್ಚಳ
ಮಳೆ
Follow us
| Updated By: ಸುಷ್ಮಾ ಚಕ್ರೆ

Updated on: Nov 24, 2022 | 9:27 AM

Karnataka Rains: ಬೆಂಗಳೂರಿನಲ್ಲಿ (Bangalore Rain) ಇಂದು ಮುಂಜಾನೆಯಿಂದಲೇ ತುಂತುರು ಮಳೆ ಶುರುವಾಗಿದೆ. ಅದರ ಜೊತೆಗೆ ಚಳಿಯೂ ಹೆಚ್ಚಳವಾಗಿದೆ. ಇದರಿಂದ ಆಫೀಸಿಗೆ ತೆರಳುವವರು, ಶಾಲಾ-ಕಾಲೇಜುಗಳಿಗೆ ತೆರಳುವವರು ಪರದಾಡುವಂತಾಯಿತು. ಬೆಂಗಳೂರಿನಲ್ಲಿ ಮಾತ್ರವಲ್ಲದೆ ಇಂದಿನಿಂದ 3 ದಿನ ಕರ್ನಾಟಕದ (Rain in Karnataka) ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಹಾಗೂ ತಮಿಳುನಾಡು ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವುದರಿಂದ ಇಂದಿನಿಂದ ಶನಿವಾರದವರೆಗೆ ಕರ್ನಾಟಕದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದಿನಿಂದ 2 ದಿನ ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದ ಕರಾವಳಿಯ ಜಿಲ್ಲೆಗಳು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಇಂದಿನಿಂದ ಇಂದು ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಭಾರೀ ಮಳೆಯಿಂದಾಗಿ ಇಂದು ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Karnataka Weather Updates: ನವೆಂಬರ್ 27ರವರೆಗೆ ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ವಿಜಯಪುರ ಹಾಗೂ ಹಾವೇರಿ ಸೇರಿ ಇತರ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ಮುನ್ಸೂಚನೆಯಿದೆ. ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಹಾಗೂ ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಕೊಡಗು ಮತ್ತು ಹಾಸನದ ಗುಡ್ಡಗಾಡು ಪ್ರದೇಶಗಳಲ್ಲೂ ಜೋರು ಮಳೆಯಾಗಲಿದೆ. ಅದೇ ರೀತಿ ಕರ್ನಾಟಕದ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಮಂಡ್ಯ, ರಾಮನಗರ, ಮೈಸೂರು, ತುಮಕೂರು ಹಾಗೂ ಉತ್ತರ ಕರ್ನಾಟಕದ ವಿಜಯಪುರ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಇಂದು ತುಂತುರು ಮಳೆಯಾಗುವ ಸಾಧ್ಯತೆಯಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಕಷ್ಟು ವ್ಯಾಪಕವಾದ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡು, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮಾ, ತಮಿಳುನಾಡು, ಪುದುಚೇರಿ, ಕಾರೈಕಲ್, ತೆಲಂಗಾಣದಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ, ಮಧ್ಯ, ಪೂರ್ವ, ಪಶ್ಚಿಮ ಮತ್ತು ದಕ್ಷಿಣ ಭಾರತದಲ್ಲಿ ಕಳಪೆ ಗಾಳಿಯ ಗುಣಮಟ್ಟವಿರಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ