Bengaluru Rain: ರಾಜಧಾನಿಯಲ್ಲಿ ಸುರಿದ ಭಾರೀ ಮಳೆಗೆ ಕೆರೆಯಂತಾದ ರಸ್ತೆಗಳು, ವಾಹನ ಸಂಚಾರ ಅಸ್ತವ್ಯಸ್ತ

ರಾಜಧಾನಿ ಬೆಂಗಳೂರಿನಲ್ಲಿ ಇಂದು ಸಂಜೆಯಿಂದ ಗುಡುಗು ಸಹಿತ ಭಾರೀ ಮಳೆಯಾಗುತ್ತಿದ್ದು, ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುತ್ತಿದ್ದಾರೆ.

Bengaluru Rain: ರಾಜಧಾನಿಯಲ್ಲಿ ಸುರಿದ ಭಾರೀ ಮಳೆಗೆ ಕೆರೆಯಂತಾದ ರಸ್ತೆಗಳು, ವಾಹನ ಸಂಚಾರ ಅಸ್ತವ್ಯಸ್ತ
ಸಂಗ್ರಹ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Oct 15, 2022 | 9:05 PM

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಇಂದು (ಅ. 15) ಸಂಜೆಯಿಂದ ಗುಡುಗು ಸಹಿತ ಭಾರೀ ಮಳೆಯಾಗುತ್ತಿದ್ದು (Rain), ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುತ್ತಿದ್ದಾರೆ. ನಗರದಲ್ಲಿ ಇನ್ನೂ ಐದು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇಂದು ಯಲ್ಲೋ ಅಲರ್ಟ್​​ ಘೋಷಣೆ ಮಾಡಿದ್ದಾರೆ. ತಗ್ಗುಪ್ರದೇಶದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಕೆರೆಯಂತಾದ ರಸ್ತೆಗಳು

ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಸಂಜೆಯಿಂದ ಭಾರೀ ಮಳೆಯಾಗುತ್ತಿದ್ದು, ರಸ್ತೆಗಳು ಕೆರೆಯಂತಾಗಿವೆ. ಕಾರ್ಪೊರೇಷನ್, ಶಾಂತಿನಗರ ಜೋಡಿ ರಸ್ತೆ, ಎಂ.ಜಿ.ರಸ್ತೆ, K.R.ಮಾರ್ಕೆಟ್​, ಮೈಸೂರು ರಸ್ತೆ ಸೇರಿದಂತೆ ಹಲವೆಡೆ ಮಳೆಯಾಗಿದೆ. ಶಾಂತಿನಗರದ ಜೋಡಿ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ಝರಿಯಂತೆ ಹರಿಯುತ್ತಿರುವ ನೀರಿನಲ್ಲಿ ಸಂಚರಿಸಲು ವಾಹನ ಸವಾರರು ಪರದಾಡುತ್ತಿದ್ದಾರೆ. ಕೆ.ಆರ್ ಮಾರ್ಕೆಟ್ ಬಳಿ ಅಧಿಕ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ಮಳೆಯಿಂದ ವಾಹನ ಸವಾರರು ಪರದಾಡುತ್ತಿದ್ದಾರೆ.

ಕಾಡಂಚಿನ ಗ್ರಾಮದ ಜನರ ನಿದ್ದೆಗೆಡಿಸಿದ ವರುಣ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಅಧಿಕ ಮಳೆಯಿಂದ ಗ್ರಾಮಸ್ಥರ ಪರೀಸ್ಥಿತಿ ಹೇಳತೀರದಂತಾಗಿದೆ. ಗ್ರಾಮದ ಬೀದಿಯಲ್ಲಿ ನೀರು ಹರಿಯುತ್ತಿದ್ದು, ಮನೆಯಿಂದ ಹೊರ ಬರಲು ಜನರು ಪರದಾಡುತ್ತಿದ್ದಾರೆ.

ಉಕ್ಕಿ ಹರಿದ ಹಲವು ಕೆರೆಗಳು, ಹಲವು ರಸ್ತೆಗಳ ಸಂಪರ್ಕ ಕಡಿತ: ಚಾಮರಾಜನಗರ ತಾಲೂಕಿನಲ್ಲಿ ಹಲವು ಕೆರೆಗಳು ಉಕ್ಕಿ ಹರಿದಿದ್ದು, ಹಲವು ರಸ್ತೆಗಳ ಸಂಪರ್ಕ ಕಡಿತವಾಗಿವೆ. ಚಾಮರಾಜನಗರ ತಾಲೂಕಿನ ಬ್ಯಾಡಮೂಡ್ಲು-ಕೋಡಿ ಮೊಳೆ ಸಂಪರ್ಕಿಸುವ ರಸ್ತೆಯಲ್ಲಿ ಕೆರೆ ನೀರು ಉಕ್ಕಿ ಹರಿಯುತ್ತಿದ್ದು, ಸಂಚಾರ ಸ್ಥಗಿತಗೊಂಡಿದೆ.

ಕೈಗೆ ಬಂದಿದ್ದು, ಬಾಯಿಗೆ ಬರದಂತಾದ ಬೆಳೆ

ಬೀದರ: ಗಡೀ ಜಿಲ್ಲೆ ಬೀದರ್​ನಲ್ಲಿ ಕಳೆದು ಮೂರು ದಿನದಿಂದ ‌ಸುರಿಯುತ್ತಿರುವ ಮಳೆಯಿಂದಾಗಿ ಹೊಲ-ಗದ್ದೆಗಳು ಜಲಾವೃತಗೊಂಡಿದ್ದು, ರೈತನಿಗೆ ದಿಕ್ಕೆ ತೋಚದಂತಾಗಿದೆ. ನಿರಂತರ ಮಳೆಯಿಂದಾಗಿ ಕಟಾವಿಗೆ ಬಂದಿದ್ದ ಉದ್ದು, ಸೋಯಾ, ಹೆಸರು ಬೆಳೆ ನೀರಿನಲ್ಲಿ ಮುಳುಗಿದ್ದು ಕಟಾವು ಮಾಡದಂತಾ ಸ್ಥಿತಿ ಎದುರಾಗಿದೆ.

ಇನ್ನೂ ಎರಡು ದಿನ ಮಳೆ ಬರುವ ಸಾಧ್ಯತೆಯಿದ್ದು ಇನ್ನೇರಡು ದಿನ ಮಳೆ ಸುರಿದರೆ ನೀರಿನಲ್ಲಿ ಮುಳುಗಿರುವ ಬೆಳೆ ಮೊಳಕೆಯೊಡೆದು ರೈತರು ನಷ್ಟಕ್ಕೆ ಒಳಗಾಗುತ್ತಾರೆ. ಜೊತೆಗೆ ತಿಂಗಳ ಹಿಂದೆ ಸುರಿದ‌ ಮಳೆಯಿಂದಾಗಿ ಜಿಲ್ಲೆಯ 23 ಸಾವಿರ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:00 pm, Sat, 15 October 22

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?