AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮಳೆ ಅಬ್ಬರ: ಹಲವೆಡೆ ಅವಾಂತರ, ಸೆ. 24ರ ವರೆಗೆ ಮಳೆ ಸಾಧ್ಯತೆ

ಬೆಂಗಳೂರಿನಲ್ಲಿ ಸೋಮವಾರ ಸಂಜೆ ಸುರಿದ ಭಾರಿ ಮಳೆಗೆ ಹಲವು ಕಡೆಗಳಲ್ಲಿ ಅವಾಂತರ ಸೃಷ್ಟಿಯಾಗಿದೆ. ಮಂಜುನಾಥನಗರದಲ್ಲಿ ಬೃಹತ್ ಮರ ಬಿದ್ದು ಕೆಲವು ಅಂಗಡಿಗಳಿಗೆ ಹಾನಿಯಾಗಿದೆ. ದಾಬಸ್‌ಪೇಟೆ ಜಲಾವೃತಗೊಂಡಿದೆ. ಸೆಪ್ಟೆಂಬರ್ 24ರವರೆಗೆ ರಾಜ್ಯದಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮಳೆ ಅಬ್ಬರ: ಹಲವೆಡೆ ಅವಾಂತರ, ಸೆ. 24ರ ವರೆಗೆ ಮಳೆ ಸಾಧ್ಯತೆ
ಬೆಂಗಳೂರಿನ ಬಾಗಲೂರು ಕ್ರಾಸ್‌ನಲ್ಲಿ ಮಳೆ ನೀರು ನಿಂತಿರುವುದು (ಚಿತ್ರ ಕೃಪೆ: ಬೆಂಗಳೂರು ಟ್ರಾಫಿಕ್ ಪೊಲೀಸ್)Image Credit source: @blrcitytraffic
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on: Sep 22, 2026 | 6:50 AM

Share

ಮುಖ್ಯಾಂಶಗಳು

  • ಬೆಂಗಳೂರಲ್ಲಿ ಸಂಜೆ ಮಳೆಗೆ ಹಲವು ಅವಾಂತರ
  • ಮರ ಬಿದ್ದು ಅಂಗಡಿಗಳಿಗೆ ಭಾರಿ ಹಾನಿ
  • ಸೆಪ್ಟೆಂಬರ್ 24ರವರೆಗೆ ಮಳೆ ಮುನ್ಸೂಚನೆ

ಬೆಂಗಳೂರು, ಸಪ್ಟೆಂಬರ್ 22: ಬೆಂಗಳೂರಿನ ಜನರಿಗೆ ವರುಣ ದೇವ ಸೋಮವಾರವೂ ತಂಪೆರೆದಿದ್ದಾನೆ. ನಗರದ ಹಲವು ಕಡೆಗಳಲ್ಲಿ ಸುರಿದ ಮಳೆಗೆ ವಾಹನ ಸವಾರರು ಹಾಗೂ ಪಾದಚಾರಿಗಳು ಹೈರಾಣಾದರು. ಸಂಜೆ ಸುರಿದ ಮಳೆಯಿಂದ ಹಲವೆಡೆ ಸಂಚಾರಕ್ಕೆ ಅಡ್ಡಿಯುಂಟಾಯಿತು. ನಗರದಲ್ಲಿ ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಸಂಜೆ ವೇಳೆಗೆ ಮಳೆ ಸುರಿಯಿತು. ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಸಿಟಿ ಮಂದಿ ಮಳೆಯಿಂದ ಪರದಾಡಿದರು.

ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಸಂಜೆ ಸುರಿಯುತ್ತಿರುವ ಮಳೆಗೆ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಸೋಮವಾರ ರಾತ್ರಿ ಮಳೆ ಅಬ್ಬರಿಸಿದ್ದು, ಮಂಜುನಾಥನಗರದ ಮೋದಿ ಆಸ್ಪತ್ರೆ ಬಳಿ ಬೃಹತ್ ಮರವೊಂದು ಉರುಳಿ ಬಿದ್ದಿದೆ. ಗಣೇಶೋತ್ಸವದ ಮಾರಾಟಕ್ಕೆ ಇಟ್ಟಿದ್ದ ಅಂಗಡಿಗಳಿಗೆ ಮರ ಬಿದ್ದ ಪರಿಣಾಮ ಹಾನಿಯಾಗಿದೆ.

ಪಿಂಗಾಣಿ, ಸ್ಟೀಲ್ ಹಾಗೂ ಬಳೆ ಅಂಗಡಿಗಳು ಸಂಪೂರ್ಣ ನಾಶವಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮರ ಬಿದ್ದಿದ್ದರಿಂದ ಕೆಲಕಾಲ ರಸ್ತೆ ಸಂಚಾರಕ್ಕೂ ಅಡ್ಡಿಯುಂಟಾಗಿತ್ತು.

ಕಲಬುರಗಿಯಲ್ಲಿ ಸಿಡಿಲಿಗೆ ಇಬ್ಬರು ಮಹಿಳೆಯರು ಬಲಿ

ಇನ್ನು ಕಲಬುರಗಿ ಜಿಲ್ಲೆಯ ಕಮಲಾಪುರದ ನಾಗೂರಿನಲ್ಲಿ ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಮರದಡಿ ಕುಳಿತು ಊಟ ಮಾಡುತ್ತಿದ್ದ ವೇಳೆ ಸಿಡಿಲು ಬಡಿದ ಪರಿಣಾಮ ಲಕ್ಷ್ಮೀ ಗುತ್ತೇದಾರ್ ಮತ್ತು ಸೈಜಾದ್ ಮೃತಪಟ್ಟಿದ್ದಾರೆ.

ದಾಬಸ್‌ಪೇಟೆ ಜಲಾವೃತ

ದಾಬಸ್‌ಪೇಟೆಯ ಶಿವಗಂಗೆ ಸರ್ಕಲ್‌ನಲ್ಲಿ ಒಂದು ಗಂಟೆ ನಿರಂತರವಾಗಿ ಸುರಿದ ಮಳೆಯಿಂದ ರಸ್ತೆ ಜಲಾವೃತಗೊಂಡಿದೆ. ರಸ್ತೆ ಕೆಸರು ಗದ್ದೆಯಂತಾಗಿದ್ದು, ಗುಂಡಿ ಹಾಗೂ ಹಂಪ್‌ಗಳು ಕಾಣದೆ ವಾಹನ ಸವಾರರು ಪರದಾಡಿದರು. ಪಾದಚಾರಿಗಳು ಕೂಡ ನಿಂತ ನೀರಿನಲ್ಲೇ ಸಂಚರಿಸುವಂತಾಯಿತು.

ಕೆಆರ್ ಮಾರುಕಟ್ಟೆ ಫ್ಲೈಓವರ್ ಮೇಲೂ ನೀರು

ಕೆ.ಆರ್. ಮಾರ್ಕೆಟ್‌ನ ಬಿಜಿಎಸ್ ಫ್ಲೈಓವರ್ ಮೇಲೂ ಮಳೆ ನೀರು ನಿಂತಿತ್ತು. ನೀರು ಸರಾಗವಾಗಿ ಹರಿದುಹೋಗಲು ಟ್ರಾಫಿಕ್ ಪೊಲೀಸರು ರಸ್ತೆ ಸ್ವಚ್ಛಗೊಳಿಸಿ ಅನುವು ಮಾಡಿಕೊಟ್ಟರು. ವಿಧಾನಸೌಧ, ಯಶವಂತಪುರ, ವಿಜಯನಗರ, ಶಿವಾನಂದ ಸರ್ಕಲ್, ಜಯನಗರ, ಶಾಂತಿನಗರ, ಕಾರ್ಪೊರೇಷನ್ ಹಾಗೂ ಲಾಲ್‌ಬಾಗ್ ಸುತ್ತಮುತ್ತಲೂ ಮಳೆಯಾಗಿದೆ. ಮಾಗಡಿ ರಸ್ತೆಯಲ್ಲಿ ನಿರಂತರ ಮಳೆಯಿಂದ ವಾಹನ ಸಂಚಾರಕ್ಕೆ ಅಡ್ಡಿಯುಂಟಾಯಿತು. ನಗರದ ಹಲವೆಡೆ ಟ್ರಾಫಿಕ್ ಜಾಮ್‌ನಿಂದ ಜನರು ಹೈರಾಣಾದರು.

ಇದನ್ನೂ ಓದಿ: ಬೀಸಿಲಿನ ಬೇಗೆಯ ನಡುವೆ ರಾಜ್ಯದ ಹಲವೆಡೆ ತಂಪೆರೆದ ವರುಣ: ಬೆಂಗಳೂರು, ಯಾದಗಿರಿಯಲ್ಲಿ ಭರ್ಜರಿ ಮಳೆ

ಸೆಪ್ಟೆಂಬರ್ 24ರವರೆಗೆ ಮಳೆ ಸಾಧ್ಯತೆ

ಭಾರತೀಯ ಹವಾಮಾನ ಇಲಾಖೆ ಸೆಪ್ಟೆಂಬರ್ 24ರವರೆಗೆ ರಾಜ್ಯಾದ್ಯಂತ ಮಳೆ ಮುನ್ಸೂಚನೆ ನೀಡಿದೆ. ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ತಜ್ಞ ಸಿಎಸ್ ಪಾಟೀಲ್ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ