Bengaluru Rains: ಬೆಂಗಳೂರು ರಸ್ತೆಗಳಲ್ಲಿ ಕಡಿಮೆಯಾಗದ ನೀರು, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಳೆಯಿಂದಾಗಿ ಸರ್ಜಾಪುರ, ಬೆಳ್ಳಂದೂರು ಮಾರತಹಳ್ಳಿ, ಔಟರ್ ರಿಂಗ್​ರೋಡ್​ಗಳಲ್ಲಿ ನೀರು ನಿಂತಿದೆ.

Bengaluru Rains: ಬೆಂಗಳೂರು ರಸ್ತೆಗಳಲ್ಲಿ ಕಡಿಮೆಯಾಗದ ನೀರು, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿ ನೀರಿನಿಂದ ಸಮಸ್ಯೆಯಾಗಿದೆ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 06, 2022 | 9:18 AM

ಬೆಂಗಳೂರು: ಭಾರೀ ಮಳೆಯಿಂದಾಗಿ ನಗರದ (Heavy Rain in Bengaluru) ರಸ್ತೆಗಳ ಮೇಲೆ ನೀರು ನಿಂತಿದೆ. ನೀರು ಕಡಿಮೆಯಾಗದ ಹಿನ್ನೆಲೆಯಲ್ಲಿ ರಸ್ತೆಗಳ ಮೇಲೆ ಸಂಚಾರ ದುಸ್ತರವಾಗಿದೆ. ಇಂದೂ ಮಳೆಯಾಗಬಹುದು ಎಂಬ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ನಗರದ ಮಹದೇವಪುರ, ಬೊಮ್ಮನಹಳ್ಳಿ, ಕೃಷ್ಣರಾಜಪುರ (ಕೆಆರ್ ಪುರಂ) ಮತ್ತು ಮಂಡೂರು ವ್ಯಾಪ್ತಿಯ ಎಲ್ಲ ಸರ್ಕಾರಿ, ಅನುದಾನಿತ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಇಲಾಖೆ ರಜೆ ಘೋಷಿಸಿದೆ. ಕೆ.ಆರ್.ಪುರಂ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಮಾರತ್ತಹಳ್ಳಿ-ಸರ್ಜಾಪುರ ರಿಂಗ್​ರೋಡ್ ಜಲಾವೃತಗೊಂಡಿರುವ ಹಿನ್ನೆಲೆಯಲ್ಲಿ ಇಂದು ರಿಂಗ್​ರೋಡ್​ನಲ್ಲಿ ಲಘು ವಾಹನಗಳಿಗೆ ನಿಷೇಧ ವಿಧಿಸಲಾಗಿದೆ. ಬೆಂಗಳೂರಿನ ಔಟರ್​ ರಿಂಗ್​​ ರೋಡ್​ನಲ್ಲಿ ಸಿಲುಕಿದ್ದ ಬೆಂಜ್ ಕಾರ್​ನಲ್ಲಿ ಮೂವರು ಹೊರಬರಲು ಪರದಾಡಿದರು. ಸಹಾಯ ಮಾಡುವಂತೆ ಸವಾರರು ಕೂಗುತ್ತಿರುವ ಘಟನೆ ಮಾರತ್ತಹಳ್ಳಿಯ ಔಟರ್​ ರಿಂಗ್​ ರೋಡ್​​ನಲ್ಲಿ ನಡೆದಿದೆ.

ಮಳೆಯಿಂದಾಗಿ ಸರ್ಜಾಪುರ, ಬೆಳ್ಳಂದೂರು ಮಾರತಹಳ್ಳಿ, ಔಟರ್ ರಿಂಗ್​ರೋಡ್​ಗಳಲ್ಲಿ ನೀರು ನಿಂತಿದೆ. ವಾಹನಗಳು ನಿಧಾನಗತಿಯಲ್ಲಿ ಸಾಗುತ್ತಿದ್ದು, ಇಂದೂ ಸಹ ಟ್ರಾಫಿಕ್ ಜಾಮ್ ಆಗಬಹುದು ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.

ವಿವಿಧ ಬಡಾವಣೆಗಳಲ್ಲಿ ಮುಂದುವರಿದ ಪರದಾಟ

ಬೆಂಗಳೂರಿನ ಸನ್ನಿ ಬ್ರೂಕ್ಸ್ ಲೇಔಟ್​ ಸಂಪೂರ್ಣವಾಗಿ ಜಲಾವೃತವಾಗಿದೆ. ನೀರಿನ ಪ್ರಮಣ ಇಂದು ಮತ್ತಷ್ಟು ಹೆಚ್ಚಾಗಿದ್ದು, ಜನರು ಲೇಔಟ್​ನಿಂದ ಹೊರಬರಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ. ಲೇಔಟ್ ಒಳಭಾಗದಲ್ಲಿ ಮನೆಗಳ ಮುಂದೆ ನಿಲ್ಲಿಸಿರುವ ಐಷಾರಾಮಿ ಕಾರುಗಳು ನೀರಿನಲ್ಲಿ ತೇಲುತ್ತಿವೆ. ಕೆಲವೆಡೆ ಮನೆಯೊಳಗಿನ ಸೋಪಾಗಳು ತೇಲಿ ಹೊರಗೆ ಬಂದಿವೆ. ತುರ್ತು ಕೆಲಸಗಳಿಗೆ ಟ್ರ್ಯಾಕ್ಟರ್ ಮೂಲಕ ನಿವಾಸಿಗಳು ಸಂಚರಿಸುತ್ತಿದ್ದಾರೆ. ಸರ್ಜಾಪುರ ರಸ್ತೆಯ ದಿ ಕಂಟ್ರೀಸೈಡ್ ಅಪಾರ್ಟ್​ಮೆಂಟ್ ಸಂಪೂರ್ಣ ಜಲಾವೃತಗೊಂಡಿದೆ. ರೈನ್ ಬ್ರೂ ಡ್ರೈವ್ ಬಡಾವಣೆ ಪಕ್ಕದ ಕಂಟ್ರಿಸೈಡ್ ಅಪಾರ್ಟಮೆಂಟ್​ನಲ್ಲಿ ಸುಮಾರು 5 ಅಡಿಯಷ್ಟು ನೀರು ನಿಂತಿದೆ.

ಇಕೋಸ್ಪೇಸ್ ಬಳಿಯ ಮಾರತಹಳ್ಳಿ-ಸರ್ಜಾಪುರ ಮಾರ್ಗದ ಎರಡೂ ಬದಿಯ ರಸ್ತೆ ಜಲಾವೃತಗೊಂಡಿದೆ. ನಿನ್ನೆ ಒಂದು ಭಾಗದ ರಸ್ತೆ ಮಾತ್ರ ಮಳೆ ನೀರಿನಿಂದ ಮುಳುಗಿತ್ತು. ಇಂದು ಎರಡು ಬದಿಯ ರಸ್ತೆ ಜಲಾವೃತಗೊಂಡಿದೆ. ರಸ್ತೆ ಮೇಲೆ ನೀರು ರಭಸವಾಗಿ ಹರಿಯುತ್ತಿದೆ. ವಿಭೂತಿಪುರ ಕೆರೆ, ಸಾವಳಕೆರೆಗಳು ಭರ್ತಿಯಾಗಿರುವುದರಿಂದ ನೀರು ರಸ್ತೆಗೆ ನುಗ್ಗುತ್ತಿದೆ.

Published On - 9:15 am, Tue, 6 September 22

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ