AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ರಾಜಧಾನಿ ಬೆಂಗಳೂರಿನಲ್ಲಿ ವರುಣನ ಅಬ್ಬರ, ಪಟ್ಟಗಾರ ಪಾಳ್ಯದಲ್ಲಿ ಆಳುದ್ದ ರಸ್ತೆ ಕುಸಿತ

ಬೆಂಗಳೂರಿನಲ್ಲಿ ವರುಣನ ಅಬ್ಬರ ಹೆಚ್ಚಾಗಿದೆ. ಪಟ್ಟಗಾರ ಪಾಳ್ಯ ಮುಖ್ಯರಸ್ತೆಯ ನಡು ರಸ್ತೆಯಲ್ಲಿ ಆಳುದ್ದ ರಸ್ತೆ ಕುಸಿದಿದೆ. ಕಳೆದ 15 ದಿನದಲ್ಲಿ ಇದು 5ನೇ ಪ್ರಕರಣ.

Bengaluru Rain: ರಾಜಧಾನಿ ಬೆಂಗಳೂರಿನಲ್ಲಿ ವರುಣನ ಅಬ್ಬರ, ಪಟ್ಟಗಾರ ಪಾಳ್ಯದಲ್ಲಿ ಆಳುದ್ದ ರಸ್ತೆ ಕುಸಿತ
ಪಟ್ಟಗಾರ ಪಾಳ್ಯದಲ್ಲಿ ಆಳುದ್ದ ರಸ್ತೆ ಕುಸಿತ
Follow us
TV9 Web
| Updated By: ಆಯೇಷಾ ಬಾನು

Updated on:Oct 20, 2022 | 11:34 AM

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವರುಣನ ಅಬ್ಬರ ಹೆಚ್ಚಾಗಿದೆ(Bengaluru Rain). ಕಳೆದ ಕೆಲ ದಿನಗಳಿಂದ ಬಿಟ್ಟು ಬಿಡದೆ ಮಳೆಯಾಗುತ್ತಿದ್ದು ಭಾರಿ ಅವಾಂತರಗಳು ಸೃಷ್ಟಿಯಾಗಿವೆ. ಸದ್ಯ ಈಗ ಬೆಂಗಳೂರಲ್ಲಿ ಮತ್ತೊಂದು ರಸ್ತೆ ಕುಸಿದಿದೆ(Road Collapse). ನಿನ್ನೆ ಸಂಜೆ ಪಟ್ಟಗಾರ ಪಾಳ್ಯ ಮುಖ್ಯರಸ್ತೆಯ ನಡು ರಸ್ತೆಯಲ್ಲಿ ಆಳುದ್ದ ರಸ್ತೆ ಕುಸಿದಿದೆ. ಕಳೆದ 15 ದಿನದಲ್ಲಿ ಇದು 5ನೇ ಪ್ರಕರಣ. ಸದ್ಯ ರಸ್ತೆ ಕುಸಿದಿರುವ ಜಾಗದಲ್ಲಿ ಬ್ಯಾರಿಕೇಡ್ ಹಾಕಲಾಗಿದ್ದು ರಾತ್ರಿ ಮಳೆ ನೀರು ಬಿದ್ದು ಸುರಂಗ ಸೃಷ್ಟಿಯಾಗಿದೆ. ಜೊತೆಗೆ ಶೇಷಾದ್ರಿಪುರಂ ಪೊಲೀಸ್ ಠಾಣೆ ಎದುರಿನ ರಸ್ತೆಯಲ್ಲಿ ಗುಂಡಿ ಬಿದ್ದಿದೆ. ಆನಂದ್ ರಾವ್ ಸರ್ಕಲ್​ಗೆ ಸಂಪರ್ಕ‌ ಕಲ್ಪಿಸುವ ರಸ್ತೆ ಧಾರಾಕಾರ ಮಳೆಗೆ ಕಿತ್ತುಕೊಂಡು ಬಂದಿದೆ.

ಶಿವಾನಂದ ರೈಲ್ವೆ ಅಂಡರ್ ಪಾಸ್ ಬಳಿ ಕೊಚ್ಚಿ ಹೋದ ರಸ್ತೆ

ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಯಿಂದಾಗಿ ಶಿವಾನಂದ ರೈಲ್ವೆ ಅಂಡರ್ ಪಾಸ್ ಬಳಿ 100 ಮೀಟರ್​ನಷ್ಟು ರಸ್ತೆ ಕೊಚ್ಚಿ ಹೋಗಿದೆ. ರಸ್ತೆಯಲ್ಲಿ ಸಂಚರಿಸಲು ವಾಹನ ಸವಾರರು ತೀವ್ರ ಪರದಾಡುತ್ತಿದ್ದು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ. ಅಲ್ಲದೆ ರಸ್ತೆ ಕಿತ್ತುಹೋಗಿದ್ದರಿಂದ ಬೈಕ್​ನಿಂದ ಬಿದ್ದು ಸವಾರನಿಗೆ ಗಾಯಗಳಾದ ಘಟನೆಯೂ ನಡೆದಿದೆ. ಶಾಲೆಗೆ ಮಗಳನ್ನು ಕರೆದುಕೊಂಡು ಹೋಗುತ್ತಿದ್ದ ತಂದೆಗೆ ಹಿಡಿತ ತಪ್ಪಿ ಬೈಕ್ ಸ್ಕಿಡ್ ಆಗಿದೆ. ಇದರಿಂದ ತಂದೆ-ಮಗಳಿಗೆ ಗಾಯಗಳಾಗಿವೆ. ಇದನ್ನೂ ಓದಿ: Rains in Bengaluru: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ, ಮಗಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಯತಪ್ಪಿ ಬಿದ್ದರು!

ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದ್ದೇನೆ -ಸಿಎಂ

ಇನ್ನು ಬೆಂಗಳೂರಿನಲ್ಲಿ ಮನೆಯಿಂದ ಆಗುತ್ತಿರುವ ಅವಾಂತರಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದ್ದೇನೆ. ಮಳೆಯಿಂದ ಬೆಂಗಳೂರಿನ 2 ಕ್ಷೇತ್ರಗಳಲ್ಲಿ ಸಮಸ್ಯೆ ಆಗಿತ್ತು. ಇಡೀ ಬೆಂಗಳೂರಿಗೆ ಸಮಸ್ಯೆ ಆಯ್ತು ಅನ್ನೋದು ಸರಿಯಲ್ಲ. ಏನೇ ಸಮಸ್ಯೆ ಆದ್ರೂ ಎದುರಿಸುವ ಸಾಮರ್ಥ್ಯ ಸರ್ಕಾರಕ್ಕಿದೆ. ಬೆಂಗಳೂರಿನಲ್ಲಿ ಮಳೆ ನಿರ್ವಹಣೆಗೆ SDRF​ ಬಲಪಡಿಸಿದ್ದೇವೆ. ನಿರಂತರ ಮಳೆಯಿಂದಾಗಿ ಬೆಂಗಳೂರಲ್ಲಿ ರಸ್ತೆ ಗುಂಡಿ ಸಮಸ್ಯೆ ಎದುರಾಗಿದೆ. ರಸ್ತೆ ಗುಂಡಿಗಳನ್ನು ಮುಚ್ಚಲು BBMP ಆಯುಕ್ತರಿಗೆ ತಿಳಿಸಿದ್ದೇನೆ ಎಂದರು.

ಮೊನ್ನೆ ಪ್ರವಾಹ ನಿರ್ವಹಣೆಯನ್ನು ನಮ್ಮ SDRF ತಂಡ ಸಮರ್ಥವಾಗಿ ನಿಭಾಯಿಸಿದೆ. ಇನ್ಮುಂದೆ ಯಾವುದೇ ಅವಘಡ ಆದರೂ ಅದನ್ನು ತಪ್ಪಿಸಲು ಕೆಲಸ ಮಾಡುತ್ತದೆ. ಪ್ರತಿ ಒಂದು ದಿನ 5000 ವಾಹನಗಳು ಬರ್ತವೆ. ಆದರೂ ಟ್ರಾಫಿಕ್ ಕ್ಲಿಯರ್ ಮಾಡಲು ಅಗತ್ಯ ಕ್ರಮಗಳನ್ನು ಪೊಲೀಸರು ಮಾಡ್ತಿದ್ದಾರೆ. 7500 ಸಿಸಿ ಕ್ಯಾಮರಾಗಳನ್ನು ಬೆಂಗಳೂರಿನಲ್ಲಿ ಅಳವಡಿಸುತ್ತಿದ್ದೇವೆ ಎಂದರು.

bng rain

ಅನುಗ್ರಹ ಲೇಔಟ್

ಭಾರಿ ಮಳೆಯಿಂದಾಗಿ ಅನುಗ್ರಹ ಲೇಔಟ್ ಜಲಾವೃತ

ಬಿಳೇಕಹಳ್ಳಿಯಿಂದ ಅನುಗ್ರಹ ಲೇಔಟ್​ಗೆ ಮಳೆ ನೀರು ನುಗ್ಗಿದ್ದು ಮನೆಯಿಂದ ಹೊರ ಬರಲಾಗದೆ ನಿವಾಸಿಗಳು ಪರದಾಡುತ್ತಿದ್ದಾರೆ. ಹಾಗೂ ಮನೆಯಿಂದ ನೀರು ಹೊರಹಾಕಲು ಹರಸಾಹಸ ಪಡುತ್ತಿರುವ ಘಟನೆ ಸಿಲಿಕಾನ್ ಸಿಟಿಯ ಅನುಗ್ರಹ ಲೇಔಟ್ ಮಂದಿಗೆ ಎದುರಾಗಿದೆ. ಇನ್ನು ಹೆಚ್​ಎಸ್​ಆರ್ ಲೇಔಟ್​ನಲ್ಲೂ ಇದೇ ಪರಿಸ್ಥಿತಿ ಇದ್ದು, ಮನೆಯ ಲಿಫ್ಟ್ ನಲ್ಲೆಲ್ಲ ಮಳೆ ನೀರು ಸುರಿಯುತ್ತಿದೆ. ಹೆಚ್ಎಸ್ಆರ್ ಲೇಔಟ್ ಆರು ಮತ್ತು ಏಳನೇ ಸೆಕ್ಟರ್​ನಲ್ಲಿನ ಮನೆಗಳ ಬೆಸ್ಮೆಂಟ್ ನಲ್ಲಿ ಐದಾರು ಅಡಿಗಳಷ್ಟು ನೀರು ನಿಲ್ಲುತ್ತಿದ್ದು ನಿವಾಸಿಗಳಿಗೆ ನರಕ ದರ್ಶನವಾಗುತ್ತಿದೆ. ಮನೆಗಳಿಗೆ ನೀರು ನುಗ್ಗಿದ್ದರಿಂದ ನಿವಾಸಿಗಳು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಮಳೆ ಬಂದಾಗಲೆಲ್ಲಾ 5-6 ಅಡಿಗಳಷ್ಟು ನೀರು ನಿಲ್ಲುತ್ತದೆ. ಅವೈಜ್ಞಾನಿಕ ಚರಂಡಿ ಕಾಮಗಾರಿಯಿಂದ ಹೀಗಾಗುತ್ತಿದೆ. ಮಳೆ ಬಂದ್ರೆ ಬೇಸ್​ಮೆಂಟ್​ನಲ್ಲಿ​​ ಯಾವ ವಸ್ತು ಇಡಲು ಆಗಲ್ಲ ಎಂದು ಅಧಿಕಾರಿಗಳ ವಿರುದ್ಧ ನಿವಾಸಿ ಮನ್ಸೂರ್ ಆಕ್ರೋಶ ಹೊರಹಾಕಿದ್ದಾರೆ.

ಮಳೆಯಿಂದ ಬೇಸತ್ತು ಬ್ಯಾಂಕನ್ನೇ ಶಿಫ್ಟ್​ ಮಾಡಲು ನಿರ್ಧಾರ

ರೈನ್ ಬೋ ಡ್ರೈವ್ ಲೇಔಟ್ ನಲ್ಲಿ ಮಳೆ ನೀರು ನಿಂತಿದ್ದು ಮಳೆ ನೀರಿನಲ್ಲೇ ಜನರು ಓಡಾಡುವಂತಾಗಿದೆ. ಪದೇ ಪದೇ ಲೇಔಟ್ ಒಳಗೆ ಮಳೆ ನೀರು ನುಗ್ಗತ್ತಿರುವ ಹಿನ್ನೆಲೆ ಲೇಔಟ್ ಒಳಗಿದ್ದ ಬ್ಯಾಂಕ್ ಶಿಫ್ಟ್ ಮಾಡಲು ತೀರ್ಮಾನಿಸಲಾಗಿದೆ.

Published On - 10:59 am, Thu, 20 October 22

ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ