AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಇಂದೂ ನಗರದಲ್ಲಿ ಭರ್ಜರಿ ಮಳೆ, ಇನ್ನೆರಡು ದಿನ ಬೆಂಗಳೂರು ಸೇರಿದಂತೆ ಹಲವು ಕಡೆ ಮಳೆ ಮುಂದುವರಿಯುವ ಸಾಧ್ಯತೆ

Bangalore Rain Updates: ಮಾರ್ಚ್ 24ರ ತನಕ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Bengaluru Rain: ಇಂದೂ ನಗರದಲ್ಲಿ ಭರ್ಜರಿ ಮಳೆ, ಇನ್ನೆರಡು ದಿನ ಬೆಂಗಳೂರು ಸೇರಿದಂತೆ ಹಲವು ಕಡೆ ಮಳೆ ಮುಂದುವರಿಯುವ ಸಾಧ್ಯತೆ
ಬೆಂಗಳೂರು ಮಳೆ
TV9 Web
| Edited By: |

Updated on:Mar 22, 2022 | 7:35 PM

Share

ಬೆಂಗಳೂರು: ಕಳೆದ ಕೆಲ ದಿನಗಳಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆರಾಯನ ದರ್ಶನವಾಗುತ್ತಿದೆ. ಅಸಾನಿ ಚಂಡಮಾರುತದ(Cyclone Asani) ಎಫೆಕ್ಟ್ನಿಂದಾಗಿ ಬೆಂಗಳೂರಿನಲ್ಲಿ ಸಂಜೆಯಾಯ್ತು ಅಂದ್ರೆ ಸಾಕು ಮಳೆ ಶುರುವಾಗುತ್ತಿದೆ. ನಿನ್ನೆ, ಮೊನ್ನೆ ಕೂಡ ರಾಜಧಾನಿಯಲ್ಲಿ ಕೊಂಚ ಮಳೆಯಾಗಿತ್ತು. ಸದ್ಯ ಬಿಸಿಲಿನಿಂದ ಬಸವಳಿದ ಭೂಮಿಗೆ ಮಳೆರಾಯ ಕೊಂಚ ತಂಪೆರೆದಿದ್ದು ದಿಢೀರನೆ ಕಾಣಿಸಿಕೊಂಡ ಮಳೆಯಿಂದ ವಾಹನ ಸವಾರರು ಪರದಾಡುವಂತಾಗಿದೆ.

ಬಂಗಾಳಕೊಲ್ಲಿಯಲ್ಲಿ ಅಸಾನಿ ಚಂಡಮಾರುತದ ಎಫೆಕ್ಟ್ನಿಂದ ನಗರದೆಲ್ಲೆಡೆ ಮಳೆ ಆರ್ಭಟ ಶುರುವಾಗಿದೆ. ಮೆಜೆಸ್ಟಿಕ್, ಕೆ.ಆರ್ ಮಾರ್ಕೆಟ್, ಗಿರಿನಗರ, ಬಸವನಗುಡಿ, ಲಾಲ್ಬಾಗ್, ಯಶವಂತಪುರ, ಮಲ್ಲೇಶ್ವರ ಸೇರಿ ನಗರದ ಹಲವೆಡೆ ಗಾಳಿ ಸಹಿತ ಮಳೆ ಸುರಿಯುತ್ತಿದೆ. ಮಾರ್ಚ್ 24ರ ತನಕ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಶುರುವಾಗಲಿದೆ ಅಸಾನಿ ಅಬ್ಬರ ಅಸಾನಿ ಚಂಡಮಾರುತದ ಅಬ್ಬರ ಶುರುವಾಗಲಿದ್ದು, ಇದರ ಪರಿಣಾಮವಾಗಿ ಕರ್ನಾಟಕ, ತಮಿಳುನಾಡು, ಕೇರಳ, ಮಹಾರಾಷ್ಟ್ರ ಸೇರಿದಂತೆ ಭಾರತದ ಅನೇಕ ರಾಜ್ಯಗಳಲ್ಲೂ ವ್ಯಾಪಕ ಮಳೆಯಾಗಲಿದೆ. ಈಗಾಗಲೇ ಅಸಾನಿ ಚಂಡಮಾರುತದ ಪರಿಣಾಮ ಹೆಚ್ಚಾಗುವ ಆತಂಕವಿರುವ ಪ್ರದೇಶಗಳಲ್ಲಿ ಹಡಗುಗಳು, ವಿಮಾನಗಳು, ಹೆಲಿಕಾಪ್ಟರ್‌ಗಳು, ಡೈವಿಂಗ್ ಮತ್ತು ವಿಪತ್ತು ಪರಿಹಾರ ತಂಡಗಳು ಸಿದ್ಧವಾಗಿವೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಸುಮಾರು 100 ಸಿಬ್ಬಂದಿಯನ್ನು ಅಸಾನಿ ಚಂಡಮಾರುತದ ಹಿನ್ನೆಲೆಯಲ್ಲಿ ನಿಯೋಜಿಸಲಾಗಿದೆ. ಇಂದಿನಿಂದ 3 ದಿನಗಳ ಕಾಲ ಕೇರಳ, ಮಾಹೆ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ಕರ್ನಾಟಕದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ತಮಿಳುನಾಡು, ಕರ್ನಾಟಕದ ಕೆಲವೆಡೆ ಮಳೆ ಹೆಚ್ಚಾಗಿದೆ.

ಇನ್ನೆರಡು ದಿನ ಪಶ್ಚಿಮ ಹಿಮಾಲಯ ಪ್ರದೇಶದ ಮೇಲೆ ಚದುರಿದ ಮಳೆ ಹಾಗೂ ಹಿಮಪಾತವಾಗಲಿದೆ. ಮಾರ್ಚ್ 22ರವರೆಗೆ ರಾಯಲಸೀಮಾ ಮತ್ತು ಆಂಧ್ರ ಪ್ರದೇಶದ ಕರಾವಳಿ ಪ್ರದೇಶದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಇಂದಿನಿಂದ ಈಶಾನ್ಯ ಭಾರತದಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಬಂಗಾಳ ಕೊಲ್ಲಿಗೆ ಮೀನುಗಾರಿಕೆಗೆ ಹೋಗದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಮಾರ್ಚ್ 22ರವರೆಗೆ ಅಂಡಮಾನ್ ಸಮುದ್ರಕ್ಕೆ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ತೀರಕ್ಕೆ ಕೂಡ ಇಳಿಯದಂತೆ ಸೂಚಿಸಲಾಗಿದೆ.

ಅಸಾನಿ ಚಂಡಮಾರುತದ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ. ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಮತ್ತು ದಕ್ಷಿಣ ಅಂಡಮಾನ್ ಸಮುದ್ರಕ್ಕೆ ಹೊಂದಿಕೊಂಡಂತೆ ಗುರುತಿಸಲಾದ ಕಡಿಮೆ ಒತ್ತಡದ ಪ್ರದೇಶವು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಉದ್ದಕ್ಕೂ ಮತ್ತು ಉತ್ತರಕ್ಕೆ ಚಲಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ಅಸಾನಿ ಚಂಡಮಾರುತವನ್ನು ಎದುರಿಸಲು ಸಿದ್ಧತೆಗಳು ನಡೆದಿವೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಎನ್​ಡಿಆರ್​ಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ಪಾದಯಾತ್ರೆ ನಾಟಕ ಮಾಡುವ ಕಾಂಗ್ರೆಸ್ಸಿಗರಿಗೆ ಮಿತ್ರಪಕ್ಷ ಡಿಎಂಕೆ ಮನವೊಲಿಸುವ ಧೈರ್ಯವಿಲ್ಲವೇ? -ಸಚಿವ ಸುಧಾಕರ್ ಮಾರ್ಮಿಕ ಪ್ರಶ್ನೆ

Bengaluru Rain: ಅಸಾನಿ ಚಂಡಮಾರುತದ ಪ್ರಭಾವ; ಬೆಂಗಳೂರು ನಗರದ ಹಲವೆಡೆ ಗಾಳಿ ಸಹಿತ ಮಳೆ

Published On - 7:30 pm, Tue, 22 March 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!