
ಬೆಂಗಳೂರು: ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಿದ್ದು, ಮುಂದಿನ 2ರಿಂದ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ (Bangalore Rains) ಇಂದಿನಿಂದ 2 ದಿನ ಮಳೆ ಹೆಚ್ಚಾಗುವುದರಿಂದ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು (ಜೂನ್ 2) ನೈಋತ್ಯ ಮಾನ್ಸೂನ್ (Monsoon) ಕರ್ನಾಟಕದ ಇನ್ನಷ್ಟು ಭಾಗಗಳಿಗೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಿಗೆ ಹಳದಿ ಅಲರ್ಟ್ (Yellow Alert) ಘೋಷಿಸಿದೆ.
ಮುಂಗಾರು ಆಗಮನದಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೊಡಗು, ಹಾಸನ ಜಿಲ್ಲೆಯಲ್ಲೂ ಧಾರಾಕಾರ ಮಳೆಯ ಮುನ್ಸೂಚನೆ ನೀಡಲಾಗಿದೆ. ಇನ್ನೆರಡು ದಿನ ರಾಜ್ಯಾದ್ಯಂತ ಮಳೆಯ ಜೊತೆಗೆ ಗುಡುಗು, ಸಿಡಿಲು ಮಿಂಚಿನ ಎಚ್ಚರಿಕೆಯನ್ನೂ ನೀಡಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ ಉತ್ತರ ಕನ್ನಡ, ಕರಾವಳಿ ಜಿಲ್ಲೆಗಳು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಶಿವಮೊಗ್ಗ, ರಾಮನಗರ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಬೆಂಗಳೂರು ಜೂನ್ 3-4ರಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ನೈಋತ್ಯ ಮಾನ್ಸೂನ್ ಮಧ್ಯ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಕರ್ನಾಟಕದ ಕೆಲವು ಭಾಗಗಳು, ಸಂಪೂರ್ಣ ಕೇರಳ, ತಮಿಳುನಾಡಿನ ಕೆಲವು ಭಾಗಗಳಲ್ಲಿ ಮುಂದುವರೆದಿದೆ. ನಿನ್ನೆ ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಿದ್ದು, ಇಂದಿನಿಂದ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಲಿದೆ.
ಇದನ್ನೂ ಓದಿ: Karnataka Rain: ಇಂದಿನಿಂದ ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆ ಶುರು; ನಾಳೆ ಮುಂಗಾರು ಪ್ರವೇಶ
ಹವಾಮಾನ ಇಲಾಖೆಯ ಇತ್ತೀಚಿನ ಮುನ್ಸೂಚನೆಯ ಪ್ರಕಾರ, ಉತ್ತರ ಕನ್ನಡ, ಕರಾವಳಿ ಜಿಲ್ಲೆಗಳು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಶಿವಮೊಗ್ಗ, ರಾಮನಗರ, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಮತ್ತು ಜೂನ್ 3ರಂದು ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಬಾಗಲಕೋಟೆ, ಬೀದರ್, ಗದಗ, ಕೊಪ್ಪಳ, ರಾಯಚೂರು ಜಿಲ್ಲೆ ಹೊರತು ಪಡಿಸಿ ಉಳಿದೆಡೆ ಮಳೆಯಾಗಲಿದೆ. ಜೂನ್ 3ರಿಂದ 4ರವರೆಗೆ ಗುಡುಗು ಸಹಿತ ಹಗುರದಿಂದ ಮಧ್ಯಮ ಮಳೆಯಾಗುವ ಮುನ್ಸೂಚನೆಯಿದ್ದು, ಕನಿಷ್ಠ ತಾಪಮಾನವು 21 ಡಿಗ್ರಿ ಸೆಲ್ಸಿಯಸ್ನಷ್ಟಿರುತ್ತದೆ.
ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:18 am, Thu, 2 June 22