AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rain: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ

ಬೆಂಗಳೂರು ಮಳೆ ಹವಾಮಾನ: ಬೆಂಗಳೂರು ನಗರದಲ್ಲಿ ಮತ್ತೆ ವರುಣನ ಅಬ್ಬರಿಸಿದೆ. ಗುಡುಗು, ಬಿರುಗಾಳಿ ಸಹಿತ ನಗರದ ಹಲವೆಡೆ ಧಾರಾಕಾರ ಮಳೆ ಸುರಿದೆ. ಸಂಜೆಯಾಗುತ್ತಿದ್ದಂತೆ ಸುರಿದ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಸ್ತೆ ತುಂಬೆ ಮಳೆ ನೀರು ತುಂಬಿಕೊಂಡು ವಾಹನ ಸವಾರರು ಪರದಾಡುವಂತಾಗಿದೆ.

Bangalore Rain: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ
ಮಳೆImage Credit source: tv9 kannada
ಶಿವಪ್ರಸಾದ್​ ಬಿ.
| Edited By: |

Updated on:May 01, 2026 | 7:25 PM

Share

ಬೆಂಗಳೂರು, ಮೇ 01: ಮೊನ್ನೆಯಷ್ಟೇ ಜಸ್ಟ್ 1 ಗಂಟೆ ಸುರಿದ ಮಳೆಗೆ ರಾಜಧಾನಿ ಅಕ್ಷರಶಃ ತತ್ತರಿಸಿ ಹೋಗಿತ್ತು. ನಿನ್ನೆ ಮೋಡ ಕವಿದ ವಾತಾವರಣವಿದ್ದರು ಮಳೆ (Rain) ಆಗಿರಲಿಲ್ಲ. ಆದರೆ ಇಂದು ಬೆಂಗಳೂರಿಗೆ (Bangaluru) ಮತ್ತೆ ವರುಣನ ಎಂಟ್ರಿ ಆಗಿದ್ದು, ನಗರದಾದ್ಯಂತ ಆರ್ಭಟ ಜೋರಾಗಿದೆ. ಸಂಜೆಯಾಗುತ್ತಿದ್ದಂತೆ ಶುರುವಾದ ಧಾರಾಕಾರ ಮಳೆಗೆ ರಸ್ತೆಗಳಲ್ಲಿ ನೀರು ತುಂಬಿಕೊಂಡಿದೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಇನ್ನು ಕೆಲಸ ಮುಗಿಸಿ ಮನೆಗೆ ಮರಳುವ ಹೊತ್ತಿನಲ್ಲೇ ಸುರಿದ ಮಳೆಗೆ ಸಿಟಿ ಮಂದಿ ಹಿಡಿಶಾಪ ಕೂಡ ಹಾಕುವಂತಾಗಿದೆ.

ಎಲ್ಲೆಲ್ಲಿ ಮಳೆ?

ವಸಂತನಗರ, ಸಿಟಿ ಮಾರ್ಕೆಟ್, ಮೆಜೆಸ್ಟಿಕ್, ಶಾಂತಿನಗರ, ಜಯನಗರ, ಜೆಪಿ ನಗರ, ಬನಶಂಕರಿ, ಕೋಣನಕುಂಟೆ, ಹೆಬ್ಬಾಳ, ಯಲಹಂಕ, ಸದಾಶಿವನಗರ, ರಾಜಾಜಿನಗರ, ವಿಜಯನಗರ, ಚಂದ್ರಲೇಔಟ್, ಇಂದಿರಾನಗರ, ಲಗ್ಗೆರೆ, ನಂದಿನಿಲೇಔಟ್, ಆಡುಗೋಡಿ, ಕೋರಮಂಗಲ, ಕಾರ್ಪೊರೇಷನ್, ಮಹಾಲಕ್ಷ್ಮಿ ಲೇಔಟ್, ಸುಬ್ರಮಣ್ಯ ನಗರ, ನಾಗರಬಾವಿ,  ಮೂಡಲಪಾಳ್ಯ, ಗಿರಿನಗರ, ಬಸವನಗುಡಿ, ಮಲ್ಲೇಶ್ವರಂ, ರಿಚ್ಮಂಡ್ ಟೌನ್, ಟ್ರಿನಿಟಿ, ಎಂಜಿ ರಸ್ತೆ, ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಫ್ರೀಡಂ ಪಾರ್ಕ್ ಮತ್ತು ಟೌನ್ ಹಾಲ್ ಸುತ್ತಮುತ್ತ ಜೋರು ಮಳೆ ಸುರಿಯುತ್ತಿದೆ.

ರಸ್ತೆ ತುಂಬೆಲ್ಲಾ ಮಳೆ ನೀರು: ಸವಾರರು ಪರದಾಟ

ಬೆಂಗಳೂರಿನೆಲ್ಲೆಡೆ ವರುಣನ ಅಬ್ಬರದಿಂದಾಗಿ ಫ್ರೀಡಂ ಪಾರ್ಕ್ ಬಳಿಯ ಶೇಷಾದ್ರಿ ರೋಡ್ ಜಲಾವೃತಗೊಂಡಿದೆ. ಹೀಗಾಗಿ ಮಳೆ ನೀರಿನಲ್ಲಿಯೇ ವಾಹನಗಳು ಸಂಚರಿಸುತ್ತಿವೆ. ಕೆಆರ್​ ಮಾರುಕಟ್ಟೆ ರಸ್ತೆ ಕೂಡ ಮಳೆಗೆ ಮಿನಿ ಕೆರೆಯಾಗಿದ್ದು, ರಸ್ತೆ ತುಂಬಾ ಮಳೆ ನೀರು ತುಂಬಿಕೊಂಡಿದೆ. ಅದೇ ರೀತಿಯಾಗಿ ಎಸ್​​ಪಿ ರಸ್ತೆ ಸುತ್ತ ಕೂಡ ರಸ್ತೆಯಲ್ಲಿ ಮಳೆ ನೀರು ನಿಂತುಕೊಂಡಿದ್ದು, ಸಂಚಾರ ಅಸ್ತವ್ಯಸ್ತ ಉಂಟಾಗಿದೆ.

ಗಾಳಿ ಸಹಿತ ಮಳೆಗೆ ಅವಾಂತರ: ಕುಸಿದ ಸೀಟ್​ಗಳು, ವಾಹನಗಳು ಜಖಂ

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಗಾಳಿ ಸಹಿತ ಮಳೆಗೆ ಅವಾಂತರ ಸಂಭವಿಸಿದೆ. ಟೊಮೆಟೊ ಮಂಡಿಗಳ ಮೇಲೆ ಹಾಕಿದ್ದ ಸೀಟ್​ಗಳು ಕುಸಿದು ವಾಹನಗಳು ಜಖಂಗೊಂಡಿವೆ. ಬಿರುಗಾಳಿಗೆ ಕೆಲವೆಡೆ ಸೀಟ್​ಗಳು ಹಾರಿಹೋಗಿವೆ. ಬಾಗೇಪಲ್ಲಿ ಪಟ್ಟಣದ ಕೆ.ಎಚ್.ಬಿ ಕಾಲೋನಿ ಬಳಿ ನಿರ್ಮಿಸಿರುವ ಟೊಮೆಟೊ ಮಾರುಕಟ್ಟೆಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:43 pm, Fri, 1 May 26

Follow Us
ಒಳ್ಳೆಯ ಸಿನಿಮಾಕ್ಕಾಗಿ ನನ್ನ ಬಳಿ ಸಾಕಷ್ಟು ಹಣ ಇದೆ: ನಿರ್ಮಾಪಕ ವೆಂಕಟ್
ಒಳ್ಳೆಯ ಸಿನಿಮಾಕ್ಕಾಗಿ ನನ್ನ ಬಳಿ ಸಾಕಷ್ಟು ಹಣ ಇದೆ: ನಿರ್ಮಾಪಕ ವೆಂಕಟ್
ಟಾಕ್ಸಿಕ್ ಟ್ರೇಲರ್​: ‘ನಾನೇ ಸಿನಿಮಾ ಮಾಡಿದಷ್ಟು ಖುಷಿಯಾಯ್ತು’ ಎಂದ ಶಿವಣ್ಣ
ಟಾಕ್ಸಿಕ್ ಟ್ರೇಲರ್​: ‘ನಾನೇ ಸಿನಿಮಾ ಮಾಡಿದಷ್ಟು ಖುಷಿಯಾಯ್ತು’ ಎಂದ ಶಿವಣ್ಣ
‘ನನ್ನ ಜೀವನದ ಸ್ಮರಣೀಯ ಅನುಭವ’: ಟಾಕ್ಸಿಕ್ ಚಿತ್ರದ ಬಗ್ಗೆ ನಟ ಅಕ್ಷಯ್ ಓಬೆರಾ
‘ನನ್ನ ಜೀವನದ ಸ್ಮರಣೀಯ ಅನುಭವ’: ಟಾಕ್ಸಿಕ್ ಚಿತ್ರದ ಬಗ್ಗೆ ನಟ ಅಕ್ಷಯ್ ಓಬೆರಾ
‘ಆಲ್​ ದಿ ಬೆಸ್ಟ್​ ಟಾಕ್ಸಿಕ್’: ಟ್ರೈಲರ್​ ಲಾಂಚ್ ಮಾಡಿದ ಶಿವಣ್ಣ
‘ಆಲ್​ ದಿ ಬೆಸ್ಟ್​ ಟಾಕ್ಸಿಕ್’: ಟ್ರೈಲರ್​ ಲಾಂಚ್ ಮಾಡಿದ ಶಿವಣ್ಣ
LIVE: ‘ಟಾಕ್ಸಿಕ್’ ಸಿನಿಮಾ ಟ್ರೈಲರ್ ಬಿಡುಗಡೆ ಇವೆಂಟ್ ಲೈವ್ ಇಲ್ಲಿ ನೋಡಿ
LIVE: ‘ಟಾಕ್ಸಿಕ್’ ಸಿನಿಮಾ ಟ್ರೈಲರ್ ಬಿಡುಗಡೆ ಇವೆಂಟ್ ಲೈವ್ ಇಲ್ಲಿ ನೋಡಿ
ಸಚಿವರನ್ನು ಬರಮಾಡಿಕೊಳ್ಳುವ ಭರದಲ್ಲಿ 1 ಲಕ್ಷ ರೂ. ಕಳೆದುಕೊಂಡ ಅಭಿಮಾನಿ
ಸಚಿವರನ್ನು ಬರಮಾಡಿಕೊಳ್ಳುವ ಭರದಲ್ಲಿ 1 ಲಕ್ಷ ರೂ. ಕಳೆದುಕೊಂಡ ಅಭಿಮಾನಿ
ಭಾರತದಲ್ಲಿ ಸ್ವಾವಲಂಬನೆಯ ನವ ಯುಗ ಆರಂಭ ಎಂದ ಪ್ರಧಾನಿ ಮೋದಿ
ಭಾರತದಲ್ಲಿ ಸ್ವಾವಲಂಬನೆಯ ನವ ಯುಗ ಆರಂಭ ಎಂದ ಪ್ರಧಾನಿ ಮೋದಿ
ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ: ಈ ಬಗ್ಗೆ ಗೃಹ ಸಚಿವ ಹೇಳಿದ್ದೇನು?
ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ: ಈ ಬಗ್ಗೆ ಗೃಹ ಸಚಿವ ಹೇಳಿದ್ದೇನು?
ನೂತನ ಸಚಿವ ಕೆ.ಎಸ್. ಬಸವಂತಪ್ಪ ಅಭಯ
ನೂತನ ಸಚಿವ ಕೆ.ಎಸ್. ಬಸವಂತಪ್ಪ ಅಭಯ
‘ಟಾಕ್ಸಿಕ್’ ಟ್ರೈಲರ್​​ಗೆ ಕ್ಷಣಗಣನೆ, ಹೇಗಿದೆ ಸಿದ್ಧತೆ: ವಿಡಿಯೋ ನೋಡಿ
‘ಟಾಕ್ಸಿಕ್’ ಟ್ರೈಲರ್​​ಗೆ ಕ್ಷಣಗಣನೆ, ಹೇಗಿದೆ ಸಿದ್ಧತೆ: ವಿಡಿಯೋ ನೋಡಿ