
ಬೆಂಗಳೂರು, ಮೇ 19: ಬೆಂಗಳೂರು ಮಹಾನಗರದಲ್ಲಿ ಕಳೆದ ರಾತ್ರಿ ಸುರಿದ ಮಳೆಗೆ (Bengaluru Rain) ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಬೆಂಗಳೂರಿನ (Bengaluru Rain) ತಗ್ಗು ಪ್ರದೇಶಗಳಲ್ಲಿ ನೀರು ತುಂಬಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ರಾಜಕಾಲುವೆಯಲ್ಲಿ ಸಮರ್ಪಕವಾಗಿ ನೀರು ಹರಿಯದೆ ಬಡಾವಣೆಗಳು ಜಲಾವೃತಗೊಂಡಿವೆ. ರಸ್ತೆಗಳಲ್ಲಿ ಮರಗಳು ಬಿದ್ದಿದ್ದು, ನೀರಲ್ಲಿ ಮುಳಗಡೆಯಾಗಿರುವ ವಾಹನಗಳು ಕೆಟ್ಟು ನಿಂತಿವೆ. ಟ್ರಾಫಿಕ್ ಜಾಮ್ ಉಂಟಾಗಿದೆ. ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದೆ. ತೊಂದರೆಗೊಳಗಾದವರನ್ನು ಅಧಿಕಾರಿಗಳು ಸರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದಾರೆ.
ಕಳೆದ ರಾತ್ರಿ ಸುರಿದ ಮಳೆಯಿಂದ ಇಷ್ಟೆಲ್ಲಾ ಅವಾಂತರಗಳು ಸೃಷ್ಟಿಯಾಗಿದ್ದು, ಜನಜೀವನ ಹದಗೆಟ್ಟಿದೆ. ಸಾರ್ವಜನಿಕರು ಸರ್ಕಾರದ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಇನ್ನು, ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಇದೇನಾ ನಿಮ್ಮ ಗ್ರೇಟರ್ ಬೆಂಗಳೂರು? ಇದೇನಾ ನಿಮ್ಮ ಬ್ರ್ಯಾಂಡ್ ಬೆಂಗಳೂರು? ಎಂದು ಪ್ರಶ್ನಿಸುತ್ತಿದ್ದಾರೆ.
ಬೆಂಗಳೂರಿನ ರಸ್ತೆಗಳು ನದಿಯಂತಾಗಿವೆ. ಇದರಿಂದ ವಾಹನ ಸವಾರರು ಪರದಾಡುತ್ತಿದ್ದಾರೆ. ಈ ವಿಚಾರವಾಗಿ ಸಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಲಾಗಿದೆ. ಈ ವಿಡಿಯೋವನ್ನು ಎಐ ತಂತ್ರಜ್ಞಾನ ಸಹಾಯದಿಂದ ಎಡಿಟ್ ಮಾಡಲಾಗಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ಲೇ ಕಾರ್ಡ್ ಹಿಡಿದು ಸರ್ಫ್ ರೇಡ್ ಮಾಡುತ್ತಿರುವಂತೆ ಎಡಿಟ್ ಮಾಡಲಾಗಿದೆ. ಪ್ಲೇ ಕಾರ್ಡ್ನಲ್ಲಿ ಬ್ರ್ಯಾಂಡ್ ಬೆಂಗಳೂರು ಅಂತ ಬರೆಯಲಾಗಿದೆ.
ಈ ಪೋಸ್ಟ್ಗೆ ಕ್ಯಾಪ್ಷನ್ ಬರೆಯಲಾಗಿದ್ದು, “ಸರ್ಫ್ ರೈಡ್ ಅನುಭವ ಪಡೆಯಲು ಬೆಂಗಳೂರಿನ ಜನರು ಕರಾವಳಿಗೆ ಹೋಗುವ ಅವಶ್ಯಕತೆ ಇಲ್ಲ. ಕಾಂಗ್ರೆಸ್ ಸರ್ಕಾರವು ತನ್ನ ಪ್ರೀತಿಯ ಸ್ನೇಹಿತ ಪಾಕಿಸ್ತಾನದ ಕನಸು ಬೆಂಗಳೂರು ಪೋರ್ಟ್ ಅನ್ನು ನನಸು ಮಾಡುತ್ತಿದೆ” ಎಂದು ಕ್ಯಾಪ್ಷನ್ ಬರೆದಿದ್ದಾರೆ.
ಇದನ್ನೂ ಓದಿ: ಬೆಂಗಳೂರು ಮಳೆ ಸೃಷ್ಟಿಸಿದ ಅಧ್ವಾನ ಒಂದೆರಡಲ್ಲ; ಎಲ್ಲೆಲ್ಲಿ ಏನೇನಾಯ್ತು ನೋಡಿ!
ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನ ಸಂದರ್ಭದಲ್ಲಿ ಪಾಕಿಸ್ತಾನ ಸೇನೆಯ ದಾಳಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿತ್ತು. ಭಾರತೀಯ ಸೇನೆ ಪಾಕಿಸ್ತಾನದ ಹಲವು ಸೇನಾ ನೆಲೆಗಳನ್ನು ಧ್ವಂಸ ಮಾಡಿತ್ತು. ಈ ಸಂದರ್ಭದಲ್ಲಿ ಪಾಕಿಸ್ತಾನದ ಟ್ಟಿಟರ್ ಖಾತೆಯ ಮೂಲಕ ವ್ಯಕ್ತಿಯೋರ್ವ ಭಾರತದ ದಾಳಿಗೆ ಪಾಕ್ ಸಮರ್ಥ ಉತ್ತರ ಕೊಟ್ಟಿದ್ದು, ಬೆಂಗಳೂರಿನ ಪೋರ್ಟ್ ಅನ್ನು ಧ್ವಂಸ ಮಾಡಲಾಗಿದೆ ಎಂದು ಟ್ವೀಟ್ ಮಾಡಿದ್ದನು.
Congratulations Pakistan on destroying the Bengaluru Port 👏
The entire world is shocked to see how they have breached the advanced defence interception systems in the Silk Board, Tin Factory, Hebbal, Goraguntepalya, Kengeri & Whitefield Naval Bases in India
Stay safe Bangalore pic.twitter.com/GQqrbVrKJj
— Karnataka Weather (@BengaluruRains_) May 10, 2025
ಇದು ಇಡೀ ಸಾಮಾಜಿಕ ಜಾಲತಾಣವನ್ನು ನಗೆಗಡಲಲ್ಲಿ ತೇಲಿಸಿತ್ತು. ಇದೀಗ, ಪಾಕಿಸ್ತಾನದ ನೆಟ್ಟಿಗನ ಕನಸನ್ನು ಕಾಂಗ್ರೆಸ್ ಸರ್ಕಾರ ನನಸು ಮಾಡಿದೆ ಎಂದು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ.
Published On - 2:01 pm, Mon, 19 May 25