Bengaluru Rains: ಬೆಂಗಳೂರಿನಲ್ಲಿ ಬಿಸಿಲ ಝಳದ ಮಧ್ಯೆ ಮಳೆಯ ಸಿಂಚನ, ಮುಂದಿನ 48 ಗಂಟೆಗಳ ಕಾಲ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆ

Karnataka Weather Today: ಬೆಂಗಳೂರಿನಲ್ಲಿ ಬಿಸಿಲಿನ ಝಳ ಆರಂಭವಾಗುತ್ತಿದ್ದಂತೆಯೇ ಮಳೆಯ ಸಿಂಚನವಾಗಿದೆ. ನಗರದ ಹಲವು ಕಡೆಗಳಲ್ಲಿ ಸಾಧಾರಣ ಮಳೆ ಸುರಿದಿದೆ. ಮುಂದಿನ 48 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Bengaluru Rains: ಬೆಂಗಳೂರಿನಲ್ಲಿ ಬಿಸಿಲ ಝಳದ ಮಧ್ಯೆ ಮಳೆಯ ಸಿಂಚನ, ಮುಂದಿನ 48 ಗಂಟೆಗಳ ಕಾಲ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆ
ಮಳೆImage Credit source: Mint
Follow us
ನಯನಾ ರಾಜೀವ್
| Updated By: Digi Tech Desk

Updated on:Mar 17, 2023 | 9:40 AM

ಬೆಂಗಳೂರಿನಲ್ಲಿ ಬಿಸಿಲಿನ ಝಳ ಆರಂಭವಾಗುತ್ತಿದ್ದಂತೆಯೇ ಮಳೆಯ ಸಿಂಚನವಾಗಿದೆ. ನಗರದ ಹಲವು ಕಡೆಗಳಲ್ಲಿ ಸಾಧಾರಣ ಮಳೆ ಸುರಿದಿದೆ. ಮುಂದಿನ 48 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಗರದಲ್ಲಿ ಕಳೆದ ಎರಡು ಮೂರು ದಿನಗಳಿಂದ ಬಿಸಿಲಿನ ತಾಪ ಹೆಚ್ಚಿತ್ತು, ಮೋಡ ಕಾಣಿಸಿಕೊಂಡಿತ್ತು. ಸಂಜೆಯೇ ಹಲವು ಪ್ರದೇಶಗಳಲ್ಲಿ ತುಂತುರು ಮಳೆ ಶುರುವಾಗಿತ್ತು. ಕೆಂಗೇರಿ, ಕೋಣನಕುಂಟೆ, ರಾಜರಾಜೇಶ್ವರಿನಗರ, ಮಲ್ಲೇಶ್ವರ, ವಿದ್ಯಾರನ್ಯಪುರ, ರಾಜಾಜಿನಗರ, ವಿಜಯನಗರ, ಗಿರಿನಗರ, ಜಯನಗರ, ಶಿವಾಗಿನಗರ, ಎಂಜಿ ರಸ್ತೆ, ಗಾಂಧಿನಗರ ಸುತ್ತಮುತ್ತಲ ಪ್ರದೇಶಗಳಲ್ಲಿ ಮಳೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Chikkamagaluru: ಬಯಲುಸೀಮೆ ಭಾಗದಲ್ಲಿ ತಂಪೆರೆದ ಮಳೆರಾಯ: ಗುಡುಗು-ಸಿಡಿಲು ಸಹಿತ ಭಾರಿ ಮಳೆ

ನಿಪ್ಪಾಣಿ, ರಾಯ್​ಭಾಗ್, ಕಲಘಟಗಿ, ಎನ್​ಆರ್ ಪುರ, ಕಡೂರು, ಹರಪನಹಳ್ಳಿ, ಹೊನ್ನಾಳಿ, ಸುಬ್ರಹ್ಮಣ್ಯ, ಸಂಕೇಶ್ವರ, ಸಾವನೂರು, ಜಯಪುರ, ಬಾಳೆಹೊನ್ನೂರು, ಸಕಲೇಶಪುರ, ಶಿವಮೊಗ್ಗ, ಭದ್ರಾವತಿ, ಸಂತೆಬೆನ್ನೂರಿನಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ, ಮೈಸೂರಿನಲ್ಲಿ 12.6 ಡಿಗ್ರಿ ಸೆಲ್ಸಿಯಸ್​ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:17 am, Fri, 17 March 23