AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಕಪ್ಪುಗಟ್ಟಿದ ಆಕಾಶ, ಗುಡುಗು, ಬಿರುಗಾಳಿ, ಆಲಿಕಲ್ಲು ಮಳೆ; ಬೆಂಗಳೂರಿನಲ್ಲಿ ವರುಣನ ಆರ್ಭಟ ಶುರು

Bangalore Rains: ಇಂದು ಮಧ್ಯಾಹ್ನ 2 ಗಂಟೆಯಿಂದಲೇ ಬೆಂಗಳೂರಿನಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆ ಶುರುವಾಗಿದೆ. ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಗಿದೆ.

Bengaluru Rain: ಕಪ್ಪುಗಟ್ಟಿದ ಆಕಾಶ, ಗುಡುಗು, ಬಿರುಗಾಳಿ, ಆಲಿಕಲ್ಲು ಮಳೆ; ಬೆಂಗಳೂರಿನಲ್ಲಿ ವರುಣನ ಆರ್ಭಟ ಶುರು
ಬೆಂಗಳೂರು ಮಳೆ (ಫೋಟೋ- ಟ್ವಿಟ್ಟರ್)
TV9 Web
| Edited By: |

Updated on:May 05, 2022 | 3:19 PM

Share

Bangalore Rain: ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಸಂಜೆಯ ಬಳಿಕ ಮಳೆ ಸುರಿಯಲಾರಂಭಿಸಿದೆ. ಮೂರ್ನಾಲ್ಕು ದಿನಗಳಿಂದ ಸಂಜೆ ವೇಳೆ ಗುಡುಗು, ಮಿಂಚು ಸಹಿತ ಮಳೆಯಾಗುತ್ತಿದ್ದು, ಇಂದು ಮಧ್ಯಾಹ್ನದಿಂದ ವರುಣನ ಆರ್ಭಟ ಶುರುವಾಗಿದೆ. ಬೆಳಗಿನ ವೇಳೆ ಉರಿಬಿಸಿಲು ಜನರನ್ನು ಸುಸ್ತು ಹೊಡೆಸಿದರೆ ಸಂಜೆಯ ನಂತರ ಮಳೆಗಾಲದಲ್ಲಿ (Monsoon) ಸುರಿಯುವಂತೆ ಒಂದೇ ಸಮನೆ ಸುರಿಯುವ ಮಳೆರಾಯನ ಆರ್ಭಟಕ್ಕೆ ಜನರು ಕಂಗೆಟ್ಟಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆಯಿಂದಲೇ ಬೆಂಗಳೂರಿನಲ್ಲಿ (Bengaluru Rains) ಗುಡುಗು, ಬಿರುಗಾಳಿ ಸಹಿತ ಮಳೆ ಶುರುವಾಗಿದೆ. ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಗಿದೆ.

ಬೆಂಗಳೂರಿನ ಮಲ್ಲೇಶ್ವರಂ, ರಾಜಾಜಿನಗರ, ಶಿವಾಜಿನಗರ, ವಿಧಾನಸೌಧ, ಮೆಜೆಸ್ಟಿಕ್, ರೇಸ್​ಕೋರ್ಸ್ ರಸ್ತೆ, ಬಿಟಿಎಂ ಲೇಔಟ್, ಕೋರಮಂಗಲ, ಎಲೆಕ್ಟ್ರಾನಿಕ್ ಸಿಟಿ, ವೈಟ್​ಫೀಲ್ಡ್​ ಮಹದೇವಪುರ, ದೊಮ್ಮಲೂರು, ಜಯನಗರ, ಜೆಪಿ ನಗರ, ಬಸವನಗುಡಿ ಸುತ್ತಮುತ್ತ ಕಳೆದ ಒಂದು ಗಂಟೆಯಿಂದ ಧಾರಾಕಾರ ಮಳೆಯಾಗುತ್ತಿದೆ.

ಇದನ್ನೂ ಓದಿ
Image
Bengaluru Rain: ಬೆಂಗಳೂರು ಜನರೇ ಅಲರ್ಟ್! ಇಂದೂ ಸಹ ನಗರದಲ್ಲಿ ಮಳೆಯಾಗುವ ಸಾಧ್ಯತೆ
Image
Karnataka Rain: ಕರ್ನಾಟಕದ ಬೆಂಗಳೂರು, ಕರಾವಳಿಯಲ್ಲಿ ಇಂದು ಗುಡುಗು ಸಹಿತ ಮಳೆ ಸಾಧ್ಯತೆ
Image
Karnataka Rain: ಕರ್ನಾಟಕದಾದ್ಯಂತ ಇಂದು ಗುಡುಗು ಸಹಿತ ಮಳೆ ಸಾಧ್ಯತೆ; ಮೇ 5ರಿಂದ ಇನ್ನೂ ಹೆಚ್ಚಲಿದೆ ವರುಣನ ಅಬ್ಬರ

ಬೆಂಗಳೂರಿನಲ್ಲಿ ಇನ್ನೂ ಎರಡು ದಿನಗಳ ಕಾಲ ಗುಡುಗು, ಮಿಂಚು, ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ಬೆಳಿಗ್ಗೆ, ಮಧ್ಯಾಹ್ನ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಬಳಿಕ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದ್ದು, ಮೇ 9ರವರೆಗೆ ತುಂತುರು ಮಳೆ ಮುಂದುವರೆಯಲಿದೆ.

ಬೆಂಗಳೂರು ಮಾತ್ರವಲ್ಲದೆ ಕರಾವಳಿ, ಮಲೆನಾಡಿನಲ್ಲಿ ಕೂಡ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ ಮತ್ತು ಉತ್ತರ ಒಳನಾಡಿನಲ್ಲಿ ಕೂಡ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಉತ್ತಮ ಮಳೆಯಾಗುತ್ತಿದೆ.

ಇಂದಿನಿಂದ ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಳೆಯ ಕುರಿತು ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:17 pm, Thu, 5 May 22

ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ