ಅಲ್ಪ ಮಳೆಗೇ ಪತರುಗುಟ್ಟಿದ ಬೆಂಗಳೂರು: ಹೆಣ್ಣೂರು ಬಾಗಲೂರು ಮುಖ್ಯರಸ್ತೆಯಲ್ಲಿ ಹೊಳೆಯಂತೆ ಹರಿದ ನೀರು!, 3 ಕಿಲೋ ಮೀಟರ್ ಟ್ರಾಫಿಕ್ ಜಾಮ್
Bengaluru Rain: ಬೆಂಗಳೂರಿನಲ್ಲಿ ಸುರಿದ ಸಣ್ಣ ಮಳೆಗೆ ಹೆಣ್ಣೂರು ಬಾಗಲೂರು ಮುಖ್ಯರಸ್ತೆ ಜಲಾವೃತಗೊಂಡಿದ್ದು, ಸುಮಾರು 3 ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ತೀವ್ರ ಪರದಾಟ ನಡೆಸಿದ್ದಾರೆ. ಇತ್ತ ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದ್ದು, ಆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಮುಖ್ಯಾಂಶಗಳು
- ಮಧ್ಯಾಹ್ನದ ವೇಳೆಗೆ ಸುರಿದ ಸಣ್ಣ ಮಳೆಗೂ ಬೆಂಗಳೂರಿನಲ್ಲಿ ಅಧ್ವಾನ
- ಹೆಣ್ಣೂರು ಬಾಗಲೂರು ಮುಖ್ಯರಸ್ತೆಯಲ್ಲಿ ಹೊಳೆಯಂತೆ ಹರಿದ ನೀರು
- 3 ಕಿಲೋ ಮೀಟರ್ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ
ಬೆಂಗಳೂರು, ಜುಲೈ 22: ಮಧ್ಯಾಹ್ನದ ವೇಳೆಗೆ ಸುರಿದ ಸಣ್ಣ ಮಳೆಗೂ ಬೆಂಗಳೂರಿನಲ್ಲಿ (Bengaluru) ವಾಹನ ಸವಾರರು ಹೈರಾಣಾದ ಪ್ರಸಂಗ ನಡೆದಿದೆ. ಅಲ್ಪ ಮಳೆಗೇ ಹೆಣ್ಣೂರು ಬಾಗಲೂರು ಮುಖ್ಯರಸ್ತೆ (ನ್ಯೂ ಏರ್ಪೋರ್ಟ್ ರಸ್ತೆ) ಜಲಾವೃತವಾದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡು ತೊಂದರೆ ಉಂಟಾಗಿದೆ. ಬೆಂಗಳೂರು ಪೂರ್ವ ನಗರ ಪಾಲಿಕೆಯ ಹೊರಮಾವು ವಾರ್ಡ್ ವ್ಯಾಪ್ತಿಯಲ್ಲಿ ಮುಖ್ಯರಸ್ತೆ ಮೇಲೆಯೇ ಪ್ರವಾಹದಂತೆ ನೀರು ಹರಿದ ಪರಿಣಾಮ, ರಸ್ತೆ ಯಾವುದು? ಫುಟ್ಪಾತ್ ಯಾವುದು ಎಂದು ಜನ ಹುಡುಕಬೇಕಾದ ಸ್ಥಿತಿ ಉಂಟಾಗಿದೆ.
3 ಕಿಲೋ ಮೀಟರ್ ಟ್ರಾಫಿಕ್ ಜಾಮ್
ರಸ್ತೆಯಲ್ಲೇ ನೀರು ನಿಂತು ಸಂಚಾರ ಸಮಸ್ಯೆ ಉಂಟಾಗಿದ್ದು, ನ್ಯೂ ಏರ್ಪೋರ್ಟ್ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿನಿಂತ ಪ್ರಸಂಗ ನಡೆದಿದೆ. ಸುಮಾರು 3 ಕಿಲೋ ಮೀಟರ್ ಟ್ರಾಫಿಕ್ ಜಾಮ್ ಉಂಟಾಗಿದೆ.
ಇದನ್ನೂ ಓದಿ: ಕೈಕೊಟ್ಟ ಮಳೆ; ಬಳ್ಳಾರಿ, ವಿಜಯನಗರದಿಂದ ಬರೋಬ್ಬರಿ 13,000 ಮಂದಿ ಗುಳೆ?
ರಾಜ್ಯದ ಹಲವೆಡೆ ಮಳೆಯ ಮುನ್ಸೂಚನೆ
24-Hour #Rainfall #Forecast for #Karnataka COASTAL KARNATAKA Heavy to very heavy rain with sustained wind (30-40 Kmph) likely to occur at one or two places over Uttara Kannada district. Heavy rain with sustained wind (30-40 Kmph) likely to occur at one or two places over Udupi
— Karnataka State Natural Disaster Monitoring Centre (@KarnatakaSNDMC) July 22, 2026
ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಒಂದು ಅಥವಾ ಎರಡು ಪ್ರದೇಶಗಳಲ್ಲಿ ಭಾರಿ ಮಳೆ ಅಂದಾಜಿಸಲಾಗಿದೆ. ಉಡುಪಿಯ ಕೆಲವಡೆ ಭಾರಿ ಗಾಳಿಯ ಮುನ್ಸೂಚನೆ ನೀಡಲಾಗಿದ್ದು, ಬಳ್ಳಾರಿ, ದಾವಣಗೆರೆ, ಮೈಸೂರು, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿಯೂ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:58 pm, Wed, 22 July 26




