AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಬೆಂಗಳೂರಲ್ಲಿ ಧಾರಾಕಾರ ಮಳೆಗೆ ವಾಹನ ಸವಾರರು ಹೈರಾಣ, 7 ಜಿಲ್ಲೆಗಳಲ್ಲಿ ನಾಳೆ ಭಾರಿ ವರ್ಷಧಾರೆಯ ಮುನ್ಸೂಚನೆ

ಬೆಂಗಳೂರಿನಲ್ಲಿ ದಿಢೀರ್ ಸುರಿದ ಧಾರಾಕಾರ ಮಳೆಗೆ ನಗರದ ಪ್ರಮುಖ ರಸ್ತೆಗಳಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ತೀವ್ರ ಪರದಾಟ ನಡೆಸಿದ್ದಾರೆ. ಇದರ ನಡುವೆಯೇ ರಾಜ್ಯದ 7 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಕ್ಲಾಡಿಯಲ್ಲಿ ನಿನ್ನೆ ದಾಖಲೆಯ ಮಳೆಯಾಗಿದೆ.

Bengaluru Rain: ಬೆಂಗಳೂರಲ್ಲಿ ಧಾರಾಕಾರ ಮಳೆಗೆ ವಾಹನ ಸವಾರರು ಹೈರಾಣ, 7 ಜಿಲ್ಲೆಗಳಲ್ಲಿ ನಾಳೆ ಭಾರಿ ವರ್ಷಧಾರೆಯ ಮುನ್ಸೂಚನೆ
ಮಳೆImage Credit source: Tv9 Kannada
ಪ್ರಸನ್ನ ಹೆಗಡೆ
|

Updated on:Aug 04, 2026 | 7:44 PM

Share

ಮುಖ್ಯಾಂಶಗಳು

  • ಬೆಂಗಳೂರಿನ ಹಲವೆಡೆ ಅಬ್ಬರಿಸಿದ ವರುಣ
  • ಏಕಾಏಕಿ ಮಳೆಗೆ ವಾಹನ ಸವಾರರು ಹೈರಾಣ
  • ಹಲವು ಜಿಲ್ಲೆಗಲ್ಲಿಯೂ ಮಳೆಯ ಮುನ್ಸೂಚನೆ

ಬೆಂಗಳೂರು, ಆಗಸ್ಟ್​​ 04: ಸಿಲಿಕಾನ್ ಸಿಟಿ ಬೆಂಗಳೂರಿಗೆ (Bengaluru) ಮಳೆರಾಯ ಸರ್ಪ್ರೈಸ್ ಎಂಟ್ರಿ ಕೊಟ್ಟಿದ್ದು, ಕೆ. ಆರ್. ಮಾರ್ಕೆಟ್, ಟೌನ್ ಹಾಲ್, ಕೆ. ಆರ್. ಸರ್ಕಲ್, ವಿಧಾನಸೌಧ, ಎಂ.ಜಿ. ರೋಡ್, ಶಾಂತಿನಗರ ಸುತ್ತಮುತ್ತ ಭಾರಿ ಮಳೆಯಾಗಿದೆ. ಕೆ.ಆರ್. ಮಾರ್ಕೆಟ್ ಸುತ್ತಮುತ್ತ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ (Traffic Jam) ಆದ ಪರಿಣಾಮ ವಾಹನ ಸವಾರರು ತೀವ್ರ ಪರದಾಡಿದ್ದು, ಟ್ರಾಫಿಕ್​​ನಲ್ಲಿ ಸಿಲುಕಿ ಆಂಬುಲೆನ್ಸ್ ಕೂಡ ಸಿಲುಕಿಕೊಂಡ ಪ್ರಸಂಗ ನಡೆದಿದೆ.

7 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಹಾಸನ ಜಿಲ್ಲೆಗಳಲ್ಲಿ ನಾಲೆ ಧಾರಾಕಾರ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಸಾಧಾರ ಮಳೆಯ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ: ಕೆಆರ್‌ಎಸ್, ಆಲಮಟ್ಟಿಗೆ ಬೃಹತ್‌ ಒಳಹರಿವು! ಜಲಾಶಯಗಳ ಇಂದಿನ ನೀರಿನ ಮಟ್ಟ ಇಲ್ಲಿದೆ

ಉಡುಪಿಯಲ್ಲಿ ದಾಖಲೆಯ ಮಳೆ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಕ್ಲಾಡಿಯಲ್ಲಿ ನಿನ್ನೆ ದಾಖಲೆಯ ಅಂದರೆ ಬರೋಬ್ಬರಿಬ 189 ಮಿ.ಮೀ. ಮಳೆಯಾಗಿದೆ. ಬೆಳಗಾವಿಯ ಖಾನಾಪುರದ ಪಾರ್ವಾಡ್​​ನಲ್ಲಿ 174 ಮಿ.ಮೀ, ತೀರ್ಥಹಳ್ಳಿಯ ಆಗುಂಬೆಯಲ್ಲಿ 170 ಮಿ.ಮೀ, ಮಂಗಳೂರಿನ ಶಿರ್ಥಡಿಯಲ್ಲಿ 133.5 ಮಿ.ಮೀ ಮತ್ತು ಉತ್ತರ ಕನ್ನಡದ ಸಿದ್ದಾಪುರದ ದೊಡ್ಮನೆಯಲ್ಲಿ 124.5 ಮಿ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.​​

Published On - 7:28 pm, Tue, 4 August 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್