Bengaluru Rains: ಜಯನಗರ, ಬಸವನಗುಡಿ ಸೇರಿ ಬೆಂಗಳೂರಿನ ಹಲವೆಡೆ ಬೆಳ್ಳಂಬೆಳಗ್ಗೆಯೇ ಮಳೆ
Bengaluru Rain Today: ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗೆ ಕೊನೆಗೂ ವರುಣ ಕೃಪೆ ತೋರಿದ್ದಾನೆ. ಜಯನಗರ, ಬಸವನಗುಡಿ, ಜೆಸಿ ರಸ್ತೆ ಸೇರಿದಂತೆ ಹಲವು ಕಡೆಗಳಲ್ಲಿ ಬುಧವಾರ ಬೆಳಗ್ಗೆಯೇ ಮಳೆಯಾಗಿದೆ. ಇನ್ನು ಕೆಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇದ್ದು, ಯಾವುದೇ ಕ್ಷಣ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು, ಮೇ 8: ಕಳೆದ ಕೆಲವು ದಿನಗಳಲ್ಲಿ ಬೆಂಗಳೂರಿನ ವಿವಿಧೆಡೆ ಸಂಜೆ ಅಥವಾ ರಾತ್ರಿ ವೇಳೆ (Bengaluru Rain) ಮಳೆಯಾಗಿತ್ತು. ಆದರೆ, ಇದೀಗ ಬೆಳಗ್ಗೆಯೇ ವರುಣ ಕೃಪೆ ತೋರಿದ್ದಾನೆ! ಜಯನಗರ, ಕೋಣನಕುಂಟೆ ಕ್ರಾಸ್, ಬಸವನಗುಡಿ, ಜೆಸಿ ರಸ್ತೆ, ಕೆಆರ್ ಮಾರುಕಟ್ಟೆ ಸೇರಿದಂತೆ ಬೆಂಗಳೂರಿನ ಹಲವು ಕಡೆಗಳಲ್ಲಿ ಬೆಳಗ್ಗೆ ಮಳೆ ಸುರಿದಿದೆ. ಕೆಲವೆಡೆ ಸಾಧಾರಣ ಮಳೆಯಾಗಿದ್ದರೆ ಇನ್ನು ಕೆಲವೆಡೆ ಧಾರಾಕಾರ ಮಳೆ ಸುರಿಯಿತು.
ನಗರದಲ್ಲಿ ಇಂದು ಬಹುತೇಕ ಮೋಡ ಕವಿದ ವಾತಾವರಣ ಇರಲಿದ್ದು, ಹಲವು ಕಡೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಳಗ್ಗೆ ಮತ್ತು ರಾತ್ರಿ ಮಳೆಯಾಗಬಹುದು ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಮಳೆಯ ವಿಡಿಯೋ ‘ಎಕ್ಸ್’ ಸಂದೇಶದಲ್ಲಿ ನೋಡಿ
Early morning rains in #Bengaluru. #Rayalaseema strom moved down to south, temperature 🤒 down to 22 C if I am not wrong. Such a beautiful morning since long time.#BengaluruRains #BangaloreRains #KarnatakaRains pic.twitter.com/ttFMj4j5TF
— Naveen Reddy (@navin_ankampali) May 8, 2024
ಬೆಂಗಳೂರಿಗೆ ಇಂದು ಯೆಲ್ಲೋ ಅಲರ್ಟ್
ಭಾರತೀಯ ಹವಾಮಾನ ಇಲಾಖೆ ಬೆಂಗಳೂರಿಗೆ ಬುಧವಾರ ಯೆಲ್ಲೋ ಅಲರ್ಟ್ ಘೋಷಿಸಿದೆ. ಇದು ನಗರದಲ್ಲಿ ಭಾರೀ ಮಳೆಯಾಗಲಿದೆ ಎಂಬುದನ್ನು ಸೂಚಿಸುತ್ತದೆ. ಮಳೆಯ ಜೊತೆಗೆ ಬಿರುಗಾಳಿ ಸಹಿತ ಗಾಳಿ ಬೀಸಬಹುದು ಎಂದು ಎಚ್ಚರಿಕೆ ನೀಡಿದೆ. ಏಪ್ರಿಲ್ನಲ್ಲಿ ಒಣ ಹವೆಯ ನಂತರ ಬೆಂಗಳೂರು ನಗರವು ಮೇ ತಿಂಗಳಲ್ಲಿ ಸಾಧಾರಣ ಮಳೆಗೆ ಸಾಕ್ಷಿಯಾಗುತ್ತಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೇ ತಿಂಗಳಲ್ಲಿ 128.7 ಮಿಮೀ ಮಳೆಯಾಗುತ್ತದೆ.
ಮುಂದಿನ ಎರಡು ದಿನಗಳಲ್ಲಿ ನಗರದಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಸಂಜೆ ಅಥವಾ ರಾತ್ರಿ ವೇಳೆಗೆ ಮಾತ್ರ ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ತಿಳಿಸಿದೆ. ಮುಂದಿನ ಎರಡು ದಿನಗಳಲ್ಲಿ ನಗರದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 35 ಡಿಗ್ರಿ ಸೆಲ್ಸಿಯಸ್ ಮತ್ತು 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ; ಸನ್ನದ್ಧವಾಗಿರಲು ಜಿಲ್ಲಾಧಿಕಾರಿಗಳು, ಅಧಿಕಾರಿಗಳಿಗೆ ಸೂಚನೆ
ಮೇ ತಿಂಗಳ ಆರಂಭದಿಂದಲೂ ನಗರದಲ್ಲಿ ಮಳೆಯಾಗುತ್ತಿದೆ. ಪರಿಣಾಮವಾಗಿ, ತಾಪಮಾನವು ಗಮನಾರ್ಹವಾಗಿ ಕಡಿಮೆಯಾಗಿದೆ. ತಿಂಗಳ ಆರಂಭದಲ್ಲಿದ್ದ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್‌ನಿಂದ, ಮಂಗಳವಾರ 33.8 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ.
ಈ ಮಧ್ಯೆ, ಈ ವರ್ಷ ದೇಶಾದ್ಯಂತ ಶೇ 104 ರಷ್ಟು ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿಯೂ ಹೆಚ್ಚಿನ ಮಳೆಯಾಗಲಿದೆ ಎಂದು ಹೇಳಿದೆ. ಹೀಗಾಗಿ ಯಾವುದೇ ಅನಾಹುತ ಸಂಭವಿಸದಂತೆ ತಡೆಯಲಿ ಈಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಜಿಲ್ಲಾಧಿಕಾರಿಗಳಿಗೆ ಪತ್ರವನ್ನೂ ಬರೆದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:05 am, Wed, 8 May 24