Bengaluru Rain Today: ಬೆಂಗಳೂರಿನಲ್ಲಿ ತಡರಾತ್ರಿ ಭಾರಿ ಮಳೆ; ಇನ್ನೂ 4 ದಿನ ಮಳೆಯ ಮುನ್ಸೂಚನೆ

Karnataka Rains: ಬೆಂಗಳೂರಿನಲ್ಲಿ ಭಾನುವಾರ ರಾತ್ರಿಯೂ ಮಳೆ ಸುರಿದಿದೆ. ನಗರದ ಕೆಆರ್​ ಮಾರುಕಟ್ಟೆ, ಜೆಸಿ ರಸ್ತೆ, ಮೆಜೆಸ್ಟಿಕ್, ರಾಜರಾಜೇಶ್ವರಿ ನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಮತ್ತೊಂದೆಡೆ, ರಾಜ್ಯದಾದ್ಯಂತ ಮಳೆಯಾಗುತ್ತಿದೆ. ಭಾನುವಾರ ರಾತ್ರಿ ಎಲ್ಲೆಲ್ಲಿ ಮಳೆಯಾಗಿದೆ? ಮಳೆಯಿಂದ ಎಲ್ಲಿ ಏನು ಅನಾಹುತ ಸಂಭವಿಸಿದೆ ಎಂಬ ವಿವರ ಇಲ್ಲಿದೆ.

Bengaluru Rain Today: ಬೆಂಗಳೂರಿನಲ್ಲಿ ತಡರಾತ್ರಿ ಭಾರಿ ಮಳೆ; ಇನ್ನೂ 4 ದಿನ ಮಳೆಯ ಮುನ್ಸೂಚನೆ
ಬಾಗಲಕೋಟೆಯಲ್ಲಿ ಭಾನುವಾರ ಗಾಳಿ ಸಹಿತ ಸುರಿದ ಮಳೆ
Follow us
Ganapathi Sharma
|

Updated on:May 13, 2024 | 6:59 AM

ಬೆಂಗಳೂರು, ಮೇ 13: ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಪ್ರತಿದಿನ (Bengaluru Rains) ಮಳೆಯಾಗುತ್ತಿದೆ. ಭಾನುವಾರ ತಡರಾತ್ರಿ ಸುರಿದ ಮಳೆ ನಗರದ ಹಲವೆಡೆ ಅವಾಂತರ ತಂದಿಟ್ಟಿದೆ. ಕೆಆರ್​ ಮಾರುಕಟ್ಟೆ, ಜೆಸಿ ರಸ್ತೆ, ಮೆಜೆಸ್ಟಿಕ್, ಗಿರಿನಗರ, ಶ್ರೀನಿವಾಸನಗರ, ಹೊಸಕೆರೆಹಳ್ಳಿ, ರಾಜರಾಜೇಶ್ವರಿ ನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಗುಡುಗು, ಸಹಿತ ಮಳೆಯಿಂದಾಗಿ ಕೆಲ ಏರಿಯಾಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ನಿವಾಸಿಗಳು ಪರದಾಡುವಂತಾಗಿದೆ. ಭಾನುವಾರ ರಾತ್ರಿಯೂ ರಾಜರಾಜೇಶ್ವರಿ ನಗರ (RR Nagar) ಗೇಟ್‌ಬಳಿಯ ರಸ್ತೆ ಜಲಾವೃತವಾಗಿ ವಾಹನ ಸವಾರರು ಪರತಪಿಸುವಂತಾಯಿತು.

ಚಿಕ್ಕಮಗಳೂರಿನಲ್ಲಿ ಮರಬಿದ್ದು ಮಹಿಳೆ ಸಾವು

ಚಿಕ್ಕಮಗಳೂರಿನಲ್ಲಿ ಕೂಡ ಕಳೆದೊಂದು ವಾರದಿಂದ ವರ್ಷಧಾರೆಯಾಗುತ್ತಿದೆ. ಕಟ್ಟಿನಮನೆ ಗ್ರಾಮದಲ್ಲಿ ಬೃಹತ್ ಮರಬಿದ್ದು ಮಹಿಳೆ ಸಾವನಪ್ಪಿದ್ದಾರೆ. 48ವರ್ಷದ ಸವಿತಾ ಮೃತ ದುರ್ದೈವಿಯಾಗಿದ್ದು, ಕಳೆದ ಒಂದು ತಿಂಗಳ ಅವಧಿಯಲ್ಲಿ ಮಳೆಗೆ ಸಾವನಪ್ಪಿದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

ಮಳೆಗೆ ತೊಯ್ದು ಹೋದ ಸ್ಮಾರ್ಟ್ ಸಿಟಿ ಬೆಳಗಾವಿ

ಬೆಳಗಾವಿಯಲ್ಲಿ ಮಳೆ ಅಬ್ಬರ ಜನಜೀವನ ಅಸ್ತವ್ಯಸ್ತಗೊಳಿಸಿದೆ. ಮಜಗಾಂವ್ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿ ಒಳಗಿದ್ದ ವಸ್ತುಗಳು ನೀರಲ್ಲಿ ತೇಲಿ ಹೋಗಿವೆ. ನಿವಾಸಿಗಳು ನೀರು ಹೊರಹಾಕಲು ಜಾಗರಣೆ ಮಾಡುವಂತಾಯಿತು. ಖಾಸಾಬಾಗ್‌ನಲ್ಲಿ ಬನಶಂಕರಿ ದೇವಾಲಯದ ಗರ್ಭಗುಡಿಗೆ ನೀರು ನುಗ್ಗಿ ಅರ್ಚಕರು ಪರದಾಡಬೇಕಾಯಿತು.

ಬೆಳಗಾವಿ ನಗರದ 5 ಕಡೆ ಮರಬಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಮಾರುಕಟ್ಟೆಗೂ ನೀರು ನುಗ್ಗಿದ್ದರಿಂದ ಟೊಮ್ಯಾಟೋ ಸೇರಿ ತರಕಾರಿಗಳೆಲ್ಲ ನೀರುಪಾಲಾಗಿವೆ.

ಕೋಲಾರದಲ್ಲಿ ಮಳೆ, ಬಿರುಗಾಳಿಗೆ ನೆಲಕಚ್ಚಿದ ಬಾಳೆ

ಕೋಲಾರದ ಜಂಗಂಬಸಾಪುರದಲ್ಲೂ ಮಳೆ, ಬಿರುಗಾಳಿಗೆ ರೈತ ಬಸವರಾಜು ಅನ್ನೋರ ಕಟಾವಿಗೆ ಬಂದಿದ್ದ 3 ಎಕರೆ ಬಾಳೆ ನೆಲಕಚ್ಚಿದೆ. ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಮರಬಿದ್ದು ಬಿದ್ದು ಮನೆಗಳಿಗೆ ಹಾನಿ

ದಕ್ಷಿಣ ಕನ್ನಡದ ಪುತ್ತೂರಿನ ಉರ್ಲಾಂಡಿ ಎಂಬಲ್ಲಿ ಮರಬಿದ್ದು ಶೋಭಾ ಹೆಗ್ಡೆ ಅನ್ನೋರ ಮನೆ ಜಖಂಗೊಂಡಿದೆ. ಬಪ್ಪಳಿಗೆಯ ಸಿಂಗಾಣಿಯಲ್ಲಿ ಮರಬಿದ್ದು ಮಹಿಳೆ ಕಮಲ ಎಂಬವರ ಮನೆಗೆ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಶಾಸಕ ಅಶೋಕ್ ರೈ ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಮಹಾಮಳೆಗೆ 3ನೇ ಬಲಿ: ಮಹಿಳೆ ಮೇಲೆ ಮರ ಬಿದ್ದು ಸಾವು

ಮುಂದಿನ ನಾಲ್ಕು ದಿನ ಭಾರಿ ಮಳೆಯ ಮುನ್ಸೂಚನೆ

ರಾಜ್ಯದ ವಿವಿಧೆಡೆ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ, ದಕ್ಷಿಣ, ಕರಾವಳಿ ಕರ್ನಾಟಕದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೇ‌ 15ರ ವರೆಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:56 am, Mon, 13 May 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ