Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಧಾರಾಕಾರ ಮಳೆ; ಲಿಫ್ಟ್​ ಗುಂಡಿಯ ನೀರಿಗೆ ಬಿದ್ದು 7 ವರ್ಷದ ಬಾಲಕ ಸಾವು

ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಗೆ 7 ವರ್ಷದ ಬಾಲಕ ಬಲಿಯಾಗಿದ್ದಾನೆ. ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕನ್ನಮಂಗಲದಲ್ಲಿ ಲಿಫ್ಟ್​ ಕಾಮಗಾರಿಗೆಂದು ತೋಡಿದ್ದ ಗುಂಡಿಗೆ ಬಿದ್ದು ಬಾಲಕ ಮೃತಪಟ್ಟಿದ್ದಾನೆ. ಆಟವಾಡುವಾಗ ಬಾಲಕ ಕಾಲು ಜಾರಿ ಗುಂಡಿಯೊಳಗೆ ಬಿದ್ದಿದ್ದಾನೆ.

ಬೆಂಗಳೂರಿನಲ್ಲಿ ಧಾರಾಕಾರ ಮಳೆ; ಲಿಫ್ಟ್​ ಗುಂಡಿಯ ನೀರಿಗೆ ಬಿದ್ದು 7 ವರ್ಷದ ಬಾಲಕ ಸಾವು
ಲಿಫ್ಟ್​ ಗುಂಡಿಯ ನೀರಿಗೆ ಬಿದ್ದ 7 ವರ್ಷದ ಬಾಲಕ ಸಾವು Image Credit source: ETV Bharat
Follow us
ರಾಚಪ್ಪಾಜಿ ನಾಯ್ಕ್
| Updated By: ಸುಷ್ಮಾ ಚಕ್ರೆ

Updated on: Oct 24, 2024 | 12:18 PM

ಬೆಂಗಳೂರು: ಬೆಂಗಳೂರಿನ ಕಾಡುಗೋಡಿಯಲ್ಲಿ ಲಿಫ್ಟ್ ಕಾಮಗಾರಿಗೆಂದು ತೋಡಲಾಗಿದ್ದ ಗುಂಡಿಯಲ್ಲಿ ಮಳೆ ನೀರು ತುಂಬಿತ್ತು. ಆಟವಾಡುವಾಗ ಈ ಗುಂಡಿಗೆ ಬಿದ್ದ 7 ವರ್ಷದ ಸುಹಾಸ್ ಗೌಡ ಎಂಬ ಬಾಲಕ ಮೃತಪಟ್ಟಿದ್ದಾನೆ. ಡೇರಿ ಅಧ್ಯಕ್ಷ ಸೊಣ್ಣಪ್ಪ, ಸೆಕ್ರೆಟರಿ ಸುನೀಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಹಾಲಿನ ಡೇರಿ ಕಟ್ಟಡ ನಿರ್ಮಿಸುತ್ತಿದ್ದ ಸೊಣ್ಣಪ್ಪ ಪುತ್ರ ರವಿಕುಮಾರ್ ಲಿಫ್ಟ್ ನಿರ್ಮಾಣಕ್ಕೆ ಗುಂಡಿಯನ್ನು ಅಗೆಸಿದ್ದರು. ಆಟವಾಡುವಾಗ ಕಾಲು ಜಾರಿ ಬಾಲಕ ಆ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಭಾರೀ ಮಳೆಯಿಂದ ಆ ಗುಂಡಿಯಲ್ಲಿ ನೀರು ತುಂಬಿದ್ದರೂ ಸಿಬ್ಬಂದಿ ಮುನ್ನೆಚ್ಚರಿಕೆ ವಹಿಸದ ಹಿನ್ನೆಲೆಯಲ್ಲಿ ಒಂದು ಜೀವ ಬಲಿಯಾಗಿದೆ.

ಇದುವರೆಗೆ ನೊಂದ ಕುಟುಂಬಕ್ಕೆ ಸಾಂತ್ವನ ಹೇಳದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಶ್ರೀಕನ್ಯಾ ಹಾಗೂ ಮುನಿರಾಜು ದಂಪತಿ ಪುತ್ರ ಸುಹಾಸ್ ಗೌಡ ಸಾವನ್ನಪ್ಪಿದ್ದಾನೆ. ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಈ ಘಟನೆ ನಡೆದಿದೆ. ಕನ್ನಮಂಗಲದ ನಿರ್ಮಾಣ ಹಂತದ ಹಾಲಿನ ಡೇರಿ ಕಟ್ಟಡದಲ್ಲಿ ಈ ದುರಂತ ಸಂಭವಿಸಿದೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಇದನ್ನೂ ಓದಿ: Bengaluru Rains: ಮಳೆಯಿಂದ ಜಲಾವೃತವಾಗಿದ್ದ ಯಲಹಂಕದ ಕೇಂದ್ರೀಯ ವಿಹಾರ್​ ಅಪಾರ್ಟ್​ಮೆಂಟ್​ಗೆ ಬಿಬಿಎಂಪಿ ನೋಟಿಸ್

ಇದೇ ತಿಂಗಳ 23ನೇ ತಾರೀಖು ಬೆಳಗ್ಗೆ 9.30 ಗಂಟೆ ವೇಳೆ ನಡೆದಿರೋ ಘಟನೆಯಿದು. ಕನ್ನಮಂಗಲದ ಮಿಲ್ಕ್ ಡೈರಿ ಕಟ್ಟಡ ಕಾಮಗಾರಿ ನಡೆಸಲಾಗ್ತಿತ್ತು. ಆ ಕಟ್ಟಡದಲ್ಲಿ ಲಿಪ್ಟ್ ಗಾಗಿ 5 ಅಡಿ ಗುಂಡಿ ತೋಡಲಾಗಿತ್ತು. ಆ ಗುಂಡಿಯಲ್ಲಿ ನೀರು ತುಂಬಿಕೊಂಡಿದ್ದು, ಯಾವುದೇ ಮುನ್ನೆಚ್ಚರಿಕೆ ವಹಿಸದ ಸಿಬ್ಬಂದಿಯ ಬೇಜವಾಬ್ದಾರಿತನದಿಂದ ಮನೆ ಮುಂಭಾಗ ಆಟವಾಡುವ ವೇಳೆ ಬಾಲಕ ಆಯತಪ್ಪಿ ಗುಂಡಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ.

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ