AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rains: ಬೆಂಗಳೂರಿನಲ್ಲಿ ಹಲವೆಡೆ ಇಂದೂ ಮುಂದುವರೆದ ಮಳೆ ಅವಾಂತರ; ರಸ್ತೆಗಳು ಜಲಾವೃತ

ಬೆಂಗಳೂರು ಮಳೆ ಅವಾಂತರ: ರಾಜಧಾನಿ ಬೆಂಗಳೂರು ಅಕ್ಷರಶಃ ಮಳೆನಾಡಾಗಿ ಬದಲಾಗಿದೆ. ಬಿಡುವೇ ಕೊಡದಂತೆ ವರುಣ ರುದ್ರನರ್ತನ ತೋರುತ್ತಿದ್ದಾನೆ. ಇದೀಗ ಇಂದೂ ಕೂಡ ನಗರದಲ್ಲಿ ಧಾರಾಕಾರ ಮಳೆ ಆಗಿದ್ದು, ಮತ್ತೆ ಅವಾಂತರಗಳು ಸೃಷ್ಟಿಯಾಗಿವೆ. ಹಲವೆಡೆ ಸುರಿಯುತ್ತಿರುವ ಭಾರೀ ಮಳೆಗೆ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ. ಬೃಹದಾಕಾರ ಮರ ಧರೆಗುರುಳಿದಿದೆ.

ಗಂಗಾಧರ​ ಬ. ಸಾಬೋಜಿ
|

Updated on:Oct 23, 2024 | 5:10 PM

Share

ಬೆಂಗಳೂರು, ಅಕ್ಟೋಬರ್​ 23: ನಗರದಲ್ಲಿ ಕಳೆದ ಒಂದು ವಾರದಿಂದ ಅಬ್ಬರಿಸಿ ಬೊಬ್ಬಿರಿಯುತ್ತಿದ್ದ ಮಳೆ (rain) ಕೊಂಚ ವಿರಾಮ ನೀಡಿತ್ತು. ನಿನ್ನೆ ಸಂಜೆಯಿಂದ ಸ್ವಲ್ಪ ಬಿಡುವು ನೀಡಿದ್ದ ಮಳೆರಾಯ ಇಂದು ಸಂಜೆಯಾಗುತ್ತಿದ್ದಂತೆ ಮತ್ತೆ ಎಂಟ್ರಿಕೊಟ್ಟಿದ್ದಾರೆ. ಆ ಮೂಲಕ ಸಿಟಿ ಮಂದಿ ಮತ್ತೆ ಕಂಗಾಲಾಗಿದ್ದಾರೆ.  ಹಲವೆಡೆ ಸುರಿಯುತ್ತಿರುವ ಭಾರೀ ಮಳೆಗೆ ಮಲ್ಲೇಶ್ವರಂನ ಹಳ್ಳಿ ಮನೆ ಮುಂದೆ ಬೃಹದಾಕಾರ ಮರ ಧರೆಗುರುಳಿದು ಅವಾಂತರ ಸೃಷ್ಟಿಯಾಗಿದೆ.

ಬೆಂಗಳೂರಿನಲ್ಲಿ ಎಲ್ಲೆಲ್ಲಿ ಮಳೆ?

ವಿಧಾನಸೌಧ, ಕೆ.ಆರ್.ಸರ್ಕಲ್‌, ಮೈಸೂರು ಬ್ಯಾಂಕ್ ಸರ್ಕಲ್​, ಮೆಜೆಸ್ಟಿಕ್‌, ಕೆ.ಆರ್‌.ಮಾರ್ಕೆಟ್‌, ಕಾರ್ಪೊರೇಷನ್ ಸರ್ಕಲ್​ ಶಾಂತಿನಗರ ಮತ್ತು ರಿಚ್ಮಂಡ್‌ ಸರ್ಕಲ್‌, ಡಾಲರ್ಸ್ ಕಾಲೋನಿ, ಹೆಬ್ಬಾಳ, ಸಂಜಯ್ ನಗರ, ಬಿಇಎಲ್ ರೋಡ್, ಎಂಎಸ್ ರಾಮಯ್ಯ ಆಸ್ಪತ್ರೆ ಸೇರಿದಂತೆ ಹಲವೆಡೆ ಭಾರೀ ಮಳೆ ಆಗಿದೆ. ಕೆಂಗೀರಿ ಸುತ್ತಮುತ್ತ ಜಿಟಿ‌ ಜಿಟಿ ಮಳೆ ಆರಂಭವಾಗಿದ್ದರೆ, ಜಯನಗರ 7ನೇ ಹಂತದಲ್ಲಿ ಸುಮಾರು 30 ನಿಮಿಷದಿಂದ ಜೋರು ಗಾಳಿ ಜೊತೆಗೆ ಧಾರಾಕಾರ ಮಳೆ ಸುರಿಯುತ್ತಿದೆ.

ಇದನ್ನೂ ಓದಿ: ಕರ್ನಾಟಕದ ಹಲವೆಡೆ ಮುಂದಿನ 6 ದಿನ ಭರ್ಜರಿ ಮಳೆ: ಇಂದಿನ ಹವಾಮಾನ ವರದಿ ನೋಡಿ

ಧಾರಾಕಾರ ಮಳೆಗೆ ಮ್ಯಾನ್ ಹೋಲ್ ಓಪನ್ ಆಗಿ ನೀರು ಉಕ್ಕಿ ಹರಿದಿದೆ. ಪರಿಣಾಮ ಶಾಂತಿನಗರದ ಬಿಟಿಎಸ್ ರಸ್ತೆ ಕೆಸರು ಮಯವಾಗಿದೆ. ನೀರು ತುಬಿಕೊಂಡ ಹಿನ್ನಲೆ ಗುಂಡಿಗಳು ಕಾಣದಂತಾಗಿದ್ದು, ಬೈಕ್ ಸವಾರರು ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇದನ್ನೂ ಓದಿ: ಮತ್ತೆ ಮಳೆ ಎಚ್ಚರಿಕೆ: ಬೆಂಗಳೂರು ನಗರ ಜಿಲ್ಲೆಯಾದ್ಯಂತ ಇಂದು ಶಾಲೆಗಳಿಗೆ ರಜೆ

ಗುಂಡಿಯಲ್ಲಿ ಆಟೋ ರಿಕ್ಷಾಯೊಂದು ಸಿಲುಕಿಕೊಂಡಿದ್ದು, ಮುಂದಕ್ಕೆ ಹೋಗುವುದಕ್ಕೆ ಆಗದೇ ಪರದಾಡುವಂತಾಗಿದೆ. ರಸ್ತೆ ಗುಂಡಿ ನೋಡಿ ಬಿಬಿಎಂಪಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರೀತಿ ರಸ್ತೆಯಲ್ಲಿ ಹೇಗೆ ಓಡಾಡೋದು. ನೋಡಿ ಸ್ವಲ್ಪ ಯಾಮರಿದರೂ ನಾನು ಬೀಳುತ್ತಿದ್ದೆ. ದಯವಿಟ್ಟು ಮೊದಲು ರಸ್ತೆ ಗುಂಡಿಗಳನ್ನು ಮುಚ್ಚಿ. ರಾಜಕಾಲುವೆಗೆ ಪೈಂಟ್ ಹೊಡೆದು ಹಣ ಹೊಡೆಯುತ್ತಿದ್ದಾರೆ. ಆದರೆ ರಾಜಕಾಲುವೆಯಲ್ಲಿ ಬರೀ ಕೊಳಚೆ ನೀರು ಹೋಗುತ್ತಿದೆ ಅಂತ ಆಕ್ರೋಶ ಹೊರಹಾಕಿದ್ದಾರೆ.

ಮತ್ತಷ್ಟು ಮಳೆಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 4:43 pm, Wed, 23 October 24

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ