Bangalore rain: ಬೆಂಗಳೂರಿನ ಹಲವೆಡೆ ಭಾರೀ ಮಳೆ, ಮೇ 6ರ ವರೆಗೂ ವರ್ಷಧಾರೆ ಸಾಧ್ಯತೆ

|

Updated on: May 03, 2023 | 5:22 PM

ರಾಜ್ಯ ರಾಜಧಾನಿ ಬೆಂಗಳೂರು ನಗರದ ಹಲವೆಡೆ ಬುಧವಾರ ಸಂಜೆ ಮಳೆ ಸುರಿದಿದೆ. ಕಳೆದ ಎರಡು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಿದೆ. ಮೇ 6ರ ವರೆಗೂ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Bangalore rain: ಬೆಂಗಳೂರಿನ ಹಲವೆಡೆ ಭಾರೀ ಮಳೆ, ಮೇ 6ರ ವರೆಗೂ ವರ್ಷಧಾರೆ ಸಾಧ್ಯತೆ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ನಗರದ ಹಲವೆಡೆ ಬುಧವಾರ ಸಂಜೆ ಮಳೆ (Bangalore rain) ಸುರಿದಿದೆ. ಕಳೆದ ಎರಡು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಿದೆ. ಮೇ 6ರ ವರೆಗೂ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿತ್ತು. ಸೋಮವಾರ ಕೂಡ ನಗರದ ಹಲವೆಡೆ ಭಾರೀ ಮಳೆಯಾಗಿತ್ತು. ರಸ್ತೆ, ತಗ್ಗು ಪ್ರದೇಶಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುವಂತಾಗಿತ್ತು. ನಗರದ ರಿಚ್​ಮಂಡ್ ರಸ್ತೆ, ಕಾರ್ಪೊರೇಷನ್ ವೃತ್ತ, ನಂಜಪ್ಪ ಸರ್ಕಲ್ ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯಾಗಿದ್ದು, ವಾಹನ ಸವಾರರು ತೊಂದರೆ ಎದುರಿಸಿದ್ದಾರೆ.

ನಗರದಲ್ಲಿ ಮುಂದಿನ ಕೆಲವು ದಿನಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಗರಿಷ್ಠ ತಾಪಮಾನವು 32-33 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿರುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಮಧ್ಯೆ, ವರ್ಷದ ಮೊದಲ ಚಂಡಮಾರುತ ಮೋಚಾ ಈ ವಾರ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಇದರಿಂದ ನಗರದ ವಾತಾವರಣದ ಮೇಲೂ ಪರಿಣಾಮ ಉಂಟಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Cyclone Mocha: ಮುಂದಿನ ವಾರ ಭಾರತದ ಪೂರ್ವ ಕರಾವಳಿಗೆ ಮೋಚಾ ಚಂಡಮಾರುತ ಅಪ್ಪಳಿಸುವ ಸಾಧ್ಯತೆ; ಯಾವ ರಾಜ್ಯಗಳಲ್ಲಿರಲಿದೆ ಇದರ ಪ್ರಭಾವ?

ರಾಜ್ಯದಲ್ಲಿ ವಿಧಾನಸಭಾ ಮತದಾನಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ರಾಜಕೀಯ ನಾಯಕರ ಅಬ್ಬರದ ಪ್ರಚಾರಕ್ಕೆ ಮಳೆ ಕಾಟ ಕೊಡುತ್ತಿದೆ. ಕಳೆದ ಎರಡು ದಿನದಿಂದ ಸಿಲಿಕಾನ್ ಸಿಟಿಯಲ್ಲಿ ದಿಢೀರ್ ಆಗಿ ಕೆಲವೊಮ್ಮೆ ಭಾರೀ ಮಳೆ ಹಾಗೂ ಇನ್ನು ಕೆಲವೊಮ್ಮೆ ತುಂತುರು ಮಳೆಯಾಗುತ್ತಿದೆ. ಹೆಚ್ಚಾಗಿ ಸಂಜೆ ವೇಳೆಗೆ ಭರ್ಜರಿಯಾಗಿ ಮಳೆ ಸುರಿಯುತ್ತಿದೆ. ಇದು ಅಭ್ಯರ್ಥಿಗಳನ್ನು ಪ್ರಚಾರದ ವೇಳೆ ಪರದಾಡುವಂತೆ ಮಾಡಿದೆ. ಮಧ್ಯಾಹ್ನದ ವೇಳೆ ಬಿಸಿಲು ಹಾಗೂ ಜನರು ಕೆಲಸಕ್ಕೆ ಹೋಗಿರುವುದರಿಂದ ಸಂಜೆ ಪ್ರಚಾರ ಹಮ್ಮಿಕೊಳ್ಳುವುದು ಅನಿವಾರ್ಯವಾಗಿದೆ. ಆದರೆ ಸಂಜೆ ವೇಳೆಗೆ ಮಳೆ ಬರುವುದು ರಾಜಕೀಯ ಪಕ್ಷಗಳ ನಾಯಕರನ್ನು ಕಷ್ಟಕ್ಕೆ ಸಿಲುಕಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:01 pm, Wed, 3 May 23