Bengaluru Rains: ಮುಂದಿನ 5 ದಿನ ರಾಜ್ಯದ್ಯಾಂತ ಮಳೆ ಮುಂದುವರಿಕೆ: ಬೆಂಗಳೂರಿನಲ್ಲಿ 2 ದಿನ ಭಾರೀ ಮಳೆ ಸಾಧ್ಯತೆ

|

Updated on: May 24, 2023 | 3:33 PM

ರಾಜ್ಯದಲ್ಲಿ ಇನ್ನೂ 5 ದಿನ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರು ನಗರದಲ್ಲಿ 2 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಅಧಿಕಾರಿಗಳಿಂದ ಮಾಹಿತಿ ನೀಡಲಾಗಿದೆ.

Bengaluru Rains: ಮುಂದಿನ 5 ದಿನ ರಾಜ್ಯದ್ಯಾಂತ ಮಳೆ ಮುಂದುವರಿಕೆ: ಬೆಂಗಳೂರಿನಲ್ಲಿ 2 ದಿನ ಭಾರೀ ಮಳೆ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ದಕ್ಷಿಣ ತಮಿಳುನಾಡಿನಲ್ಲಿ ಸಮುದ್ರಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯ ರಾಜಧಾನಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆ (Rains) ಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆಯಿಂದ ಹಲವೆಡೆ ಬೃಹತ್​ ಗಾತ್ರದ ಮರಗಳು, ವಿದ್ಯುತ್​ ಕಂಬಗಳು, ಮನೆ ಮೇಲ್ಚಾವಣಿಗಳು ಕುಸಿದು ಬಿದ್ದಿವೆ. ಕೆಲ ಸಾವು ನೋವುಗಳು ಸಹ ಸಂಭವಿಸಿರುವುದು ವರದಿ ಆಗಿದೆ. ರಾಜ್ಯದಲ್ಲಿ ಇನ್ನೂ 5 ದಿನ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರು ನಗರದಲ್ಲಿ 2 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಅಧಿಕಾರಿಗಳಿಂದ ಮಾಹಿತಿ ನೀಡಲಾಗಿದೆ.

ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ 2 ದಿನ ಮಳೆ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ 17 ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ.

ಇದನ್ನೂ ಓದಿ: Karnataka Rains: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 3 ದಿನ ಮಳೆ, ಹೆಲ್ಪ್ ಲೈನ್ ನಂಬರ್ ಬಿಡುಗಡೆ ಮಾಡಿದ ಬಿಬಿಎಂಪಿ

ರಾಜ್ಯದ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ರಾಮನಗರ, ಮಂಡ್ಯ, ಮೈಸೂರು, ಬೆಂಗಳೂರು ಜಿಲ್ಲೆಗಳಲ್ಲಿ ಹಾಗೂ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ ಗಾಳಿಯ ವೇಗ ಕೂಡ ಹೆಚ್ಚಾಗಿರಲಿದ್ದು, ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಇದನ್ನೂ ಓದಿ: Bengaluru Rains: ಬೆಂಗಳೂರಿನಲ್ಲಿ ಮಳೆ ತಂದ ಅವಾಂತರ, ಮನೆಗಳಿಗೆ ನೀರು ನುಗ್ಗಿ ರಾತ್ರಿಯಿಡೀ ಪರದಾಡಿದ ನಿವಾಸಿಗಳು

ಅಂಡರ್ ಪಾಸ್​ನಲ್ಲಿ ಮಳೆ ನೀರು

ಮಂಗಳವಾರ ನಗರದ ಹಲವೆಡೆ ಮತ್ತೆ ಮಳೆ ಆಗಿತ್ತು. ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಶಾಂತಿನಗರ, ಜಯನಗರ ವಿಜಯನಗರ, ಬನಶಂಕರಿ, ಹೆಬ್ಬಾಳ, ರಾಜಾಜಿನಗರ ಸೇರಿದಂತೆ ಹಲವೆಡೆ ವರ್ಷಧಾರೆ ಉಂಟಾಗಿತ್ತು. ಪರಿಣಾಮ ನಗರದ ಅಂಡರ್ ಪಾಸ್​ಗಳಲ್ಲಿ ಮಳೆ ನೀರು ತುಂಬಿತ್ತು. ಶಿವಾನಂದ ಸರ್ಕಲ್ ಬಳಿಯ ರೈಲ್ವೇ ಅಂಡರ್ ಪಾಸ್​ನಲ್ಲಿ ಮಳೆ ನೀರು ಆವರಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.