AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rain: ಬೆಂಗಳೂರಿನಲ್ಲಿ ಧಾರಾಕಾರ ಮಳೆ, ಕೆರೆಯಂತಾದ ರಸ್ತೆಗಳು

Karnataka weather: ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ಬೆಂಗಳೂರು ಮಹಾನಗರದ ಹಲವೆಡೆ ವರ್ಷಧಾರೆಯಾಗಿದೆ. ಬೆಂಗಳೂರು ನಗರದಲ್ಲಿ ಇನ್ನೂ 2 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Bangalore Rain: ಬೆಂಗಳೂರಿನಲ್ಲಿ ಧಾರಾಕಾರ ಮಳೆ, ಕೆರೆಯಂತಾದ ರಸ್ತೆಗಳು
ಬೆಂಗಳೂರಿನಲ್ಲಿ ಸುರಿದ ಮಳೆ
Rakesh Nayak Manchi
Rakesh Nayak Manchi|

Updated on:May 01, 2023 | 6:55 PM

Share

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ಬೆಂಗಳೂರು ಮಹಾನಗರದ ಹಲವೆಡೆ ವರ್ಷಧಾರೆಯಾಗಿದೆ (Bengaluru Rain). ಬೆಳಗ್ಗೆ ನಗರದ ಹಲವೆಡೆ ಮೋಡಕವಿದ ವಾತಾವರಣ ಇತ್ತು. ಮಧ್ಯಾಹ್ನದ ವೇಳೆಗೆ ಸುಡು ಬಿಸಿಲು ಆರಂಭವಾಗಿದ್ದರೂ ಸಂಜೆ ಹೊತ್ತಿಗೆ ಕಾರ್ಪೊರೇಷನ್ ವೃತ್ತ, ಮೈಸೂರು ಬ್ಯಾಂಕ್ ವೃತ್ತ, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಏಕಾಏಕಿ ಸುರಿದ ಮಳೆಗೆ ನಗರದ ಹಲವು ರಸ್ತೆಗಳು ಕೆರೆಯಂತಾದವು. ವಾಹನ ಸವಾರರು ಸಂಚಾರಕ್ಕೆ ಪರದಾಟ ನಡೆಸಿದರು.

ಇಂದು ಸಂಜೆ ನಗರದ ಕಾರ್ಪೊರೇಷನ್ ವೃತ್ತ, ಮೈಸೂರು ಬ್ಯಾಂಕ್ ವೃತ್ತ, ಮೆಜೆಸ್ಟಿಕ್​, ರಾಜಾಜಿನಗರ, ವಿಜಯನಗರ, ಚಂದ್ರಾಲೇಔಟ್, ನಂದಿನಿ ಲೇಔಟ್​, ಬಸವೇಶ್ವರನಗರ, ಕಾಮಾಕ್ಷಿಪಾಳ್ಯ, ಬನಶಂಕರಿ, ಬಸವನಗುಡಿ, ಶ್ರೀನಗರ, ಗಿರಿನಗರ, ಹೆಬ್ಬಾಳ, ಆರ್.ಟಿ.ನಗರ, ಶಾಂತಿನಗರ, ಮತ್ತಿಕೆರೆ, ಮಲ್ಲೇಶ್ವರಂ, ಜಯನಗರ ಸೇರಿದಂತೆ ಹಲವೆಡೆ ಮಳೆಯಾಗಿದೆ.

ಇದನ್ನೂ ಓದಿ: Karnataka Rains: ಮುಂದಿನ 2 ದಿನ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸಾಧ್ಯತೆ

ಏಕಾಏಕಿ ಸುರಿದ ಮಳೆಯಿಂದಾಗಿ ನಗರದ ಕೆಲವೊಂದು ರಸ್ತೆಗಳು ನೀರು ತುಂಬಿ ಕೆರೆಯಂತಾಗಿ ವಾಹನ ಸಂಚಾರಕ್ಕೆ ಅಡಚಣೆ ಉಂಡಾಯಿತು. ದ್ವಿಚಕ್ರ ವಾಹನ ಸವಾರರು ರಸ್ತೆ ಬದಿ ಬೈಕ್ ನಿಲ್ಲಿಸಿ ಬಸ್ ನಿಲ್ದಾಣಗಳಲ್ಲಿ ಆಶ್ರಯ ಪಡೆದರು. ಇನ್ನೂ ಕೆಲವರು ಫ್ಲೈಓವರ್​, ಸ್ಕೈವಾಕ್​ಗಳಲ್ಲಿ ಆಶ್ರಯ ಪಡೆಯುವಂತಾಯಿತು. ಮುಂದಿನ ಎರಡು ದಿನಗಳ ಕಾಲ ನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:50 pm, Mon, 1 May 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.