ಬೆಂಗಳೂರಿನಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ: ರಸ್ತೆಗಳು ಜಲಾವೃತ, ವಾಹನ ಸವಾರರೇ ಎಚ್ಚರ..ಎಚ್ಚರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವರುಣಾರ್ಭಟ ಜೋರಾಗಿದ್ದು, ಬೆಳಿಗ್ಗೆಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಇತ್ತ ಕೆಲ ರಸ್ತೆಗಳು ಜಲಾವೃತವಾಗಿದ್ದು, ಇದು ಬ್ರಾಂಡ್ ಬೆಂಗಳೂರು ಅಲ್ಲ, ಮೋರಿ ಬೆಂಗಳೂರು ಎಂದು  ಸವಾರರು ಕಿಡಿಕಾರುತ್ತಿದ್ದಾರೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಬೆಂಗಳೂರಿನಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ:  ರಸ್ತೆಗಳು ಜಲಾವೃತ, ವಾಹನ ಸವಾರರೇ ಎಚ್ಚರ..ಎಚ್ಚರ
ಬೆಂಗಳೂರು ಮಳೆ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Oct 15, 2024 | 4:31 PM

ಬೆಂಗಳೂರು, ಅ.15: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಮಳೆ(Bengaluru Rains)ಯ ಆರ್ಭಟ ನಿಲ್ಲುತ್ತಿಲ್ಲ. ಬೆಳಿಗ್ಗೆಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ಕಿಲೋಮೀಟರ್​ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ನಗರದ ಶಿವಾನಂದ್ ವೃತ್ತ, ಕುವೆಂಪು ನಗರದ ಹರಿಶ್ಚಂದ್ರ ಘಾಟ್, ಪರಪ್ಪನ ಅಗ್ರಹಾರ, ಜಕ್ಕೂರಿನ ರೈಲ್ವೆ ಅಂಡರ್ ಪಾಸ್ ಸೇರಿದಂತೆ ಕೆಲವು ರಸ್ತೆಗಳು ಜಲಾವೃತವಾಗಿದೆ.

ಮಹಾಮಳೆಗೆ ಜನಜೀವನ ಅಸ್ತವ್ಯಸ್ತ

ಇನ್ನು ರಾಚೇನಹಳ್ಳಿಯಿಂದ ಯಲಹಂಕ, ಜಕ್ಕೂರು ಕಡೆ ಹೋಗುವ ರಸ್ತೆ ಸಂಪೂರ್ಣ ಜಲಾವೃತವಾಗಿದ್ದು, ವಾಹನಗಳು ರಸ್ತೆಯಲ್ಲೇ ಕೆಟ್ಟು ನಿಂತಿವೆ. ಮುಂದಕ್ಕೆ ಹೋಗುವುದಕ್ಕೂ, ವಾಪಸ್ ತೆರಳಲು ಆಗದೆ ಸವಾರರು ಕಂಗಾಲಾಗಿದ್ದಾರೆ. ಪಕ್ಕದಲ್ಲಿ ಕೆರೆ ಇದ್ದರೂ ನೀರು ಸರಾಗವಾಗಿ ಹರಿದು ಹೋಗುತ್ತಿಲ್ಲ. ಇದು ಬ್ರಾಂಡ್ ಬೆಂಗಳೂರು ಅಲ್ಲ, ಮೋರಿ ಬೆಂಗಳೂರು ಎಂದು  ಸವಾರರು ಕಿಡಿಕಾರುತ್ತಿದ್ದಾರೆ.

ಇದನ್ನೂ ಓದಿ:ನಿರಂತರ ಮಳೆ; ಬೆಂಗಳೂರಿನ ಹೆಬ್ಬಾಳದಲ್ಲಿ ಕಿಲೋಮೀಟರ್​ಗಟ್ಟಲೇ ಸಾಲುಗಟ್ಟಿ ನಿಂತ ವಾಹನಗಳು

ಇತ್ತ ಡಿಸಿ ಕಚೇರಿ ಆವರಣದಲ್ಲಿರುವ ಹೋಟೆಲ್​ಗೆ ಮಳೆ ನೀರು ನುಗ್ಗಿದ್ದು, ಎಡಬಿಡದೇ ಸುರಿದ ಮಳೆಗೆ ಹೋಟೆಲ್ ಮುಳುಗಿದೆ. ಇಂದು ವಿಧಾನಸೌಧ ನೋಡಲು ಬಂದ ವಿದ್ಯಾರ್ಥಿಗಳಿಗೆ ವರುಣ ಶಾಕ್ ಕೊಟ್ಟಿದ್ದು, ಮಳೆಯಿಂದ ಊಟ ಮಾಡಲು ಹೊರಗಡೆ ಹೋಗಲು ಆಗದೆ ಪರದಾಡುವಂತಾಗಿದೆ. ಮೊದಲ ಬಾರಿ ವಿಧಾನಸೌಧಕ್ಕೆ ಬಂದಿದ್ದೆವು, ಮಳೆಯಿಂದ ಸರಿಯಾಗಿ ವಿಧಾನಸೌಧ ನೋಡಲು ಆಗಲಿಲ್ಲ ಎಂದು ವಿದ್ಯಾರ್ಥಿ ಅಳಲು ತೋಡಿಕೊಂಡಿದ್ದಾರೆ. ಇದೇ ವೇಳೆ ಆಟೋ ಚಾಲಕರೊಬ್ಬರು ಮಾತನಾಡಿ, ‘ ಬೆಳಗ್ಗೆಯಿಂದ ಬಾಡಿಗೆ ಇಲ್ಲ, ಮಳೆಯಿಂದ ಜನ ಬರುತ್ತಿಲ್ಲ ಎಂದರು.

ಇನ್ನು ವ್ಯಾಪಕ ಮಳೆ ಹಿನ್ನಲೆ ರಾಜಧಾನಿಯ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಸೂಚನೆ ನೀಡಿದ್ದಾರೆ. ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅಕ್ಟೋಬರ್ 20 ರವರೆಗೆ ದಸರಾ ರಜೆ ಇದೆ. ಆದರೆ ಖಾಸಗಿ ಶಾಲೆಗಳು ಶಾಲೆ ಆರಂಭ ಮಾಡಿವೆ. ಸೋಮುವಾರದಿಂದಲೇ ಖಾಸಗಿ ಶಾಲೆಗಳು ರಿ ಓಪನ್ ಆಗಿವೆ. ಹೀಗಾಗಿ ಮಕ್ಕಳಿಗೆ ಶಾಲೆಗೆ ಬರಲು ಕಷ್ಟ ಎದುರಾಗಿದ್ದು, ರಜೆ ನೀಡಲು ಸೂಚನೆ ನೀಡಿದ್ದಾರೆ. ಸಂಜೆ 5 ಗಂಟೆ ಬಳಿಕ ಅಧಿಕೃತ ಆದೇಶ ಬರುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್