AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಕೆಆರ್ ಮಾರುಕಟ್ಟೆ, ಲಾಲ್​ಬಾಗ್ ಸೇರಿದಂತೆ ಬೆಂಗಳೂರಿನ ಹಲವೆಡೆ ಮಳೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ವರುಣನ ಆಗಮನವಾಗುತ್ತಿದೆ. ಆದರೆ, ಇಂದು(ಜೂ.09) ಮಧ್ಯಾಹ್ನದಿಂದಲೇ ಕೆ.ಆರ್.ಮಾರುಕಟ್ಟೆ, ಲಾಲ್​ಬಾಗ್ ಸೇರಿದಂತೆ ಬೆಂಗಳೂರಿನ ಹಲವೆಡೆ ಮಳೆ ಶುರುವಾಗಿದೆ. ಹವಾಮಾನ ಇಲಾಖೆ ಕೂಡ ಬೆಂಗಳೂರಿನಲ್ಲಿ 3 ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

Bengaluru Rain: ಕೆಆರ್ ಮಾರುಕಟ್ಟೆ, ಲಾಲ್​ಬಾಗ್ ಸೇರಿದಂತೆ ಬೆಂಗಳೂರಿನ ಹಲವೆಡೆ ಮಳೆ
ಬೆಂಗಳೂರು ಮಳೆ
ಕಿರಣ್ ಹನುಮಂತ್​ ಮಾದಾರ್
|

Updated on:Jun 09, 2024 | 2:37 PM

Share

ಬೆಂಗಳೂರು, ಜೂ.09: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ(Bengaluru) ಇಂದು(ಜೂ.09) ಮಧ್ಯಾಹ್ನವೇ ವರುಣನ(Rain) ಆಗಮನವಾಗಿದೆ. ನಗರದ ಚಾಮರಾಜಪೇಟೆ, ಕೆ.ಆರ್.ಮಾರುಕಟ್ಟೆ, ಲಾಲ್​ಬಾಗ್, ಹೆಬ್ಬಾಳ, ಮಲ್ಲೇಶ್ವರಂ, ರಾಜಾಜಿನಗರ ಸದಾಶಿವನಗರ, ಶಿವಾಜಿನಗರ, ಮೆಜೆಸ್ಟಿಕ್, ಶಾಂತಿನಗರ, ವಿಧಾನಸೌಧ, ಹೆಬ್ಬಾಳ, ಯಲಹಂಕ​​ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಳೆ ಹಿನ್ನಲೆ ವಾಹನ ಸವಾರರು ಅಂಡರ್ ಪಾಸ್ ಕೆಳಗಡೆ ಆಶ್ರಯ ಪಡೆದಿದ್ದಾರೆ. ಜೊತೆಗೆ ಹವಾಮಾನ ಇಲಾಖೆ ಕೂಡ ಬೆಂಗಳೂರಿನಲ್ಲಿ 3 ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಹವಾಮಾನ ಇಲಾಖೆ ಮುನ್ಸೂಚನೆ

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಸುಳಿಗಾಳಿ ಪರಿಣಾಮ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮೂರು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜೂ.11ರವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದೆ. ಉತ್ತರ ಕರ್ನಾಟಕದ ಕೆಲವೆಡೆ ಮತ್ತು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಂಭವವಿದೆ.

ಇದನ್ನೂ ಓದಿ: ಇಂದಿನಿಂದ ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಧಾರಾಕಾರ ಮಳೆ, ರೆಡ್​ ಅಲರ್ಟ್​

ಉತ್ತರ ಒಳನಾಡಿನ ಒಂದೆರೆಡು ಕಡೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ

ಇಂದಿನಿಂದ ಜೂನ್ 11ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನ ಒಂದೆರೆಡು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬಿರುಗಾಳಿ ಸಹಿತ ಭಾರಿ ಮಳೆ ಹಿನ್ನೆಲೆ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆ ಚಾಮರಾಜನಗರ, ಮೈಸೂರು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:29 pm, Sun, 9 June 24

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!