ಬೆಂಗಳೂರು, ಜೂ.09: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ(Bengaluru) ಇಂದು(ಜೂ.09) ಮಧ್ಯಾಹ್ನವೇ ವರುಣನ(Rain) ಆಗಮನವಾಗಿದೆ. ನಗರದ ಚಾಮರಾಜಪೇಟೆ, ಕೆ.ಆರ್.ಮಾರುಕಟ್ಟೆ, ಲಾಲ್ಬಾಗ್, ಹೆಬ್ಬಾಳ, ಮಲ್ಲೇಶ್ವರಂ, ರಾಜಾಜಿನಗರ ಸದಾಶಿವನಗರ, ಶಿವಾಜಿನಗರ, ಮೆಜೆಸ್ಟಿಕ್, ಶಾಂತಿನಗರ, ವಿಧಾನಸೌಧ, ಹೆಬ್ಬಾಳ, ಯಲಹಂಕ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಳೆ ಹಿನ್ನಲೆ ವಾಹನ ಸವಾರರು ಅಂಡರ್ ಪಾಸ್ ಕೆಳಗಡೆ ಆಶ್ರಯ ಪಡೆದಿದ್ದಾರೆ. ಜೊತೆಗೆ ಹವಾಮಾನ ಇಲಾಖೆ ಕೂಡ ಬೆಂಗಳೂರಿನಲ್ಲಿ 3 ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಸುಳಿಗಾಳಿ ಪರಿಣಾಮ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮೂರು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜೂ.11ರವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದೆ. ಉತ್ತರ ಕರ್ನಾಟಕದ ಕೆಲವೆಡೆ ಮತ್ತು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಂಭವವಿದೆ.
ಇದನ್ನೂ ಓದಿ: ಇಂದಿನಿಂದ ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಧಾರಾಕಾರ ಮಳೆ, ರೆಡ್ ಅಲರ್ಟ್
ಇಂದಿನಿಂದ ಜೂನ್ 11ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನ ಒಂದೆರೆಡು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬಿರುಗಾಳಿ ಸಹಿತ ಭಾರಿ ಮಳೆ ಹಿನ್ನೆಲೆ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆ
ಚಾಮರಾಜನಗರ, ಮೈಸೂರು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:29 pm, Sun, 9 June 24