AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rains: ಬಿಸಿಲಿನ ತಾಪಕ್ಕೆ ನಲುಗಿದ್ದ ಬೆಂಗಳೂರಿಗೆ ಮಳೆಯ ಸಿಂಚನ

ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಮಳೆ ಆಗಿದೆ. ಆ ಮೂಲಕ ಬಿಸಿಲಿನ ತಾಪಕ್ಕೆ ನಲುಗಿದ್ದ ಬೆಂಗಳೂರಿಗೆ ಮಳೆಯ ಸಿಂಚನವಾಗಿದೆ. ದಿಢೀರ್​ ಮಳೆಗೆ ಸಿಟಿಮಂದಿ ಮತ್ತು ವಾಹನ ಸವಾರರು ಪರದಾಡಿದರು. ಇನ್ನು ಬೆಂಗಳೂರು ಸೇರಿದಂತೆ ಕೋಲಾರದಲ್ಲೂ ಸಾಧಾರಣೆ ಮಳೆ ಸುರಿದಿದೆ. ಇತ್ತ ಕಾಫಿನಾಡಿನಲ್ಲಿ ಬಿರುಗಾಳಿ ಆರ್ಭಟ ಮುಂದುವರೆದಿದೆ.

Bengaluru Rains: ಬಿಸಿಲಿನ ತಾಪಕ್ಕೆ ನಲುಗಿದ್ದ ಬೆಂಗಳೂರಿಗೆ ಮಳೆಯ ಸಿಂಚನ
ಮಳೆ Image Credit source: tv9 kannada
ಗಂಗಾಧರ​ ಬ. ಸಾಬೋಜಿ
|

Updated on:Mar 29, 2026 | 9:20 PM

Share

ಬೆಂಗಳೂರು, ಮಾರ್ಚ್​ 29: ಬಿರು ಬೇಸಿಗೆಯಲ್ಲೇ ಮಳೆ ಅಬ್ಬರಿಸುತ್ತಿದೆ. ರಾಜ್ಯದ ಇಂದು ಕೂಡ ಮಳೆ (Rain) ಸುರಿದಿದ್ದು, ಮಳೆರಾಯನ ಹೊಡೆತಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಕೋಲಾರ, ಚಿಕ್ಕಮಗಳೂರು, ಹಾವೇರಿಯಲ್ಲಿ ಮಳೆ ಆಗಿದೆ. ಇತ್ತ ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲೂ ಧಾರಾಕಾರ ಮಳೆ ಸುರಿದಿದ್ದು ವಾಹನ ಸವಾರರು ಪರದಾಡಿದರು. ದಿಢೀರ್​ ಮಳೆಗೆ ಸಿಟಿಮಂದಿ ಹಿಡಿಶಾಪ ಹಾಕಿದ್ದಾರೆ.

ಏಲ್ಲೆಲ್ಲಿ ಮಳೆ?

ಬಿಸಿಲಿನ ತಾಪಕ್ಕೆ ನಲುಗಿದ್ದ ಬೆಂಗಳೂರಿಗೆ ಮಳೆಯ ಸಿಂಚನವಾಗಿದೆ. ಮಲ್ಲೇಶ್ವರಂ, ಮೆಜೆಸ್ಟಿಕ್, ಹೈಗ್ರೌಂಡ್ಸ್, ಫ್ರೀಡಂಪಾರ್ಕ್ ಸೇರಿದಂತೆ ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ. ಇನ್ನು ಮುಂದಿನ ಮೂರು ಗಂಟೆಗಳ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ಅದರಂತಯೇ ಇದೀಗ ನಗದಲ್ಲಿ ಗುಡುಗು ಹಾಗೂ ಮಿಂಚು ಸಹಿತ ಮಳೆ ಸುರಿಯುತ್ತಿದ್ದು, ಜನರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.

ಇದನ್ನೂ ಓದಿ: ಕರ್ನಾಟಕ ಹವಾಮಾನ ವರದಿ: ಹಾಸನ ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಮಳೆ; 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಇನ್ನು ಬೆಂಗಳೂರು ನಗರ, ಗ್ರಾಮಾಂತರ ಸೇರಿದಂತೆ ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಹಾಗೂ ರಾಮನಗರ ಜಿಲ್ಲೆಗಳಿಗೂ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ.

ಕೋಲಾರ ಜಿಲ್ಲೆಯಲ್ಲಿ ಸಾಧಾರಣ ಮಳೆ

ಕೋಲಾರ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಮಳೆ ಸುರಿದೆ. ಕೋಲಾರ, ಬಂಗಾರಪೇಟೆ ಸೇರಿದಂತೆ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆ ಆಗಿದ್ದು, ಆ ಮೂಲಕ ಬಿಸಿಲ ಬೇಗೆಯಿಂದ ಬೆಂದಿದ್ದ ಭೂಮಿಗೆ ಮಳೆರಾಯ ತಂಪೆರೆದಿದ್ದಾನೆ.

ಕಾಫಿನಾಡಿನಲ್ಲಿ ಮುಂದುವರಿದ ಬಿರುಗಾಳಿ ಆರ್ಭಟ: ಸಾಲು ಸಾಲು ಅವಾಂತರ

ಇನ್ನು ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆ ಕೊಂಚ ಕಡಿಮೆಯಾಗಿದ್ದರೂ ಬಿರುಗಾಳಿ ಆರ್ಭಟ ಮುಂದುವರಿದಿದೆ. ಬಿರುಗಾಳಿ ಆರ್ಭಟಕ್ಕೆ ಬಾತ್ರೂಮ್ ಮತ್ತು ದನದ ಹಟ್ಟಿಗೆ ಹಾಕಿದ್ದ ಸಿಮೆಂಟ್​ ಸೀಟ್​ಗಳು ಹಾರಿ ಹೋದ ಘಟನೆ ಚಿಕ್ಕಮಗಳೂರು ತಾಲೂಕಿನ ಹುಕ್ಕುಂದ ಗ್ರಾಮದಲ್ಲಿ ನಡೆದಿದೆ. ಸದ್ಯ ಬಿರುಗಾಳಿ ಆರ್ಭಟ ಆತಂಕ ಸೃಷ್ಟಿ ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:01 pm, Sun, 29 March 26

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ