ಬೆಂಗಳೂರಿನ ವಿವಿಧೆಡೆ ಗಾಳಿ ಮಳೆ: ಸಂಚಾರ ಅಸ್ತವ್ಯಸ್ತ, ವಾಹನ ಸವಾರರ ಪರದಾಟ

Bengaluru Rain: ಬೆಂಗಳೂರಿನ ಹಲವೆಡೆ ಸುರಿದ ಮಳೆಯು ಬಿಸಿಲ ಬೇಗೆಯಿಂದ ಬಳಲಿದ ರಾಜಧಾನಿಯ ಜನರಿಗೆ ತಂಪೆರೆದಿದೆ. ನಗರದ ವಿವಿಧೆಡೆ ಗಾಳಿ ಸಹಿತ ಸಾಧಾರಣ ಮಳೆಯಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು. ಮುಂಜಾಗ್ರತಾ ಕ್ರಮವಾಗಿ ಕೆ.ಆರ್. ಸರ್ಕಲ್ ಅಂಡರ್ ಪಾಸ್ ಬಂದ್ ಮಾಡಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ರಾಜ್ಯದ ಹಲವೆಡೆ ಮುಂದಿನ ದಿನಗಳಲ್ಲಿ ಭಾರಿ ಮಳೆಯ ನಿರೀಕ್ಷೆಯಿದೆ.

ಬೆಂಗಳೂರಿನ ವಿವಿಧೆಡೆ ಗಾಳಿ ಮಳೆ: ಸಂಚಾರ ಅಸ್ತವ್ಯಸ್ತ, ವಾಹನ ಸವಾರರ ಪರದಾಟ
ಮಳೆ
Edited By:

Updated on: May 18, 2026 | 4:47 PM

ಬೆಂಗಳೂರು, ಮೇ 18: ಕಳೆದ ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ತತ್ತರಿಸಿದ್ದ ರಾಜಧಾನಿ ಬೆಂಗಳೂರಿಗರಿಗೆ ವರುಣ ತಂಪೆರೆದಿದ್ದಾನೆ. ನಗರದ ವಿವಿಧೆಡೆ ಗಾಳಿ ಸಹಿತ ಮಳೆ (Rain) ಸುರಿದಿದ್ದು, ಏಕಾಏಕಿ ಸುರಿದ ಮಳೆಗೆ ವಾಹನ ಸವಾರರು ಪರದಾಡಿದ ಪ್ರಸಂಗ ನಡೆದಿದೆ. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದವರು ಮಳೆಯಿಂದ ಸಮಸ್ಯೆಗೆ ಸಿಲುಕಿದ್ದು, ರಸ್ತೆ ಬದಿಗಳಲ್ಲೇ ಬೈಕ್ ನಿಲ್ಲಿಸಿ ಬಸ್ ನಿಲ್ದಾಣಗಲ್ಲಿ, ಅಂಗಡಿ ಮುಂಗಟ್ಟುಗಳ ಎದುರು ಸವಾರರು ನಿಂತ ದೃಶ್ಯಗಳು ಕಂಡುಬಂದಿವೆ. ನಗರದ ಹಲವು ರಸ್ತೆಗಳು ಮಳೆ‌ನೀರಿನಿಂದ ಆವೃತವಾಗಿದ್ದು, ತಗ್ಗು ಪ್ರದೇಶದ ರಸ್ತೆಗಳು ಕೆರೆಯಂತಾಗಿವೆ.

ಮುಖ್ಯಾಂಶಗಳು

  • ಬಿಸಿಲ ಬೇಗೆಯಿಂದ ಬೆಂದಿದ್ದ ಬೆಂಗಳೂರಿಗರಿಗೆ ತಂಪೆರೆದ ವರುಣ
  • ನಗರದ ವಿವಿಧೆಡೆ ಗಾಳಿ ಸಹಿತ ಸುರಿದ ಸಾಧಾರಣ ಮಳೆ
  • ಮಳೆ ಕಾರಣ ಕೆಲವೆಡೆ ವಾಹನಗಳ ಸಂಚಾರಕ್ಕೆ ತೊಡಕು

ವಸಂತನಗರ, ಸಿಟಿ ಮಾರ್ಕೆಟ್​​, ಮೆಜೆಸ್ಟಿಕ್, ಶಾಂತಿನಗರ, ಜಯನಗರ, ಜೆ.ಪಿ. ನಗರ, ಬನಶಂಕರಿ, ಕೋಣನಕುಂಟೆ, ಹೆಬ್ಬಾಳ, ಯಲಹಂಕ, ಸದಾಶಿವನಗರ, ರಾಜಾಜಿನಗರ, ವಿಜಯನಗರ, ಚಂದ್ರಾಲೇಔಟ್, ಇಂದಿರಾ ನಗರ, ಲಗ್ಗೆರೆ, ನಂದಿನಿ ಲೇಔಟ್, ಮಹಾಲಕ್ಷ್ಮೀ ಲೇಔಟ್, ಸುಬ್ರಮಣ್ಯ ನಗರ, ನಾಗರಬಾವಿ, ಮೂಡಲಪಾಳ್ಯ, ಗಿರಿನಗರ, ಬಸವನಗುಡಿ, ಮಲ್ಲೇಶ್ವರಂ, ಮೆಜೆಸ್ಟಿಕ್, ಶೇಷಾದ್ರಿಪುರಂ ಸೇರಿದಂತೆ ಹಲವೆಡೆ ವರುಣನ ಆಗಮನವಾಗಿದೆ.

ಇದನ್ನೂ ಓದಿ: ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ, ಚಿಕ್ಕಮಗಳೂರಿನಲ್ಲಿ ಆರೆಂಜ್ ಅಲರ್ಟ್!

ಕೆ.ಆರ್. ಸರ್ಕಲ್ ಅಂಡರ್​​ಪಾಸ್​​ ಬಂದ್​​

ಇನ್ನು ಮಳೆ ಹಿನ್ನೆಲೆ ನೀರು ಸಂಗ್ರಹಣೆ ಸಾಧ್ಯತೆ ಇರುವ ಕಾರಣ ಮುಂಜಾಗ್ರತ ಕ್ರಮವಾಗಿ ಕೆ.ಆರ್. ಸರ್ಕಲ್ ಅಂಡರ್ ಪಾಸ್ ಬಂದ್ ಮಾಡಲಾಗಿದೆ. ಬ್ಯಾರಿಕೇಡ್ ಹಾಕುವ ಮೂಲಕ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇರುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ, ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಮಳೆಯ ನಿರೀಕ್ಷೆ ಇದ್ದು, ಗಂಟೆಗೆ 40-50 ಕಿ.ಮೀ. ಗಾಳಿ, ಗುಡುಗು ಸಹಿತ ವರುಣ ಅಬ್ಬರಿಸಲಿದ್ದಾನೆ ಎಂದು ಇಲಾಖೆ ಎಚ್ಚರಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:44 pm, Mon, 18 May 26

ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
Loading...
Unable to load recommendations.
Follow Us