AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Weather update: ಬೆಂಗಳೂರಿನ ಕೆ.ಆರ್ ಮಾರ್ಕೆಟ್, ಗಿರಿನಗರ ಸೇರಿ ಹಲವೆಡೆ ಬೆಳ್ಳಂಬೆಳಗ್ಗೆ ವರುಣನ ಆರ್ಭಟ!

ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಮಳೆರಾಯನ ಆರ್ಭಟ ಜೋರಾಗಿದ್ದು, ಕೆ.ಆರ್ ಮಾರ್ಕೆಟ್, ಗಿರಿನಗರ ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ.ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 24ರವರೆಗೆ ಮಳೆ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಉತ್ತಮ ಮಳೆಯಾಗಲಿದ್ದು, ಮುಂಬರುವ ಚಳಿಗಾಲದಲ್ಲಿ ಚಳಿಯ ತೀವ್ರತೆ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Bengaluru Weather update: ಬೆಂಗಳೂರಿನ ಕೆ.ಆರ್ ಮಾರ್ಕೆಟ್, ಗಿರಿನಗರ ಸೇರಿ ಹಲವೆಡೆ ಬೆಳ್ಳಂಬೆಳಗ್ಗೆ ವರುಣನ ಆರ್ಭಟ!
ಸಾಂದರ್ಭಿಕ ಚಿತ್ರImage Credit source: PTI
ಭಾವನಾ ಹೆಗಡೆ
|

Updated on:Oct 23, 2026 | 7:14 AM

Share

ಮುಖ್ಯಾಂಶಗಳು

  • ಬೆಂಗಳೂರಿನ ಕೆ.ಆರ್. ಮಾರುಕಟ್ಟೆ ಸೇರಿದಂತೆ ಹಲವೆಡೆ ಮಳೆ.
  • ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 24ರವರೆಗೆ ಮಳೆ ಮುನ್ಸೂಚನೆ.
  • ರಾಜ್ಯದಲ್ಲಿ ಡಿಸೆಂಬರ್-ಫೆಬ್ರವರಿ ನಡುವೆ ಚಳಿಯ ತೀವ್ರತೆ ಹೆಚ್ಚಳ.

ಬೆಂಗಳೂರು, ಅಕ್ಟೋಬರ್ 23: ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಮಳೆರಾಯನ ಆರ್ಭಟ ಹೆಚ್ಚಾಗಿದೆ. ನಗರದ ಕೆ.ಆರ್. ಮಾರುಕಟ್ಟೆ, ರಿಚ್‌ಮಂಡ್ ಟೌನ್, ನಂಜಪ್ಪ ಸರ್ಕಲ್ ಮತ್ತು ಗಿರಿನಗರ ಸೇರಿದಂತೆ ಹಲವು ಪ್ರಮುಖ ಪ್ರದೇಶಗಳಲ್ಲಿ ಮಳೆ ಕಂಡುಬಂದಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಇಂದು ಮತ್ತು ನಾಳೆ ರಾಜ್ಯದಾದ್ಯಂತ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಹವಾಮಾನ ಇಲಾಖೆಯ ವರದಿಯಂತೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.

ಮಳೆಯಲ್ಲಿ ಸ್ಕಿಡ್ ಆಗಿ ಬಿದ್ದ ಮಹಿಳೆ

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಗುರುವಾರ ಸುರಿದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಂಗಳೂರಿನ ಕೆ.ಆರ್. ವೃತ್ತದ ಸಿಗ್ನಲ್‌ನಲ್ಲಿ ಸ್ಕಿಡ್ ಆಗಿ ದ್ವಿಚಕ್ರ ವಾಹನದಿಂದ ಬಿದ್ದ ಮಹಿಳೆಯನ್ನು ಪೊಲೀಸರು ರಕ್ಷಿಸಿದ್ದು, ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಸಿಡಿಲು ಬಡಿದು ಹಾಸಿಗೆ ತಯಾರಿಕಾ ಘಟಕ ಹೊತ್ತಿ ಉರಿದು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮವಾಗಿವೆ. ಇದರೊಂದಿಗೆ ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಸಾಗರ ನಗರದಲ್ಲೂ ಬಿರುಗಾಳಿ ಸಹಿತ ಸುರಿದ ಮಳೆಗೆ ರಸ್ತೆಗಳಲ್ಲಿ ನೀರು ನಿಂತು ಸವಾರರು ಪರದಾಡುವಂತಾಯಿತು. ಇಂದೂ ಸಹ ಬೆಳ್ಳಂಬೆಳಗ್ಗೆ ಬೆಂಗಳೂರಿನ ಹಲವೆಡೆ ಸಾಧಾರಣ ಮಳೆಯಾಗಿದೆ. ಇಂದಿನಂತೆ ನಾಳೆಯೂ (ಅ.24) ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಾಳೆ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಭಾರಿ ಮಳೆ ಬೀಳುವ ಮುನ್ಸೂಚನೆ ಇದೆ. ಇದರೊಂದಿಗೆ ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗಲಿದೆ. ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಂಭವವಿದ್ದು, ಬಳ್ಳಾರಿ, ಚಿಕ್ಕಬಳ್ಳಾಪುರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ಇದನ್ನೂ ಓದಿ Karnataka Weather: ಅಕ್ಟೋಬರ್​​ 24ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​​

ಮುಂಬರುವ ಮೂರು ತಿಂಗಳಲ್ಲಿ ನಗರದಲ್ಲಿ ಚಳಿಯ ವಾತಾವರಣ

ಮಳೆ ಮುನ್ಸೂಚನೆಯ ನಡುವೆಯೂ ಮುಂಬರುವ ಚಳಿಗಾಲದ ಕುರಿತು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಡಿಸೆಂಬರ್, ಜನವರಿ ಹಾಗೂ ಫೆಬ್ರವರಿ ತಿಂಗಳಲ್ಲಿ ಉತ್ತಮ ಚಳಿ ಇರಲಿದ್ದು, ದಕ್ಷಿಣ ಒಳನಾಡಿಗೆ ಹೋಲಿಸಿದರೆ ಉತ್ತರ ಒಳನಾಡಿನಲ್ಲಿ ಚಳಿಯ ತೀವ್ರತೆ ಹೆಚ್ಚಿರಲಿದೆ. ಕರಾವಳಿ ಭಾಗದಲ್ಲಿ ಚಳಿಯ ಪ್ರಭಾವ ಕಡಿಮೆ ಇರಲಿದೆ. ಒಟ್ಟಿನಲ್ಲಿ ಅಕ್ಟೋಬರ್ ಅಂತ್ಯದವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:03 am, Fri, 23 October 26

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ