Bengaluru Rains: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಸಾಧ್ಯತೆ; ಕರಾವಳಿ, ಉತ್ತರ ಕರ್ನಾಟಕದಲ್ಲಿ ಒಣಹವೆ

Karnataka Weather Today: ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಇಂದು ಒಣಹವೆ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಮಳೆಯ ಜೊತೆಗೆ ಚಳಿಯ ವಾತಾವರಣವೂ ಹೆಚ್ಚಾಗಲಿದೆ.

Bengaluru Rains: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಸಾಧ್ಯತೆ; ಕರಾವಳಿ, ಉತ್ತರ ಕರ್ನಾಟಕದಲ್ಲಿ ಒಣಹವೆ
ಮಳೆ
Follow us
TV9 Web
| Updated By: Digi Tech Desk

Updated on:Dec 28, 2022 | 11:17 AM

Bangalore Rains: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ (Bengaluru Weather) ಇಂದು (ಡಿ. 28) ಕೂಡ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಇಂದು ದಕ್ಷಿಣ ಒಳನಾಡಿನ (Karnataka Rain) ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಮೈಸೂರು ಮತ್ತು ರಾಮನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಇಂದು ಒಣಹವೆ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಚಳಿಯ ವಾತಾವರಣವೂ ಹೆಚ್ಚಾಗಲಿದೆ. ಅದರ ಜೊತೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತೆ ಪ್ರಬಲ ವಾಯುಭಾರ ಕುಸಿತವಾಗಿರುವುದರಿಂದ ಇಂದು ಕೂಡ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಇಂದಿನಿಂದ ಡಿ. 29ರವರೆಗೆ ಕರ್ನಾಟಕದ ಹಲವೆಡೆ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Rain Alert ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮುಂದಿನ 4 ದಿನ ಕರ್ನಾಟಕದ ಹಲವೆಡೆ ಮಳೆ

ಇಂದು ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಡಿ. 30ರವರೆಗೂ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಇನ್ನೂ 2 ದಿನ ತುಂತುರು ಮಳೆಯಾಗಲಿದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ 2 ದಿನ ಎಂದರೆ ಡಿಸೆಂಬರ್‌ 29ರವರೆಗೆ ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಬೆಂಗಳೂರು, ಮಂಡ್ಯ, ಮೈಸೂರು, ಕೋಲಾರ, ರಾಮನಗರದಲ್ಲಿ ಮಳೆಯಾಗಲಿದೆ. ನಾಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: Karnataka Rain: ಮೈಸೂರು, ಕೊಡಗು, ಚಾಮರಾಜನಗರದಲ್ಲಿ ಇಂದು ವರುಣನ ಆರ್ಭಟ; ಡಿ. 29ರವರೆಗೆ ಈ ಜಿಲ್ಲೆಗಳಲ್ಲಿ ಮಳೆ

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಲಕ್ಷದ್ವೀಪ, ಕೇರಳ ಮತ್ತು ತಮಿಳುನಾಡಿನಲ್ಲಿ ಗುಡುಗು ಸಹಿತ ಚದುರಿದಂತೆ ಮಳೆಯಾಗುವ ಮುನ್ಸೂಚನೆ ಇದೆ. ಅರುಣಾಚಲ ಪ್ರದೇಶ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಸಿಕ್ಕಿಂನಲ್ಲಿ ಚದುರಿದ ಮಳೆ ಸಂಭವಿಸಬಹುದು. ಉತ್ತರ ರಾಜಸ್ಥಾನ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಶೀತದ ಅಲೆಯ ಪರಿಸ್ಥಿತಿಗಳು ಉಂಟಾಗಲಿದೆ. ಪಂಜಾಬ್‌ನಲ್ಲಿ ದಟ್ಟವಾದ ಮಂಜು ತುಂಬಿರುವ ಸಾಧ್ಯತೆಯಿದೆ. ಒಡಿಶಾ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಆಂಧ್ರಪ್ರದೇಶ, ರಾಜಸ್ಥಾನ, ದೆಹಲಿ ಮತ್ತು ಚಂಡೀಗಢಗಳಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದೆ. ದೇಶದ ಉಳಿದ ಭಾಗಗಳಲ್ಲಿ ಶುಷ್ಕ ಹವಾಮಾನವನ್ನು ನಿರೀಕ್ಷಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:24 am, Wed, 28 December 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್