AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ವರುಣಾರ್ಭಟಕ್ಕೆ ಮೊದಲ ಬಲಿ: ಯಾವ್ಯಾವ ಏರಿಯಾದಲ್ಲಿ ಎಷ್ಟು ಮಳೆ? ಇಲ್ಲಿದೆ ವಿವರ

ಬೆಂಗಳೂರಿನಲ್ಲಿ ನಿರಂತರ ಧಾರಾಕಾರ ಮಳೆಯಿಂದಾಗಿ ಗೋಡೆ ಕುಸಿದು ಓರ್ವ ಮಹಿಳೆ ಮೃತಪಟ್ಟಿದ್ದಾರೆ. ವೈಟ್‌ಫೀಲ್ಡ್‌ನಲ್ಲಿ ದುರಂತ ಸಂಭವಿಸಿದೆ. ಮೃತ ಮಹಿಳೆಯ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಮಳೆಯಿಂದಾಗಿ ಹಲವು ಮನೆಗಳು ಹಾನಿಗೊಳಗಾಗಿವೆ. ಯಾವ್ಯಾವ ಏರಿಯಾದಲ್ಲಿ ಎಷ್ಟು ಮಳೆ ಆಗಿದೆ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರಿನ ವರುಣಾರ್ಭಟಕ್ಕೆ ಮೊದಲ ಬಲಿ: ಯಾವ್ಯಾವ ಏರಿಯಾದಲ್ಲಿ ಎಷ್ಟು ಮಳೆ? ಇಲ್ಲಿದೆ ವಿವರ
ಮೃತ ಮಹಿಳೆ ಶಶಿಕಲಾ
Anil Kalkere
| Updated By: ಗಂಗಾಧರ​ ಬ. ಸಾಬೋಜಿ|

Updated on:May 19, 2025 | 5:47 PM

Share

ಬೆಂಗಳೂರು, ಮೇ 19: ನಗರದಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಸುರಿದ ಮಳೆ (rain) ಹಲವು ಅನಾಹುತಗಳನ್ನು ಸೃಷ್ಟಿಸಿದೆ. ನಿನ್ನೆ ತಡರಾತ್ರಿ ಕೂಡ ಮಳೆ ಆರ್ಭಟಿಸಿದ್ದು, ವರ್ಷದ ಮೊದಲ ಬಲಿ (death) ಪಡೆದುಕೊಂಡಿದೆ. ರಣ ರಕ್ಕಸ ಮಳೆಗೆ ಗೋಡೆ ಕುಸಿದು 35 ವರ್ಷದ ಮಹಿಳೆಯೋರ್ವರು ಪ್ರಾಣಬಿಟ್ಟಿದ್ದಾರೆ. ನಗರದ ವೈಟ್ ಫೀಲ್ಡ್​​ನ ಚನ್ನಸಂದ್ರದಲ್ಲಿ ದುರಂತ ಸಂಭವಿಸಿದೆ. ಖಾಸಗಿ ಕಂಪನಿಯ ಉದ್ಯೋಗಿ ಶಶಿಕಲಾ(35) ಮೃತ ಮಹಿಳೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಭೇಟಿ ನೀಡಿದ್ದಾರೆ.

ವೈಟ್ ಫೀಲ್ಡ್​​ ಇಂಡರ್ಷಿಯಲ್ ಏರಿಯಾದ ಇಸ್ಮೋ ಮೈಕ್ರೋ ಸಿಸ್ಟ್ ಕಂಪನಿಯಲ್ಲಿ ಮೃತ ಶಶಿಕಲಾ ಕೆಲಸ ಮಾಡುತ್ತಿದ್ದರು. ಎಂದಿನಂತೆ ಇಂದು ಕೂಡ ಬೆಳಗ್ಗೆ 6.40 ನಿಮಿಷಕ್ಕೆ ಫಸ್ಟ್ ಶಿಫ್ಟ್​ಗೆ ಕೆಲಸಕ್ಕೆ ಬಂದಿದ್ದರು.  ಕೆಲಸಕ್ಕೆ ಹಾಜರಾಗಿ ಕೆಲವೇ ಹೊತ್ತಿನಲ್ಲೆ ಬೃಹತ್ ಗೋಡೆ ಕುಸಿದು ದುರಂತ ಸಂಭವಿಸಿದೆ.

ಐದು ಲಕ್ಷ ರೂ ಪರಿಹಾರ: ಪ್ರತಿಕ್ರಿಯೆ ನೀಡಿದ ಸಿಎಂ

ಇನ್ನು ಶಶಿಕಲಾ ಕೆಲಸ ಮಾಡಿಕೊಂಡಿದ್ದ ಕಂಪನಿಯಿಂದಲೇ ಪರಿಹಾರಕ್ಕೆ ಬಿಬಿಎಂಪಿ ಪಾಲಿಕೆ ಮುಖ್ಯ ಆಯುಕ್ತರಿಂದ ಸೂಚನೆ ಹಿನ್ನೆಲೆ ಮೃತ ಮಹಿಳೆಯ ಕುಟುಂಬಕ್ಕೆ ಐದು ಲಕ್ಷ ರೂ ಪರಿಹಾರ ಧನ ಘೋಷಿಸಲಾಗಿದೆ. ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯರನ್ನು ಮಾಧ್ಯಮದವರು ಕೇಳಿದಾಗ ಪ್ರತಿಕ್ರಿಯೆ ನೀಡಿದೆ ಕೈ ಸನ್ನೆ ಮಾಡಿ ತೆರಳಿದ್ದಾರೆ.

ಇದನ್ನೂ ಓದಿ
Image
ಮಳೆಗೆ ಸಣ್ಣಪುಟ್ಟ ಸಮಸ್ಯೆ ಆಗೇ ಆಗುತ್ತೆ: ಬಿಬಿಎಂಪಿ ಆಯುಕ್ತ ಉಡಾಫೆ ಮಾತು!
Image
ಬೆಂಗಳೂರು ಮಳೆ: ಸಿಸಿಬಿ ಕಚೇರಿಯೊಳಗೆ ನುಗ್ಗಿದ ನೀರು, ಅವಾಂತರ
Image
ಬೆಂಗಳೂರು ಮಳೆ ಸೃಷ್ಟಿಸಿದ ಅಧ್ವಾನ ಒಂದೆರಡಲ್ಲ; ಎಲ್ಲೆಲ್ಲಿ ಏನೇನಾಯ್ತು ನೋಡಿ
Image
ಬೆಂಗಳೂರು ಸೇರಿ ಕರ್ನಾಟಕದ 18 ಜಿಲ್ಲೆಗಳಲ್ಲಿ ಹುಚ್ಚು ಮಳೆ

ಎಲ್ಲೆಲ್ಲಿ ಎಷ್ಟು ಪ್ರಮಾಣ ಮಳೆ

ಕೆಂಗೇರಿ ಭಾಗದಲ್ಲೇ ಅತಿ ಹೆಚ್ಚು ಮಳೆ ಪ್ರಮಾಣ ದಾಖಲಾಗಿದೆ. ಬೆಂಗಳೂರಿನ ಕೆಂಗೇರಿಯಲ್ಲಿ 132 ಮಿಲಿ ಮೀಟರ್, ವಡೇರಹಳ್ಳಿಯಲ್ಲಿ 132 ಮಿ.ಮೀ, ಮಾರತಹಳ್ಳಿ 91 ಮಿ.ಮೀ, ಚಿಕ್ಕಬಾಣವಾರ 127 ಮಿ.ಮೀ., ಮಾದನಾಯಕಹಳ್ಳಿ 116.3 ಮಿ.ಮೀ, ಕೊಡಿಗೆಹಳ್ಳಿ 100 ಮಿ.ಮೀ., ಕೋರಮಂಗಲ 96 ಮಿ.ಮೀ ಮಳೆಯಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಮಾಹಿತಿ ನೀಡಿದೆ.

ನಿರಂತರ ಮಳೆಗೆ ಕುಸಿದು ಬಿದ್ದ ಮನೆ: ತಪ್ಪಿದ ಭಾರೀ ಅನಾಹುತ

ಇನ್ನು ತುಮಕೂರಿನ ಮುದ್ದರಾಮಯ್ಯನ ಪಾಳ್ಯದಲ್ಲಿ ನಿರಂತರ ಮಳೆಗೆ ಮನೆಯೊಂದು ಕುಸಿದು ಬಿದ್ದಿರುವಂತಹ ಘಟನೆ ನಡೆದಿದೆ.

ಇದನ್ನೂ ಓದಿ: ಕರಾವಳಿಗೆ ಹೋಗುವ ಅವಶ್ಯಕತೆ ಇಲ್ಲ, ಬೆಂಗಳೂರಿನಲ್ಲೇ ಆರಂಭವಾಗಿದೆ ಸರ್ಫ್​ ರೇಡ್​, ಡಿಕೆಶಿ ಮೊದಲ ರೈಡರ್​!

ನಿನ್ನೆ ರಾತ್ರಿ ಸುರಿದ ಮಳೆಗೆ ರಂಗಮಣಿ ಎಂಬುವವರಿಗೆ ಸೇರಿದ ಮನೆ ಕುಸಿದಿದೆ. ಈ ಹಿಂದೆಯೇ ಮನೆ ಬಿರುಕು ಬಿಟ್ಟಿತ್ತು. ಹೀಗಾಗಿ ಎರಡು ದಿನದ ಹಿಂದೆ ನಿವಾಸಿಗಳು ಮನೆ ತೊರೆದಿದ್ದರು. ಅದೃಷ್ಟವಷಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:37 pm, Mon, 19 May 25