ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಟೈಮರ್ ಫಿಕ್ಸ್ ಮಾಡಿ ಸ್ಪೋಟಿಸಲು ಬಳಿಸಿದ್ದ ಕೆಮಿಕಲ್ಸ್ ಪತ್ತೆ

Rameshwaram Cafe Bomb Blast: ಬೆಂಗಳೂರಿನ ವೈಟ್‌ಫೀಲ್ಡ್‌ನ ಬ್ರೂಕ್‌ ಫೀಲ್ಡ್‌ ಸಮೀಪದ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸ್ಥಳ ಪರಿಶೀಲನೆ ನಡೆಸಲಾಗುತ್ತಿದೆ. ಈಗಾಗಲೇ ಸ್ಫೋಟಗೊಂಡ ಸ್ಥಳದಲ್ಲಿ ಬ್ಯಾಟರಿ ಜೊತೆಗೆ ಟೈಮರ್ ಪತ್ತೆಯಾಗಿತ್ತು. ಇದೀಗ, ಟೈಮರ್ ಫಿಕ್ಸ್ ಮಾಡಿ ಸ್ಪೋಟಿಸಲು ಬಳಿಸಿದ್ದ ರಾಸಾಯನಿಕಗಳು ಪತ್ತೆಯಾಗಿವೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಟೈಮರ್ ಫಿಕ್ಸ್ ಮಾಡಿ ಸ್ಪೋಟಿಸಲು ಬಳಿಸಿದ್ದ ಕೆಮಿಕಲ್ಸ್ ಪತ್ತೆ
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಟೈಮರ್ ಫಿಕ್ಸ್ ಮಾಡಿ ಸ್ಪೋಟಿಸಲು ಬಳಿಸಿದ್ದ ಕೆಮಿಕಲ್ ಪತ್ತೆ
Edited By: Rakesh Nayak Manchi

Updated on: Mar 03, 2024 | 5:33 PM

ಬೆಂಗಳೂರು, ಮಾ.3: ನಗರದ ವೈಟ್‌ಫೀಲ್ಡ್‌ನ ಬ್ರೂಕ್‌ ಫೀಲ್ಡ್‌ ಸಮೀಪದ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ನಡೆದ ಬಾಂಬ್ ಸ್ಫೋಟ (Bomb Blast) ಪ್ರಕರಣ ಸಂಬಂಧ ಸ್ಥಳ ಪರಿಶೀಲನೆ ಮುಂದುವರಿಸಲಾಗಿದೆ. ಈಗಾಗಲೇ ಸ್ಫೋಟಗೊಂಡ ಸ್ಥಳದಲ್ಲಿ ಬ್ಯಾಟರಿ ಜೊತೆಗೆ ಟೈಮರ್ ಪತ್ತೆಯಾಗಿತ್ತು. ಇದೀಗ, ಟೈಮರ್ ಫಿಕ್ಸ್ ಮಾಡಿ ಸ್ಪೋಟಿಸಲು ಬಳಿಸಿದ್ದ ರಾಸಾಯನಿಕಗಳು ಪತ್ತೆಯಾಗಿವೆ.

ಸ್ಪೋಟಕ್ಕೆ ಬಳಸಲಾದ ಕೆಮಿಕಲ್​ಗಳ ಮಾಹಿತಿ ಟಿವಿ9ಗೆ ಲಭ್ಯವಾಗಿದೆ ಉನ್ನತ ಮೂಲಗಳಿಂದ ತಿಳಿದುಬಂದಿದೆ. ಪೊಟ್ಯಾಷಿಯಂ ನೈಟ್ರೇಟ್ ಮತ್ತು ಹೈಡ್ರೋಜನ್ ಪರಾಕ್ಸೈಡ್ ಬಳಸಿ ಕೃತ್ಯ ಎಸಗಲಾಗಿದೆ. ಟೈಮರ್ ಫಿಕ್ಸ್ ಮಾಡಿ ಸ್ಪೋಟಿಸಲು ಈ ರಾಸಾಯನಿಕಗಳನ್ನು ಬಳಕೆ ಮಾಡಲಾಗಿದೆ. ಸದ್ಯ, ಸ್ಫೋಟದ ಅವಶೇಷಗಳ ಮಾದರಿಗಳನ್ನು ಎಫ್ಎಸ್​ಎಲ್ ಮತ್ತು ಸೋಕೋ ಟೀಂ ಸಂಗ್ರಹಿಸಿದೆ.

ಇದನ್ನೂ ಓದಿ: ಬೆಂಗಳೂರಿನ ಹೃದಯ ಭಾಗಬಿಟ್ಟು ಗಡಿ ಭಾಗದಲ್ಲೇ ಬಾಂಬ್ ಇಟ್ಟಿದ್ಯಾಕೆ? ಕೆಫೆ ಸ್ಫೋಟದ ಸಂಚಿನ ರಹಸ್ಯ ಬಯಲು!

ಬ್ಯಾಟರಿ, ಟೈಮರ್ ಪತ್ತೆ

ಸ್ಫೋಟಗೊಂಡ ಸ್ಥಳದಲ್ಲಿ ಈಗಾಗಲೇ ಬ್ಯಾಟರಿ, ಟೈಮರ್ ಪತ್ತೆಯಾಗಿದೆ. ಹೀಗಾಗಿ ಟೈಮರ್ ಇಟ್ಟು ಬಾಂಬ್ ಸ್ಫೋಟ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬಾಂಬ್​ಗೆ ಟೈಮರ್ ಫಿಕ್ಸ್ ಮಾಡಿ ಬ್ಯಾಗಿನ ಒಳಗೆ ಇಟ್ಟು ಸ್ಫೋಟಿಸಲಾಗಿದೆ ಮಾಡಲಾಗಿದೆ ಎಂಬ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಮುಂದುವರಿಸಿದ ಸಿಸಿಬಿ ತನಿಖೆ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈಗಾಗಲೇ ನಾಲ್ವರು ಶಂಕಿತರನ್ನು ವಶಕ್ಕೆ ಪಡೆಯಲಾಗಿದ್ದು, ಆಡುಗೋಡಿ ಟೆಕ್ನಿಕಲ್​ ಸೆಲ್​ಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಅಪರಾಧ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ, ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮೀ ಪ್ರಸಾದ್ ಅವರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:31 pm, Sun, 3 March 24

Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
Follow Us