Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಬಿಗ್ ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ಕೆಫೆ ಎಂಡಿ!

Rameshwaram Cafe Blast: ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಈಗ ಬಿಗ್‌ ಟ್ವಿಸ್ಟ್ ಸಿಕ್ಕಿದೆ. ಹೋಟೆಲ್​ನಲ್ಲಿದ್ದ ಯಾವುದೇ ವಸ್ತು ಸ್ಫೋಟವಾಗಿಲ್ಲ. ಆದ್ರೆ, ಹೊರಗಡೆಯಿಂದ ತಂದಿರುವ ವಸ್ತು ಸ್ಫೋಟವಾಗಿರುವುದು ದೃಢಪಟ್ಟಿದೆ. ಹೀಗಾಗಿ ಸ್ಥಳಕ್ಕೆ ಹೆಚ್ಚುವರಿ ಪೊಲೀಸರು, ಬಾಂಬ್ ಸ್ಕ್ವಾಡ್, ಶ್ವಾನ ದಳ ಸೇರಿದಂತೆ ವಿಧಿ ವಿಜ್ಞಾನ ತಜ್ಞರು ಸ್ಥಳಕ್ಕೆ ದೌಡಾಯಿಸಿ ತಪಾಸಣೆ ನಡೆಸಿದ್ದಾರೆ. ಇನ್ನು ಮೇಲ್ನೋಟಕ್ಕೆ ಇದು ದ್ವೇಷದ ಸ್ಪೋಟ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಬಿಗ್ ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ಕೆಫೆ ಎಂಡಿ!
ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Mar 01, 2024 | 4:34 PM

ಬೆಂಗಳೂರು (ಮಾರ್ಚ್​ 01): ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ (Rameshwaram Cafe Blast) ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಘಟನೆ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಹೊರಗಡೆಯಿಂದ ತಂದಿಟ್ಟಿದ್ದ ಬ್ಯಾಗ್​ನಲ್ಲಿನ ವಸ್ತು ಸ್ಫೋಟವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಮೇಲ್ನೋಟಕ್ಕೆ ಇದು ದ್ವೇಷದ ಸ್ಪೋಟ ಎನ್ನಲಾಗುತ್ತಿದೆ. ಅಂಬಾನಿ ಕುಟುಂಬದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಇದೇ ರಾಮೇಶ್ವರ ಕೆಫೆ ಕ್ಯಾಟರಿಂಗ್ ವಹಿಸಿಕೊಂಡಿದೆ. ಅಲ್ಲದೇ ಭಾರತದ್ಯಾಂತ ಕ್ಯಾಟರಿಂಗ್ ವಿಸ್ತರಿಸಲು ನಿರ್ಧಾರಿಸಿದ್ದರು. ಈ ಹಿನ್ನೆಲೆಯಲ್ಲಿ ಬ್ಯುಸನೆಸ್‌ ಸಂಬಂಧ ಸ್ಪೋಟಿಸಿರುವ ಬಗ್ಗೆಯೂ ಅನುಮಾನಗಳು ವ್ಯಕ್ತವಾಗಿವೆ.

ಸ್ಫೋಟಕ ಅಂಶ ಬಿಚ್ಚಿಟ್ಟ ರಾಮೇಶ್ವರಂ ಕೆಫೆ ಎಂಡಿ

ಇನ್ನು ಈ ಬಗ್ಗೆ ಟಿವಿ9ಗೆ ರಾಮೇಶ್ವರಂ ಕೆಫೆ ವ್ಯವಸ್ಥಾಪಕ ನಿರ್ದೇಶಕಿ(ಎಂಡಿ) ದಿವ್ಯಾ ಪ್ರತಿಕ್ರಿಯಿಸಿದ್ದು, ರಾಮೇಶ್ವರಂ ಕೆಫೆಯ ಕೈತೊಳೆಯುವ ಸ್ಥಳದಲ್ಲಿ ಸ್ಫೋಟವಾಗಿದೆ. ಕಿಚನ್ ಹೊರಗಡೆ ಪ್ಲೇಟ್​ಗಳನ್ನು ಇಡುವ ಸ್ಥಳದಲ್ಲಿ ಸ್ಫೋಟವಾಗಿದೆ. ಕೆಫೆಯಲ್ಲಿ ವಿದ್ಯುತ್ ಅವಘಡ ಅಥವಾ ಸಿಲಿಂಡರ್ ಸ್ಫೋಟವಾಗಿಲ್ಲ. ಹೊರಗಿನಿಂದ ತಂದಿಟ್ಟ ಬ್ಯಾಗ್ ಸ್ಫೋಟವಾಗಿದೆ. 10 ಸೆಕೆಂಡ್ ಅಂತರದಲ್ಲಿ 2 ಬಾರಿ ಸ್ಫೋಟವಾಗಿದೆ. ಒಂದು ಬ್ಯಾಂಗ್ ತಂದಿಟ್ಟ ನಂತರ ಭಾರಿ ಪ್ರಮಾಣದಲ್ಲಿ ಸ್ಫೋಟವಾಗಿದ್ದು, ನಾಲ್ವರು ಗ್ರಾಹಕರು, ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ: ಹಲವರಿಗೆ ಗಂಭೀರ ಗಾಯ!

ಈ ಹಿಂದೆ 2 ಬಾರಿ ಅನುಮಾನಾಸ್ಪದ ಬ್ಯಾಗ್ ತಂದಿಟ್ಟು ಹೋಗಿದ್ದರು. ಒಂದು ಬ್ಯಾಗ್ ತೆಗೆದು ನೋಡಿದಾಗ ಮಡಕೆ ಕುಡಿಕೆ ಪತ್ತೆಯಾಗಿತ್ತು. ಮತ್ತೊಂದು ಬ್ಯಾಗನ್ನು ನಿರ್ಜನ ಪ್ರದೇಶದಲ್ಲಿರಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆ ಬ್ಯಾಗನ್ನು ಪೊಲೀಸರಿಗೆ ಒಪ್ಪಿಸಿದ್ದೆವು, ಅದರಲ್ಲಿ ಏನಿತ್ತು ಗೊತ್ತಿಲ್ಲ. ಘಟನೆ ಬಗ್ಗೆ ಪೊಲೀಸರಿಗೆ ದೂರನ್ನು ನೀಡಿದ್ದೆವು. ಇಂದು ಕೂಡ ವಾಸ್ ಬೇಸಿನ್ ಬಳಿ ಬ್ಯಾಗ್ ತಂದಿಟ್ಟು ಹೋಗಿದ್ದರು. ಆ ಬ್ಯಾಗ್ ಇರಿಸಿದ್ದ ಸ್ಥಳದಲ್ಲೇ ಇಂದು ಸ್ಫೋಟವಾಗಿದೆ ಎಂದು ಹೇಳಿದರು.

ಸ್ಥಳದಲ್ಲಿ ಪೊಲೀಸರು, ವಿಧಿ ವಿಜ್ಞಾನ ತಜ್ಞರು ಮೊಕ್ಕಂ

ಇನ್ನು ಸ್ಫೋಟದ ಹಿಂದೆ ಹಲವು ಅನುಮಾನಗಳು ವ್ಯಕ್ತವಾದ ಬೆನ್ನಲ್ಲೇ ಸ್ಥಳಕ್ಕೆ ಸುತ್ತಮುತ್ತಲಿನ ಠಾಣೆಯ ಪೊಲೀಸರು, ಹಿರಿಯ ಅಧಿಕಾರಿಗಳು ಘಟನಾ ಸ್ಥಕ್ಕೆ ದೌಡಾಯಿಸಿದ್ದಾರೆ. ಎಸಿಪಿ ರೀನಾ ಸುವರ್ಣ ಮತ್ತು ಮಾರತ್ತಹಳ್ಳಿ ಪೊಲೀಸರು ಸಹ ಸ್ಳಳದಲ್ಲಿ ಮೊಕ್ಕಂ ಹೂಡಿದ್ದಾರೆ. ಇನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸಹ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಇನ್ನು ಈ ಘಟನೆ ಬಗ್ಗೆ ಗೃಹ ಸಚಿವ ಪರಮೇಶ್ವರ್​ ಅವರು ಅಧಿಕಾರಿಗಳ ಬಳಿ ಮಾಹಿತಿ ಪಡೆದುಕೊಂಡಿದ್ದಾರೆ. ಇನ್ನು ರಾಷ್ಟ್ರೀಯ ತನಿಖಾ ದಳ (ಎನ್​ಐಎ)  ತಂಡ ಸಹ ರಾಮೇಶ್ವರಂ ಕೆಫೆಗೆ ಭೇಟಿ ನೀಡಿ ಮಾಹಿತಿ ಪಡೆಯುತ್ತಿದೆ. ಮತ್ತೊಂದು ತಂಡ ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳ ಬಳಿ ಮಾಹಿತಿ ಸಂಗ್ರಹಿಸುತ್ತಿದೆ.

ಕೈ ತೊಳೆಯುವ ಸಿಂಕ್ ಇಟ್ಟಿದ್ದ ಜಾಗದಲ್ಲಿ ಇದ್ದ ಬ್ಯಾಗ್ ಸ್ಪೋಟ ನಡೆದಿದ್ದು, ಇದು ಬೇಕೆಂತಲೇ ಮಾಡಿರುವ ಕೃತ್ಯ ಎಂಬುದು ಮೇಲ್ನೋಟಕ್ಕೆ ತಿಳಿದುಬಂದಿದೆ. ಸಿ ಸಿ ಕ್ಯಾಮರಾ ಪರೀಲನೆ ನಡೆಸಲಾಗುತ್ತಿದ್ದು, ಶಂಕಿತರಿಗಾಗಿ ಹುಡುಕಾಟ ನಡೆಯುತ್ತಿದೆ.  ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಆಗಮಿಸಿದ್ದಾರೆ. ಅಗತ್ಯ ಉಪಕರಣಗಳ ಜೊತೆ ರಾಮೇಶ್ವರಂ ಕೆಫೆಗೆ ಬಂದಿರುವ FSL ತಂಡ ಪರಿಶೀಲನೆ ನಡೆಸಿದೆ. ಅಲ್ಲದೇ ಸ್ಥಳಕ್ಕೆ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ, ಶ್ವಾನ ದಳ  ಬಂದಿದ್ದು, ತಪಾಸಣೆ ನಡೆಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:30 pm, Fri, 1 March 24

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು