AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಾಪರಾಧಗಳಲ್ಲಿ ಬೆಂಗಳೂರಿಗೆ ದೇಶದಲ್ಲೇ 2ನೇ ಸ್ಥಾನ: ಪ್ರಕರಣಗಳ ಸಂಖ್ಯೆ ಒಂದೇ ವರ್ಷದಲ್ಲಿ ಶೇ 133 ರಷ್ಟು ಹೆಚ್ಚಳ

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಪ್ರಕಾರ, ದೇಶದಲ್ಲಿ ಅತಿಹೆಚ್ಚು ಬಾಲಾಪರಾಧ ನಡೆಯುವ ನಗರಗಳಲ್ಲಿ 2ನೇ ಸ್ಥಾನದಲ್ಲಿದೆ ಬೆಂಗಳೂರು. 2023 ರಲ್ಲಿ 427 ಪ್ರಕರಣಗಳು ವರದಿಯಾಗಿದ್ದು, ಅದಕ್ಕಿಂತ ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ 133 ರಷ್ಟು ಹೆಚ್ಚಳವಾಗಿದೆ. ಮಾಧ್ಯಮದ ಪ್ರಭಾವ, ಶಾಲೆ ಬಿಡುವುದು, ಕೌಟುಂಬಿಕ ಅಸ್ಥಿರತೆ ಮತ್ತು ಸಾಮಾಜಿಕ ಒತ್ತಡಗಳು ಬಾಲಾಪರಾಧ ಹೆಚ್ಚಳಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.

ಬಾಲಾಪರಾಧಗಳಲ್ಲಿ ಬೆಂಗಳೂರಿಗೆ ದೇಶದಲ್ಲೇ 2ನೇ ಸ್ಥಾನ: ಪ್ರಕರಣಗಳ ಸಂಖ್ಯೆ ಒಂದೇ ವರ್ಷದಲ್ಲಿ ಶೇ 133 ರಷ್ಟು ಹೆಚ್ಚಳ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Oct 06, 2025 | 8:16 AM

Share

ಬೆಂಗಳೂರು, ಅಕ್ಟೋಬರ್ 6: ದೇಶದಲ್ಲೇ ಅತಿಹೆಚ್ಚು ಬಾಲಾಪರಾಧಗಳು ನಡೆಯುವ ನಗರಗಳ ಪಟ್ಟಿಯಲ್ಲಿ ಬೆಂಗಳೂರು (Bengaluru)  2ನೇ ಸ್ಥಾನದಲ್ಲಿರುವುದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಇತ್ತೀಚಿನ ಅಂಕಿಅಂಶಗಳಿಂದ ತಿಳಿದುಬಂದಿದೆ. 2023 ರಲ್ಲಿ ನಗರದಲ್ಲಿ 427 ಬಾಲಾಪರಾಧ ಪ್ರಕರಣಗಳು ವರದಿಯಾಗಿದ್ದವು. 2022 ರಲ್ಲಿ 200 ಮತ್ತು 2021 ರಲ್ಲಿ 177 ಪ್ರಕರಣಗಳು ದಾಖಲಾಗಿದ್ದರೆ, ಅದಾದ ನಂತರ ಏಕಾಏಕಿ ಪ್ರಕರಣಗಳ ಸಂಖ್ಯೆಯಲ್ಲಿ ಜಿಗಿತ ಕಂಡುಬಂದಿದೆ. 2023ರಲ್ಲಿ 523 ಪ್ರಕರಣಗಳನ್ನು ದಾಖಲಿಸಿರುವ ಚೆನ್ನೈ ಮೊದಲ ಸ್ಥಾನದಲ್ಲಿದೆ.

ಎನ್​​ಸಿಆರ್​ಬಿ ದತ್ತಾಂಶವು ಇತರ ಮಹಾನಗರಗಳಲ್ಲಿ ಬಾಲಾಪರಾಧಗಳಲ್ಲಿ ಇಳಿಕೆ ಮತ್ತು ಏರಿಕೆಯಾಗಿರುವುದನ್ನು ತೋರಿಸಿದೆ. ಹೈದರಾಬಾದ್‌ನಲ್ಲಿ 2022 ರಲ್ಲಿ 300 ಪ್ರಕರಣಗಳು ಇದ್ದುದು, 2023 ರಲ್ಲಿ 180 ಕ್ಕೆ ಇಳಿಕೆಯಾಗಿದೆ. ಆದರೆ ಕೋಲ್ಕತ್ತಾದಲ್ಲಿ 2022 ರಲ್ಲಿ 9 ರಿಂದ 2023 ರಲ್ಲಿ 115 ಕ್ಕೆ ಏರಿಕೆಯಾಗಿದೆ.

ಬಾಲಾಪರಾಧಗಳ ಹೆಚ್ಚಳಕ್ಕೆ ಕಾರಣವೇನು?

ಮಾಧ್ಯಮಗಳಲ್ಲಿ ಅಪರಾಧದ ವೈಭವೀಕರಣ, ರೌಡಿಯಿಸಂನಿಂದ ಬೇಗನೆ ಫೇಮಸ್ ಆಗಿಬಿಡುತ್ತೇವೆ ಎಂಬ ಯುವ ಜನರ ಭ್ರಮೆಯೇ ಗಂಭೀರ ಅಪರಾಧ ಪ್ರಕರಣಗಳ ಹೆಚ್ಚಳಕ್ಕೆ, ಅದರಲ್ಲಿಯೂ ಬಾಲಾಪರಾದಗಳ ಹೆಚ್ಚಳಕ್ಕೆ ಕಾರಣ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇಂತಹ ಅನೇಕ ಪ್ರಕರಣಗಳು 10 ನೇ ತರಗತಿಯ ನಂತರ ಶಾಲೆ ಬಿಡುವುದರಿಂದ ಉಂಟಾಗುತ್ತವೆ. ಇದರಿಂದಾಗಿ ಹದಿಹರೆಯದವರು ಯಾವುದೇ ನಿರ್ದೇಶನವಿಲ್ಲದೆ ಅತಂತ್ರರಾಗುತ್ತಾರೆ ಎಂದು ಅವರು ಅಭಿಪ್ರಾಯಪಟ್ಟಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ. ಬಾಲಕರ ಈ ಅತಂತ್ರ ಸ್ಥಿತಿ ಅಥವಾ ದುರ್ಬಲತೆಯು ಅವರಲ್ಲಿ ಅಪರಾಧ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತದೆ. ಇದು ಅವರ ಗೆಳೆಯರ ಗುಂಪುಗಳಲ್ಲಿ ತ್ವರಿತ ಗುರುತನ್ನು ನೀಡುತ್ತದೆ. ಇದರಿಂದ ಅವರು ಮತ್ತಷ್ಟು ಪ್ರಚೋದನೆಗೆ ಒಳಗಾಗುತ್ತಾರೆ ಎಂದು ಅವರು ಹೇಳಿದ್ದಾರೆ.

ಕೌಟುಂಬಿಕ ಅಸ್ಥಿರತೆ, ಕಡಿಮೆ ಆದಾಯದ ಹಿನ್ನೆಲೆಗಳು ಮತ್ತು ನಿರುದ್ಯೋಗ ಕೂಡ ಬಾಲಕರು, ಯುವಕರನ್ನು ಅಪರಾಧ ಕೃತ್ಯಗಳತ್ತ ಪ್ರೇರೇಪಿಸುತ್ತವೆ. ನ್ಯಾಯ ವ್ಯವಸ್ಥೆಯಲ್ಲಿನ ನ್ಯೂನತೆಗಳನ್ನು ಕೂಡ ಎತ್ತಿತೋರಿಸಿದ ಪೊಲೀಸ್ ಅಧಿಕಾರಿ, ಸಣ್ಣಪುಟ್ಟ ಅಪರಾಧಗಳ ಕಾರಣಕ್ಕೆ ಬಾಲಾಪರಾಧಿಗಳನ್ನು ಬಂಧಿಸುವುದರಿಂದ ಅವರು ಮತ್ತಷ್ಟು ಹೆಚ್ಚಿನ ಅಪರಾಧ ಕೃತ್ಯಗಳನ್ನು ಎಸಗಲು ಪ್ರೇರೇಪಣೆಯಾಗುತ್ತದೆ. ಏಕೆಂದರೆ ಜೈಲುಗಳಿಗೆ ಹೋದರೆ ಅಪರಾಧ ಜಗತ್ತಿಗೆ ಅವರು ತೆರೆದುಕೊಂಡಂತೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರದಲ್ಲಿ ರೌಡಿಶೀಟರ್ ಬರ್ತ್​ಡೇ ಸೆಲೆಬ್ರೇಷನ್: ಸುಪ್ರೀಂ ಚಾಟಿ ಬಳಿಕವೂ ಬುದ್ದಿ ಕಲಿಯದ ಸಿಬ್ಬಂದಿ, ಸಂಸ್ಪೆಡ್ ಸಾಧ್ಯತೆ?

ಬಾಲಾಪರಾಧದ ಹೆಚ್ಚಳವು ಹದಿಹರೆಯದವರಲ್ಲಿ ಹೆಚ್ಚುತ್ತಿರುವ ಭಾವನಾತ್ಮಕ ಮತ್ತು ಸಾಮಾಜಿಕ ಒತ್ತಡಗಳನ್ನು ಪ್ರತಿಬಿಂಬಿಸುತ್ತದೆ ಎಂದು ಮಕ್ಕಳ ಮನಃಶ್ಶಾಸ್ತ್ರಜ್ಞೆ ಡಾ. ನಂದಿನಿ ರಾವ್ ತಿಳಿಸಿರುವುದಾಗಿಯೂ ವರದಿ ಉಲ್ಲೇಖಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ