AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಲಿಫ್ಟ್‌ ಕೇಳಿದ ಯುವತಿ ಮೇಲೆ ಎರಗಿ ಅತ್ಯಾಚಾರ ಎಸಗಿದ್ದ ಕಾಮುಕ ಅರೆಸ್ಟ್, ಸಿಸಿಟಿವಿ ಆಧರಿಸಿ ಆರೋಪಿ ಬಂಧನ

Bengaluru Sexual Assault Case: ಗೆಟ್‌ ಟು ಗೆದರ್‌ ಪಾರ್ಟಿ ಅಂತಾ ಸ್ನೇಹಿತರ ಜೊತೆ ಹೋಗಿ ವಾಪಸ್ ಆಗುವಾಗ ಬೈಕ್‌ನಲ್ಲಿ ಡ್ರಾಪ್‌ ಪಡೆದ ಯುವತಿಯನ್ನು ಬೊಮ್ಮನಹಳ್ಳಿ ಸಮೀಪದ ಶೆಡ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಹೆಚ್​ಎಸ್​ಆರ್​ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ.

ಬೆಂಗಳೂರು: ಲಿಫ್ಟ್‌ ಕೇಳಿದ ಯುವತಿ ಮೇಲೆ ಎರಗಿ ಅತ್ಯಾಚಾರ ಎಸಗಿದ್ದ ಕಾಮುಕ ಅರೆಸ್ಟ್, ಸಿಸಿಟಿವಿ ಆಧರಿಸಿ ಆರೋಪಿ ಬಂಧನ
ಸಿಸಿಟಿವಿಯಲ್ಲಿ ಸೆರೆಯಾದ ಕಾಮುಕ
TV9 Web
| Edited By: |

Updated on:Aug 19, 2024 | 2:39 PM

Share

ಬೆಂಗಳೂರು, ಆಗಸ್ಟ್​.19: ಹೆಚ್ಎಸ್ಆರ್ ಲೇಔಟ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಕಾಮುಕನನ್ನು ಹೆಚ್ಎಸ್ಆರ್ ಲೇಔಟ್ ಪೊಲೀಸರು (HSR Layout Police) ಬಂಧಿಸಿದ್ದಾರೆ. ಆಡುಗೋಡಿಯ ನಿವಾಸದಿಂದ ಆರೋಪಿ ಮುಖೇಶ್ವರನ್​ನನ್ನು ಬಂಧಿಸಲಾಗಿದೆ. ಸದ್ಯ ತನಿಖೆ ಮುಂದುವರೆದಿದ್ದು ಆರೋಪಿ ಹಿನ್ನಲೆ ಬಗ್ಗೆ ಇನ್ನಷ್ಟೇ ಮಾಹಿತಿ ಗೊತ್ತಾಗಬೇಕಿದೆ.

ಕೊರಿಯೋಗ್ರಾಫರ್ ಆಗಿರುವ ಅತ್ಯಾಚಾರ ಆರೋಪಿ ನಿನ್ನೆ ಕೋರಮಂಗಲ ಪಬ್​ಗೆ ಪಾರ್ಟಿಗೆ ಬಂದಿದ್ದ. ಮನೆಗೆ ತೆರಳುವಾಗ ಯುವತಿ‌ ಡ್ರಾಪ್ ಕೇಳಿದ್ದಾಳೆ. ಯುವತಿ ಕೂಡ ಕೋರಮಂಗಲದ ಪಬ್​ನಲ್ಲಿ ಪಾರ್ಟಿ ಮುಗಿಸಿ ಹೊರಟಿದ್ದಳು. ಇನ್ನು ಡ್ರಾಪ್ ಮಾಡುವ ನೆಪದಲ್ಲಿ ಕರೆದೊಯ್ದು ಅತ್ಯಾಚಾರ ಎಸಗಲಾಗಿದೆ. ಆರೋಪಿ ಅತ್ಯಾಚಾರದ ವೇಳೆ ಯುವತಿಯ ಬಟ್ಟೆ ಹರಿದು ದುಷ್ಕೃತ್ಯ ಮೆರೆದಿದ್ದಾನೆ. ಈ ವೇಳೆ ಯುವತಿ ಕೂಡ ಈತನ ಕೃತ್ಯಕ್ಕೆ ಪ್ರತಿರೋಧ ಒಡ್ಡಿದ್ದು ಆತನ ಬಟ್ಟೆ ಹರಿದು, ಮುಖಕ್ಕೆ ಪರಚಿದ್ದಾಳೆ. ಅಲ್ಲದೆ ಇದೇ ವೇಳೆ ಯುವತಿಯ ಸ್ನೇಹಿತರು ಕೂಡ ಸ್ಥಳಕ್ಕೆ ಬಂದಿದ್ದು ಇದರಿಂದ ಹೆದರಿ ಆರೋಪಿ ಮನೆಗೆ ಬಂದಿದ್ದ. ಸದ್ಯ ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ಹಿನ್ನೆಲೆ

ಅನ್ಯರಾಜ್ಯದ ಯುವತಿ ಬೆಂಗಳೂರಿನಲ್ಲಿ ಅಂತಿಮ ವರ್ಷದ ಪದವಿ ಓದುತ್ತಿದ್ದು ಗೆಟ್‌ ಟು ಗೆದರ್‌ ಪಾರ್ಟಿ ಅಂತಾ ಸ್ನೇಹಿತರ ಜತೆ ಹೋಗಿದ್ಲು. ಆಗಸ್ಟ್​ 17ರ ರಾತ್ರಿ 1 ಗಂಟೆ ಸುಮಾರಿಗೆ ಕೋರಮಂಗಲದಲ್ಲಿ ಪಾರ್ಟಿ ಮುಗಿಸಿಕೊಂಡು ವಾಪಸ್‌ ಬರುವಾಗ ಸ್ನೇಹಿತರಿಂದ ಬೇರ್ಪಟ್ಟಿದ್ದಾಳೆ. ಹೆಬ್ಬಗೋಡಿಯಲ್ಲಿರೋ ಮನೆ ಸೇರಬೇಕಿದ್ದ ಯುವತಿ, ಅಪರಿಚಿತನ ಬೈಕ್‌ ಹತ್ತಿದ್ದಾಳೆ. ಆ ಬೈಕ್‌ನಲ್ಲಿ ಡ್ರಾಪ್‌ ಪಡೆದವಳು ಮಾರ್ಗಮಧ್ಯೆ ಕೆಳಗಿಳಿದ್ದಾಳೆ. ಸ್ವಲ್ಪದೂರ ನಡೆದುಕೊಂಡು ಹೋದವಳು, ಮತ್ತೊಂದು ಬೈಕ್‌ ಹತ್ತಿದ್ದಾಳೆ. ಯುವತಿ ಮದ್ಯದ ನಶೆಯಲ್ಲಿರೋದನ್ನ ಬಂಡವಾಳ ಮಾಡಿಕೊಂಡ ಕ್ರಿಮಿ, ಬೊಮ್ಮನಹಳ್ಳಿ ಸಮೀಪದ ನಿರ್ಜನವಾದ ಲಾರಿ ನಿಲ್ಲಿಸುವ ಜಾಗಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

ಇದನ್ನೂ ಓದಿ: ಯಾದಗಿರಿ; ಪರಿಚಿತ ಮಹಿಳೆಯನ್ನು ಪಾಳುಬಿದ್ದ ಮನೆಗೆ ಕರೆತಂದು ಅತ್ಯಾಚಾರ, ಆರೋಪಿ ಅರೆಸ್ಟ್

ಯುವತಿಯ ಜೀವ ಉಳಿಸಿದ SOS ಎಮರ್ಜೆನ್ಸಿ ಬಟನ್!

ಕಾಮುಕ ಅತ್ಯಾಚಾರಕ್ಕೆ ಯತ್ನಿಸ್ತಿದ್ದಂತೆ ಯುವತಿ ಮೊಬೈಲ್​ನಲ್ಲಿ ಎಮರ್ಜೆನ್ಸಿ SOS ಬಟನ್ ಒತ್ತಿದ್ದಾಳೆ. ತಕ್ಷಣ ಮಾಹಿತಿ ಸ್ನೇಹಿತರಿಗೆ ಹೋಗಿದೆ. ಸ್ಥಳಕ್ಕೆ ದೌಡಾಯಿಸಿದ ಸ್ನೇಹಿತರು ಯುವತಿಯ ಜೀವ ಉಳಿಸಿದ್ದಾರೆ. ಸ್ಥಳದಲ್ಲೆ ಅರೆ ನಗ್ನ ಸ್ಥಿತಿಯಲ್ಲಿದ್ದ ಅಪರಿಚಿತ ಓಡಿ ಹೋಗಿದ್ದ. ಆತನ ಮುಖದ ಮೇಲೆಲ್ಲಾ ಪರಚಿತ ಗಾಯಗಳಾಗಿದ್ವು ಅಂತಾ ಸ್ನೇಹಿತರು ಮಾಹಿತಿ ಕೊಟ್ಟು ದೂರು ದಾಖಲಿಸಿದ್ದರು. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಸ್ವಸ್ಥಗೊಂಡಿದ್ದ ಯುವತಿ ಬೊಮ್ಮಸಂದ್ರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೀತಿದ್ದಾಳೆ. ಇನ್ನು ಸಂತ್ರಸ್ತ ಯುವತಿ ಹೊರ ರಾಜ್ಯದವಳಾಗಿದ್ದು, ಬೆಂಗಳೂರಿನಲ್ಲಿ ಕೊನೆ ವರ್ಷದ ಪದವಿ ಓದುತ್ತಿದ್ದಳೆ. ಸದ್ಯ BNS ಕಾಯ್ದೆ 64 ಅಡಿಯಲ್ಲಿ HSR ಲೇಔಟ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:49 am, Mon, 19 August 24

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ