AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ: ಅಸಲಿಯತ್ತು ಬಯಲು, ಎಫ್​ಐಆರ್​ನಲ್ಲೇನಿದೆ?

ಬೆಂಗಳೂರಿನ ಜಯನಗರದಲ್ಲಿ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕನೊಬ್ಬ ಮಹಿಳಾ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಸಂಚಾರ ನಿಯಮ ಉಲ್ಲಂಘನೆ ಕುರಿತು ಮಹಿಳಾ ಪ್ರಯಾಣಿಕರು ಚಾಲಕನಿಗೆ ಪ್ರಶ್ನಿಸಿದ್ದಾರೆ. ಘಟನೆಯ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ: ಅಸಲಿಯತ್ತು ಬಯಲು, ಎಫ್​ಐಆರ್​ನಲ್ಲೇನಿದೆ?
ಚಾಲಕ ಮತ್ತು ಯುವತಿ ಗಲಾಟೆ ಮಾಡಿಕೊಂಡಿರುವ ದೃಶ್ಯಗಳು
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ವಿವೇಕ ಬಿರಾದಾರ|

Updated on:Jun 16, 2025 | 6:43 PM

Share

ಬೆಂಗಳೂರು, ಜೂನ್​ 16: ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕನೊಬ್ಬ (Rapido Driver) ಮಹಿಳಾ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸ್​ ಠಾಣೆಯಲ್ಲಿ (Jayanagar Police Station) ಎಫ್​ಐಆರ್ ದಾಖಲಾಗಿದೆ. ಜೂನ್​ 14 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕ ಮಹಿಳಾ ಪ್ರಯಾಣಿಕರ ಮೇಲೆ ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್​ ಆಗುತ್ತಿದ್ದು, ನೆಟ್ಟಿಗರು ಪರ-ವಿರೋಧದ ಕಾಮೆಂಟ್​ಗಳನ್ನು ಮಾಡುತ್ತಿದ್ದಾರೆ.

ಎಫ್​ಐಆರ್​ನಲ್ಲಿ ಏನಿದೆ?

“ಯುವತಿ ಶ್ರೇಯಾ ಬಿಟಿಎಂ ಲೇಔಟ್‌ನಿಂದ ಜಯನಗರ 3ನೇ ಬ್ಲಾಕ್​ಗೆ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಬುಕ್​ ಮಾಡಿದ್ದರು. ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕ ಸುಹಾಸ್​ ಪಿಕಪ್ ಮಾಡಿಕೊಂಡು ಲೋಕೆಶನ್​ಗೆ ಬಿಟ್ಟಿದ್ದಾರೆ. ನಂತರ ಶ್ರೇಯಾ “ಸಂಚಾರಿ ನಿಯಮ ಪಾಲಿಸದೆ ಬೈಕ್‌ ಚಲಾಯಿಸುವುದು ಕಾನೂನು ಬಾಹಿರ ಎಂದು ಚಾಲಕ ಸುಹಾಸ್​ಗೆ ಹೇಳಿದ್ದಾರೆ. ಆಗ, ಚಾಲಕ ಸುಹಾಸ್​, ಶ್ರೇಯಾ ಜೊತೆ ಅಸಭ್ಯವಾಗಿ ವರ್ತಿಸಿ, ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ಮಾಡಿದ್ದಾರೆ. ಶ್ರೇಯಾ ಮೇಲೆ ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಈ ವಿಡಿಯೋವನ್ನು ನೋಡಿದ ಶ್ರೇಯಾ ಸ್ನೇಹಿತರು, ಚಾಲಕ ಸಹಾಸ್​ ವಿರುದ್ಧ ದೂರು ನೀಡುವಂತೆ ಶ್ರೇಯಾಗೆ ಹೇಳಿದ್ದಾರೆ. ಶ್ರೇಯಾ ಚಾಲಕ ಸುಹಾಸ್​ ವಿರುದ್ಧ ದೂರು ನೀಡಿದ್ದಾರೆ” ಎಂದು ಎಫ್​ಐಆರ್​ನಲ್ಲಿ ದಾಖಲಾಗಿದೆ. ಶ್ರೇಯಾ ಅವರು ನೀಡಿದ ದೂರಿನ ಆಧಾರದ ಮೇಲೆ ಜಯನಗರ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡಿದ್ದಾರೆ.

ಸುಹಾಸ್​ ಮೇಲೆ ಹಲ್ಲೆ ಮಾಡಿದ್ದ ಶ್ರೇಯಾ: ಸಿಸಿಟಿವಿಯಲ್ಲಿ ಸೆರೆ

ಜಯನಗರ 3ನೇ ಬ್ಲಾಕ್​ನಲ್ಲಿ ಸ್ಕೂಟರ್​ನಿಂದ ಕೆಳಗೆ ಇಳಿದ ತಕ್ಷಣ ಶ್ರೇಯಾ, ಚಾಲಕ ಸುಹಾಸ್​ಗೆ ಹೊಡೆದಿದ್ದಾರೆ. ಸುಹಾಸ್​ರ ಬೆನ್ನಿಗೆ ಶ್ರೇಯಾ ಎರಡು ಬಾರಿ ಹೊಡೆದಿದ್ದಾರೆ. ನಂತರ ಸುಹಾಸ್ ಸ್ಕೂಟರ್​ನಿಂದ ಕೆಳಗೆ ಇಳಿದಿದ್ದಾರೆ. ಆಗ ಶ್ರೇಯಾ, ಸುಹಾಸ್​ ಕೆನ್ನೆಗೆ ಹೊಡೆದಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದರಿಂದ ಕೋಪಗೊಂಡ ಸುಹಾಸ್​, ಶ್ರೇಯಾ ಕೆನ್ನೆಗೆ ಹೊಡೆದಿದ್ದಾರೆ.

ಇದನ್ನೂ ಓದಿ
Image
ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಶಾಕ್: ಹೈಕೋರ್ಟ್ ಹೇಳಿದ್ದೇನು?
Image
ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಸಚಿವ ರಾಮಲಿಂಗಾರೆಡ್ಡಿ ಆದೇಶ
Image
ಬೆಂಗಳೂರು ಬುಕಿಂಗ್ ಮಾಫಿಯಾ: ಟಿಪ್ಸ್ ಹೆಸರಲ್ಲಿ ದುಪ್ಪಟ್ಟು ಹಣ ವಸೂಲಿ
Image
ಸಿಹಿ ಸುದ್ದಿ ನೀಡಿದ ಅಮಿತ್​​ ಶಾ: ಓಲಾ-ಊಬರ್ ರೀತಿ ಸಹಕಾರಿ ಟ್ಯಾಕ್ಸಿ ಆರಂಭ

ಇದನ್ನೂ ಓದಿ: ಯುವತಿಗೆ ರಪ್​ ಅಂತ ಹೊಡೆದ ರ‍್ಯಾಪಿಡೋ ಬೈಕ್ ಚಾಲಕ: ಏಟಿಗೆ ರಸ್ತೆಗೆ ಬಿದ್ದಳು, ವಿಡಿಯೋ ವೈರಲ್

ಪ್ರಕರಣದ ತನಿಖೆಯನ್ನು ಜಯನಗರ ಪೊಲೀಸರು ನಡೆಸುತ್ತಿದ್ದು, ಘಟನೆಗೆ ಕಾರಣವೇನು ಎಂಬುವುದು ತನಿಖೆ ಬಳಿಕ ಗೊತ್ತಾಗಲಿದೆ. ಇತ್ತೀಚಿಗೆ, ಓರ್ವ ಮಹಿಳೆ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್​ ಆಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:34 pm, Mon, 16 June 25

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More
ಪ್ರಧಾನಿ ಮೋದಿ ಸಮ್ಮುಖದಲ್ಲಿ 'ವಿಂಗ್ಸ್ ಓವರ್ ಗಂಗಾ' ಏರ್ ಶೋ!
ಪ್ರಧಾನಿ ಮೋದಿ ಸಮ್ಮುಖದಲ್ಲಿ 'ವಿಂಗ್ಸ್ ಓವರ್ ಗಂಗಾ' ಏರ್ ಶೋ!
RSS ಪಥಸಂಚಲನಕ್ಕೆ ಕೊನೆ ಕ್ಷಣದಲ್ಲಿ ಸರ್ಕಾರ ಅನುಮತಿ ನೀಡಿದೆ ಎಂದ ಅಶೋಕ್
RSS ಪಥಸಂಚಲನಕ್ಕೆ ಕೊನೆ ಕ್ಷಣದಲ್ಲಿ ಸರ್ಕಾರ ಅನುಮತಿ ನೀಡಿದೆ ಎಂದ ಅಶೋಕ್
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ಕಿರಿಕ್; ಎಳೆಎಳೆಯಾಗಿ ವಿವರಿಸಿದ ಆಪ್ತ ವೇಲು
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ಕಿರಿಕ್; ಎಳೆಎಳೆಯಾಗಿ ವಿವರಿಸಿದ ಆಪ್ತ ವೇಲು
ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಲಾಯರ್ ಪ್ರತಿಕ್ರಿಯೆ
ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಲಾಯರ್ ಪ್ರತಿಕ್ರಿಯೆ
ಪರಿಷತ್​​​ ಬಿಜೆಪಿ ಅಭ್ಯರ್ಥಿ ಸುರೇಶ್​​ ನಡೆಗೆ ಶಾಸಕ ಬಿ.ಪಿ.ಹರೀಶ್ ಆಕ್ರೋಶ
ಪರಿಷತ್​​​ ಬಿಜೆಪಿ ಅಭ್ಯರ್ಥಿ ಸುರೇಶ್​​ ನಡೆಗೆ ಶಾಸಕ ಬಿ.ಪಿ.ಹರೀಶ್ ಆಕ್ರೋಶ
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ನಡುವಿನ ಜಗಳಕ್ಕೆ ಸಿಕ್ತು ಮುಖ್ಯ ಕಾರಣ
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ನಡುವಿನ ಜಗಳಕ್ಕೆ ಸಿಕ್ತು ಮುಖ್ಯ ಕಾರಣ
ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ ಆರೋಪ: ನಾಲ್ವರ ವಿರುದ್ಧ ಎಫ್ಐಆರ್
ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ ಆರೋಪ: ನಾಲ್ವರ ವಿರುದ್ಧ ಎಫ್ಐಆರ್
ವಾರಭವಿಷ್ಯ: ಅ.26 ರಿಂದ ನ.01ರ ವರೆಗಿನ ದ್ವಾದಶ ರಾಶಿಗಳ ಫಲಾಫಲಗಳು
ವಾರಭವಿಷ್ಯ: ಅ.26 ರಿಂದ ನ.01ರ ವರೆಗಿನ ದ್ವಾದಶ ರಾಶಿಗಳ ಫಲಾಫಲಗಳು
ಬಿಗ್ ಬಾಸ್: ಸುದೀಪ್ ಎದುರಲ್ಲೇ ಬಗೆಬಗೆಯ ಶಿಕ್ಷೆ ಅನುಭವಿಸಿದ ಪ್ರಶಾಂತ್
ಬಿಗ್ ಬಾಸ್: ಸುದೀಪ್ ಎದುರಲ್ಲೇ ಬಗೆಬಗೆಯ ಶಿಕ್ಷೆ ಅನುಭವಿಸಿದ ಪ್ರಶಾಂತ್
ಸಿಸಿಬಿ ನೋಟಿಸ್​ಗೂ ಮೊದಲೇ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ
ಸಿಸಿಬಿ ನೋಟಿಸ್​ಗೂ ಮೊದಲೇ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ