AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕಾಲ್ತುಳಿತ: ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ ಸೇರಿ ನಾಲ್ವರ ಬಂಧನ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್​ಸಿಬಿ ಮ್ಯಾನೇಜ್​ಮೆಂಟ್​​ನ​​​​​​​ ಮೂವರು ಆಯೋಜಕರು ಸೇರಿದಂತೆ ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ಗುರುವಾರ ಕೆಲ ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ಸರ್ಕಾರದ ಈ ನಡೆಗೆ ವಿರೋಧ ಕೂಡ ವ್ಯಕ್ತವಾಗುತ್ತಿದೆ.

ಬೆಂಗಳೂರು ಕಾಲ್ತುಳಿತ: ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ ಸೇರಿ ನಾಲ್ವರ ಬಂಧನ
ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ
Kiran HV
| Updated By: ಗಂಗಾಧರ​ ಬ. ಸಾಬೋಜಿ|

Updated on:Jun 06, 2025 | 9:46 AM

Share

ಬೆಂಗಳೂರು, ಜೂನ್​ 06: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ 11 ಆರ್​ಸಿಬಿ (RCB) ಅಭಿಮಾನಿಗಳ ಸಾವು ಪ್ರಕರಣ ಸದ್ಯ ರಾಷ್ಟ್ರಮಟ್ಟದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಈಗಾಗಲೇ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್​ ಸೇರಿದಂತೆ ಕೆಲ ಅಧಿಕಾರಿಗಳನ್ನು ಅಮಾನತು ಮಾಡಿದೆ. ದುರಂತಕ್ಕೆ ಸಂಬಂಧಿಸಿದಂತೆ ಇದೀಗ​​​ ಪೊಲೀಸರು ಮೂವರು ಆಯೋಜಕರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ (Arrested).

ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ಮೂವರು ಆಯೋಜಕರು ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಮುಂಬೈಗೆ ತೆರಳುತ್ತಿದ್ದ ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ, ಡಿಎನ್​ಎ ಮ್ಯಾನೇಜ್​ಮೆಂಟ್​​ ಸಿಬ್ಬಂದಿ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ಸುಮಂತ್​ ಬಂಧಿತರು. ಸದ್ಯ ನಾಲ್ವರು ಆರೋಪಿಗಳನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಶೇಷಾದ್ರಿಪುರಂ ಎಸಿಪಿ ಪ್ರಕಾಶ್ ವಿಚಾರಣೆ ಮಾಡಿದ್ದಾರೆ.

ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ ಬಂಧನಕ್ಕೆ ಪ್ರಮುಖ ಕಾರಣಗಳು ಹೀಗಿವೆ.

  • ಬೆಂಗಳೂರಿನ ವಿಧಾನ ಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂವರೆಗೂ ವಿಕ್ಟರಿ ಪರೇಡ್ ಅಂತ ಪೊಲೀಸರು ಅನುಮತಿ ನಿರಾಕರಿಸಿದ ನಂತರವು ಸೊಶೀಯಲ್​ ಮೀಡಿಯಾದಲ್ಲಿ ಪೋಸ್ಟ್ ಮಾಡಿ ನಂತರ ಡಿಲೀಟ್ ಮಾಡಿರುವುದು.
  • ಸ್ಟೇಡಿಯಂನಲ್ಲಿ ಸೆಲೆಬ್ರೇಷನ್​ಗೆ ಉಚಿತ ಟಿಕೆಟ್ ಅಂತ ಘೋಷಿಸಿರುವುದು.

ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ ಕೇಸ್: ಎಡಿಜಿಪಿ ದರ್ಜೆ ಅಧಿಕಾರಿ ಸಸ್ಪೆಂಡ್, ಕರ್ನಾಟಕ ಪೊಲೀಸ್ ಇತಿಹಾಸದಲ್ಲೇ ಮೊದಲು

ಇದನ್ನೂ ಓದಿ
Image
ಎಡಿಜಿಪಿ ದರ್ಜೆ ಅಧಿಕಾರಿ ಸಸ್ಪೆಂಡ್, ಕರ್ನಾಟಕ ಪೊಲೀಸ್ ಇತಿಹಾಸದಲ್ಲೇ ಮೊದಲು
Image
ಬೆಂಗಳೂರಿಗೆ ನೂತನ ಪೊಲೀಸ್​ ಕಮಿಷನರ್​ ಆಗಿ ಸೀಮಂತ್​ ಕುಮಾರ್ ಸಿಂಗ್ ನೇಮಕ
Image
ಬೆಂಗಳೂರು ಕಾಲ್ತುಳಿತ ಕೇಸ್ ಸಿಐಡಿಗೆ, ಬೆಂಗಳೂರು ಕಮಿಷನರ್ ಅಮಾನತು..!
Image
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
  • ಗೇಟ್ 9 ಮತ್ತು 10ರ ಬಳಿ ಮಧ್ಯಾಹ್ನ 1 ಗಂಟೆಗೆ ಟಿಕೆಟ್ ಸಿಗತ್ತೆ ಎಂದಿದ್ದು, 1 ಗಂಟೆ ಆದರೂ ಟಿಕೆಟ್ ವಿತರಣೆ ಆಗದಿರುವುದು. ಬಳಿಕ ಮಧ್ಯಾಹ್ನ 3 ಗಂಟೆಗೆ ಸ್ಟೇಡಿಯಂಗೆ ಅಭಿಮಾನಿಗಳ ಪ್ರವೇಶ ಅಂತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಧಿಕೃತ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು.
  • ಲಕ್ಷಾಂತರ ಜನ ಸೇರಲಿಕ್ಕೆ ಕಾರಣವಾಗಿದ್ದೇ ಸೋಶಿಯಲ್ ಮೀಡಿಯಾದಲ್ಲಿ ಹಾಕಲಾಗಿದ್ದ ಪೋಸ್ಟ್.
  • ನಿಖಿಲ್ ಸೂಚನೆಯಂತೆ ಡಿಎನ್​ಎ ಮ್ಯಾನೇಜ್‌ಮೆಂಟ್ ಕಂಪನಿ ವರ್ತಿಸಿದೆ.
  • 22 ಗೇಟ್​ಗಳ ಪೈಕಿ ಏಕಕಾಲಕ್ಕೆ ಕೇವಲ 19, 20 ಮತ್ತು 22ನೇ ಮೂರು ಗೇಟ್ ಮಾತ್ರ ಒಪನ್ ಮಾಡಿಸಿರುವುದು.

ಅಧಿಕಾರಿಗಳ ಮನೆ ಮೇಲೆ ದಾಳಿ: ನಾಪತ್ತೆ 

ಇನ್ನು ನಿನ್ನೆ ರಾತ್ರಿ ಬೆಂಗಳೂರಲ್ಲಿ ಕೆಎಸ್​ಸಿಎ ಕಾರ್ಯದರ್ಶಿ ಶಂಕರ್​ ಮನೆ ಮೇಲೆ ದಾಳಿ ಮಾಡಿದ ಪೊಲೀಸರು ಪರಿಶೀಲನೆ ಮಾಡಿದ್ದಾರೆ. ಜೊತೆಗೆ ಕೆಎಸ್​ಸಿಎ ಖಜಾಂಚಿ ಜಯರಾಮ್​ ಮನೆ ಮೇಲೂ ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಕೆಎಸ್​ಸಿಎ ಕಾರ್ಯದರ್ಶಿ ಮತ್ತು ಖಜಾಂಚಿ ಇಬ್ಬರೂ ನಾಪತ್ತೆ ಆಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:20 am, Fri, 6 June 25