Bengaluru Stamped: RCBಗೆ ಮತ್ತಷ್ಟು ಸಂಕಷ್ಟು, ಕಬ್ಬನ್ ಪಾರ್ಕ್ ಠಾಣೆಯಲ್ಲಿ ಮತ್ತೆರಡು ಕೇಸ್ ದಾಖಲು
Bengaluru RCB Victory Celebrations Stampede: ಆರ್ಸಿಬಿ ಗೆಲುವನ್ನು ಸಂಭ್ರಮಿಸಲು ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವಿಜಯೋತ್ಸವ ಕಾರ್ಯಕ್ರಮ ವೀಕ್ಷಿಸಲು ಕ್ರೀಡಾಂಗಣಕ್ಕೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದರು. ಈ ವೇಳ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಟ್ಟಿದ್ದಾರೆ. ಈ ಕಾಲ್ತುಳಿತದಲ್ಲಿ ಗಾಯಗೊಂಡ ಓರ್ವ ವ್ಯಕ್ತಿ ಆರ್ಸಿಬಿ ಫ್ರಾಂಚೈಸಿ ವಿರುದ್ಧ ದೂರು ನೀಡಿದ್ದಾರೆ. ಈ ಮೂಲಕ ಆರ್ಸಿಬಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

ಬೆಂಗಳೂರು, ಜೂನ್ 06: ಬೆಂಗಳೂರಿನ (Bengaluru) ಎಂ. ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy stadium) ಹೊರಗೆ ನಡೆದ ಕಾಲ್ತುತಿಳಿತದಲ್ಲಿ 11 ಮಂದಿ ಮೃತಪಟ್ಟಿದ್ದಾರೆ. 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಂಭ್ರಮಾಚರಣೆಗೆ ಸೂತಕ ಅಂಟಿಕೊಂಡಿದೆ. ಈ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೆ ಎರಡು ಪ್ರಕರಣ ದಾಖಲಾಗಿವೆ. ಕಾಲ್ತುಳಿತದಲ್ಲಿ ಗಾಯಗೊಂಡ ರೋಲನ್ ಗೊಮೆಸ್ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಆರ್ಸಿಬಿ ಫ್ರಾಂಚೈಸಿ, ಕೆಎಸ್ಸಿಎ ಮತ್ತು ಡಿಎನ್ಎ ಕಂಪನಿ ವಿರುದ್ಧ ಬಿಎನ್ಎಸ್ ಕಾಯ್ದೆ 2023 (U/s-125(a)) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಜಾಲತಾಣದಲ್ಲಿ ಆರ್ಸಿಬಿ ಪೋಸ್ಟ್ ನೋಡಿ ನನ್ನ ಗೆಳೆಯರ ಜೊತೆ ಸಂಭ್ರಮಾಚರಣೆ ವೀಕ್ಷಿಸಲು ಬಂದಿದ್ದೆ. ತೆರದ ಬಸ್ ಮೂಲಕ ಮೆರಬಣಿಗೆ ಇದೆ ಎಂದು ತಿಳಿಸಲಾಗಿತ್ತು. ಗೇಟ್ ನಂಬರ್ 17ರಲ್ಲಿ ನಾನು ಹೋಗುವಾಗ ನೂಕುನುಗ್ಗಲು ಆಯ್ತು. ಈ ವೇಳೆ ನನ್ನ ತೋಳಿಗೆ ಪೆಟ್ಟಾಗಿದೆ ಎಂದು ಗಾಯಾಳು ರೋಲನ್ ಗೊಮೆಸ್ ದೂರು ನೀಡಿದ್ದಾರೆ.
ಪ್ರಕರಣ ಸಂಬಂಧ ನಾಲ್ವರ ಬಂಧನ
ಕಬ್ಬನ್ ಪಾರ್ಕ್ ಇನ್ಸ್ಪೆಕ್ಟರ್ ಗಿರೀಶ್ ದೂರು ನೀಡಿದ್ದ ಹಿನ್ನೆಲೆಯಲ್ಲಿ ಆರ್ಸಿಬಿ ವಿರುದ್ಧ ಈಗಾಗಲೆ ಒಂದು ಎಫ್ಐಆರ್ ದಾಖಲಾಗಿತ್ತು. ಈಗ, ಗಾಯಾಳು ನೀಡಿದ ದೂರಿನ ಆಧಾರದ ಮೇಲೆ ಮತ್ತೇರಡು ಎಫ್ಐಆರ್ ದಾಖಲಾಗಿವೆ.
ಇದನ್ನೂ ಓದಿ: ಎಚ್ಡಿಕೆ ಗಂಭೀರ ಆರೋಪ ಬೆನ್ನಲ್ಲೇ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನ ಗೋವಿಂದಾ!
ಕಬ್ಬನ್ ಪಾರ್ಕ್ ಇನ್ಸ್ಪೆಕ್ಟರ್ ಗಿರೀಶ್ ದೂರು ನೀಡಿದ್ದ ದೂರಿನ ಆಧಾರದ ಮೇಲೆ ಬಿಎನ್ಎಸ್ ಸೆಕ್ಷನ್ 105, 115, 118ರಡಿ ಮೊಕದ್ದಮೆ ದಾಖಲಾಗಿದೆ. ಆರ್ಸಿಬಿ ಮ್ಯಾನೇಜ್ಮೆಂಟ್ A-1 ಆಗಿದ್ದರೆ, ಕಾರ್ಯಕ್ರಮ ಆಯೋಜನೆ ಮಾಡಿದ್ದ DNA ಇವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆ A-2 ಆಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ನ A3 ಯನ್ನಾಗಿ ಮಾಡಿ ಎಫ್ಐಆರ್ ದಾಖಲಿಸಲಾಗಿದೆ. ಆರ್ಸಿಬಿ ಮಾರ್ಕೆಟಿಂಗ್ ಮುಖಸ್ಥ ಸೇರಿ ನಾಲ್ವರನ್ನು ಬಂಧಿಸಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:46 pm, Fri, 6 June 25



