AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಪಿಂಕ್​​ ಲೈನ್​​ ಆರಂಭಕ್ಕೆ ಭರದ ಸಿದ್ಧತೆ: ನಾಳೆಯಿಂದ ಪರಿಶೀಲನಾ ಕಾರ್ಯ ಶುರು

ಕಾಳೇನ ಅಗ್ರಹಾರದಿಂದ ತಾವರೆಕೆರೆ ವರೆಗಿನ ನಮ್ಮ ಮೆಟ್ರೋ ಪಿಂಕ್ ಲೈನ್​​ ಮಾರ್ಗವನ್ನು ಮೇ ತಿಂಗಳಲ್ಲಿ ಸಂಚಾರಕ್ಕೆ ಮುಕ್ತಗೊಳಿಸಲು ತಯಾರಿ ನಡೆದಿದೆ. ಇದಕ್ಕಾಗಿ ನಾಳೆಯಿಂದ ಏಪ್ರಿಲ್ 5ರವರೆಗೆ RDSO ಅಧಿಕಾರಿಗಳಿಂದ ರೈಲು ವೇಗ, ಲೋಡ್ ಟೆಸ್ಟ್ ಸೇರಿ ವ್ಯಾಪಕ ಪರಿಶೀಲನೆ ನಡೆಯಲಿದೆ. 6 ಡ್ರೈವರ್ಲೆಸ್ ರೈಲುಗಳೊಂದಿಗೆ ಆರಂಭಿಕ ಹಂತದಲ್ಲಿ ಕಾರ್ಯಾಚರಣೆ ಶುರುವಾಗಲಿದ್ದು, ಇದು ಬನ್ನೇರುಘಟ್ಟ ರಸ್ತೆಯ ಸಂಚಾರ ದಟ್ಟಣೆ ಕಡಿಮೆ ಮಾಡಲು ಸಹಾಯಕವಾಗಿದೆ.

ನಮ್ಮ ಮೆಟ್ರೋ ಪಿಂಕ್​​ ಲೈನ್​​ ಆರಂಭಕ್ಕೆ ಭರದ ಸಿದ್ಧತೆ: ನಾಳೆಯಿಂದ ಪರಿಶೀಲನಾ ಕಾರ್ಯ ಶುರು
ಸಾಂದರ್ಭಿಕ ಚಿತ್ರImage Credit source: AI Image
ಕಿರಣ್​ ಸೂರ್ಯ
| Edited By: |

Updated on: Mar 20, 2026 | 6:39 PM

Share

ಬೆಂಗಳೂರು, ಮಾರ್ಚ್​​ 20: ಕಾಳೇನ ಅಗ್ರಹಾರ ಟು ತಾವರೆಕೆರೆ ನಡುವಿನ ಪಿಂಕ್ ಲೈನ್ ಎತ್ತರಿಸಿದ ಮೆಟ್ರೋ ಮಾರ್ಗವನ್ನು ಈ ವರ್ಷ ಮೇ ತಿಂಗಳಿನಲ್ಲಿ ಓಪನ್ ಮಾಡಲು ಬಿಎಂಆರ್ಸಿಎಲ್ ಭರದ ಸಿದ್ಧತೆ ನಡೆಸಿದೆ. ಈ ಹಿನ್ನೆಲೆ ನಾಳೆಯಿಂದ ಏಪ್ರಿಲ್ 5ರ ವರೆಗೆ 16 ದಿನಗಳ ಕಾಲ RDSO ಅಧಿಕಾರಿಗಳ ನೇತೃತ್ವದಲ್ಲಿ ವಿವಿಧ ಪರಿಶೀಲನಾ ಕಾರ್ಯಗಳು ನಡೆಯಲಿವೆ. ರೈಲಿನ ಸ್ಪೀಡ್ ಮತ್ತು ಲೋಡ್ ಟೆಸ್ಟ್ ಜೊತೆಗೆ ಟ್ರ್ಯಾಕ್ ಟೆಸ್ಟ್, ಸ್ಟೇಷನ್​​ಗಳ ತಪಾಸಣೆ, ಪವರ್ ಚೆಕ್ಕಿಂಗ್ ಸೇರಿ ಹಲವು ಬಗೆಯ ಪರೀಕ್ಷೆಗಳನ್ನು ಅಧಿಕಾರಿಗಳು ನಡೆಸಲಿದ್ದಾರೆ.

ಇನ್ನು ಈ ಪಿಂಕ್​​ ಲೈನ್​​ಗೆ ಅದಾಗಲೇ 4 ರೈಲುಗಳು ಆಗಮಿಸಿವೆ. ಇವುಗಳ ಜೊತಗೆ ಈ ತಿಂಗಳ ಕೊನೆಯಲ್ಲಿ ಒಂದು ರೈಲು ಮತ್ತು ಏಪ್ರಿಲ್ ಮೊದಲ ವಾರದಲ್ಲಿ ಆರನೇ ರೈಲು ಸೇರ್ಪಡೆಯಾಗಲಿವೆ. ಆ ಮೂಲಕ ‌ಮೊದಲ ಹಂತದಲ್ಲಿ ಪಿಂಕ್ ಲೈನ್​​ನಲ್ಲಿ 6 ಡ್ರೈವರ್ಲೆಸ್ ರೈಲುಗಳು ಸಂಚರಿಸಲಿದ್ದು, ಕಾಳೇನ ಅಗ್ರಹಾರ ಟು ನಾಗವಾರ ನಡುವೆ ಇವು ಸಂಪರ್ಕ ಕಲ್ಪಿಸಲಿವೆ. ಪಿಂಕ್ ಲೈನ್ ಒಟ್ಟು 21.25 ಕಿ.ಮೀ. ವಿಸ್ತೀರ್ಣ ಹೊಂದಿದ್ದು 18 ಮೆಟ್ರೋ ನಿಲ್ದಾಣಗಳನ್ನು ಒಳಗೊಂಡಿದೆ. ಆ ಪೈಕಿ 12 ಅಂಡರ್ ಗ್ರೌಂಡ್ ಮತ್ತು 6 ಎಲಿವೇಟೆಡ್ ಸ್ಟೇಷನ್​​ಗಳಾಗಿವೆ. ಈ ವರ್ಷ ಮೇನಲ್ಲಿ ಕಾಳೇನ ಅಗ್ರಹಾರ ಟು ತಾವರೆಕೆರೆ ವರೆಗಿನ 6 ಎಲಿವೇಟೆಡ್ ಮೆಟ್ರೋ ನಿಲ್ದಾಣಗಳನ್ನು ಓಪನ್ ಮಾಡಲು ಬಿಎಂಆರ್ಸಿಎಲ್ ಸಿದ್ದತೆ ಮಾಡಿಕೊಂಡಿದ್ದು, ಉಳಿದ 13.76.ಕಿ.ಮೀ ವಿಸ್ತೀರ್ಣದ 12 ಅಂಡರ್ ಗ್ರೌಂಡ್ ಸ್ಟೇಷನ್​​ ಮಾರ್ಗದ ಕಾಮಗಾರಿ ನಡೆಯುತ್ತಿವೆ. ಇವು ಪೂರ್ಣಗೊಂಡ ಬಳಿಕ ಈ ವರ್ಷದ ಅಂತ್ಯಕ್ಕೆ ಪೂರ್ತಿ ಮಾರ್ಗ ಓಪನ್​​ಗೆ ಸಿದ್ದತೆ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ಪಿಂಕ್ ಲೈನ್ ಮೆಟ್ರೋಗೆ ಬಂತು ನಾಲ್ಕನೇ ರೈಲು, ಮೇನಲ್ಲಿ ಸಂಚಾರ ನಿರೀಕ್ಷೆ

ಪಿಂಕ್​​ ಲೈನ್​​ಗಾಗಿ ಬಿಇಎಂಎಲ್​​ನಲ್ಲಿ ಒಟ್ಟು 23 ರೈಲುಗಳಿಗೆ ಆರ್ಡರ್​ ನೀಡಲಾಗಿದ್ದು, ಈ ಮಾರ್ಗದ ಆರಂಭದಿಂದಾಗಿ ಪ್ರತಿನಿತ್ಯ ವಿಪರೀತ ವಾಹನ ದಟ್ಟಣೆಯಿಂದ ಕೂಡಿರುವ ಬನ್ನೇರುಘಟ್ಟ ರಸ್ತೆಯ ಸಂಚಾರ ಸುಧಾರಿಸುವ ನಿರೀಕ್ಷೆಯೂ ಮೂಡಿದೆ. ಕೇಂದ್ರ ರೈಲ್ವೆ ಇಲಾಖೆಯ ಅಧಿಕಾರಿಗಳು ತಪಾಸಣೆ ಮಾಡಿ ಗ್ರೀನ್ ಸಿಗ್ನಲ್ ನೀಡಿದ ಬಳಿಕ ಕೊನೆಯದಾಗಿ ಕಮಿಷನರ್​​ ಆಫ್​​ ಮೆಟ್ರೋ ರೈಲ್ವೇ ಸೇಫ್ಟಿಯಿಂದಲೂ ಅನುಮತಿ ಸಿಗುತ್ತಿದ್ದಂತೆ ಪಿಂಕ್​​ ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲುಗಳ ವಾಣಿಜ್ಯ ಸಂಚಾರ ಶುರುವಾಗಲಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?