AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Safe Footpath Campaign: 750 ಕಿ.ಮೀ ಪಾದಚಾರಿ ಮಾರ್ಗ ಅತಿಕ್ರಮಣ ತೆರವು; ಪೀಣ್ಯ ಫ್ಲೈಓವರ್‌ನಲ್ಲಿ ರಾತ್ರಿ ಸಂಚಾರ ನಿಷೇಧ!

ಬೆಂಗಳೂರಿನಲ್ಲಿ 'ಸುರಕ್ಷಿತ ಪಾದಚಾರಿ ಮಾರ್ಗ' ಅಭಿಯಾನದಡಿ 750 ಕಿ.ಮೀ ಪಾದಚಾರಿ ಮಾರ್ಗದ ಅತಿಕ್ರಮಣ ತೆರವುಗೊಳಿಸಲಾಗಿದೆ. ಮತ್ತೆ ಅತಿಕ್ರಮಣ ತಡೆಯಲು ಜಿಬಿಎ ದಿಢೀರ್ ಪರಿಶೀಲನೆ ಆರಂಭಿಸಿದೆ. ಮತ್ತೊಂದೆಡೆ, ಡಾಂಬರೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಆಗಸ್ಟ್ 12 ರವರೆಗೆ ಪೀಣ್ಯ ಮೇಲ್ಸೇತುವೆಯಲ್ಲಿ ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸಲಾಗಿದ್ದು, ಪರ್ಯಾಯ ಮಾರ್ಗ ಬಳಸಲು ಸೂಚಿಸಲಾಗಿದೆ.

Safe Footpath Campaign: 750 ಕಿ.ಮೀ ಪಾದಚಾರಿ ಮಾರ್ಗ ಅತಿಕ್ರಮಣ ತೆರವು; ಪೀಣ್ಯ ಫ್ಲೈಓವರ್‌ನಲ್ಲಿ ರಾತ್ರಿ ಸಂಚಾರ ನಿಷೇಧ!
ಪೀಣ್ಯ ಫ್ಲೈಓವರ್‌ನಲ್ಲಿ ರಾತ್ರಿ ಸಂಚಾರ ನಿಷೇಧ!
ಭಾವನಾ ಹೆಗಡೆ
|

Updated on:Aug 04, 2026 | 1:23 PM

Share

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ 750 ಕಿ.ಮೀಗೂ ಹೆಚ್ಚು ಪಾದಚಾರಿ ಮಾರ್ಗ ಅತಿಕ್ರಮಣ ತೆರವುಗೊಳಿಸಲಾಗಿದೆ.
  • ಪೀಣ್ಯ ಮೇಲ್ಸೇತುವೆಯಲ್ಲಿ ಆಗಸ್ಟ್ 12 ರವರೆಗೆ ರಾತ್ರಿ ವೇಳೆಯ ವಾಹನ ಸಂಚಾರ ನಿಷೇಧಿಸಲಾಗಿದೆ.
  • ಮತ್ತೆ ಅತಿಕ್ರಮಣ ತಡೆಯಲು ಜಿಬಿಎ ಇಂದ ದಿಢೀರ್ ತಪಾಸಣೆ ಮತ್ತು ಜಂಟಿ ಕಾರ್ಯಾಚರಣೆ.

ಬೆಂಗಳೂರು, ಆಗಸ್ಟ್ 04: ಬೆಂಗಳೂರಿನಲ್ಲಿ ‘ಸುರಕ್ಷಿತ ಪಾದಚಾರಿ ಮಾರ್ಗ’ (Safe Footpath) ಅಭಿಯಾನದಡಿ ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್‌ಗೂ ಹೆಚ್ಚು ಪಾದಚಾರಿ ಮಾರ್ಗದ ಅತಿಕ್ರಮಣವನ್ನು ಜಿಬಿಎ ಹಾಗೂ ನಗರಾಡಳಿತ ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಮತ್ತೆ ಅತಿಕ್ರಮಣವಾಗದಂತೆ ತಡೆಯಲು ದಿಢೀರ್ ತಪಾಸಣೆ ನಡೆಸಲು ನಿರ್ಧರಿಸಲಾಗಿದೆ. ಇನ್ನೊಂದೆಡೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಡಾ. ಶ್ರೀ ಶಿವಕುಮಾರ ಸ್ವಾಮೀಜಿ (ಪೀಣ್ಯ) ಮೇಲ್ಸೇತುವೆಯ ಡಾಂಬರೀಕರಣ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಆಗಸ್ಟ್ 12 ರವರೆಗೆ ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸಲಾಗಿದೆ.

ದಿಢೀರ್ ದಾಳಿಗೆ ಪಾಲಿಕೆ ನಿರ್ಧಾರ

ಜುಲೈ 1 ರಿಂದ ಜುಲೈ 31 ರವರೆಗೆ ನಡೆದ ತಿಂಗಳ ಅಭಿಯಾನದಲ್ಲಿ ನಗರದಾದ್ಯಂತ 750 ಕಿ.ಮೀಗೂ ಹೆಚ್ಚು ಪಾದಚಾರಿ ಮಾರ್ಗದಲ್ಲಿದ್ದ ಅಂಗಡಿಗಳು, ತಳ್ಳುಗಾಡಿಗಳು ಹಾಗೂ ಅಕ್ರಮ ನಿರ್ಮಾಣಗಳನ್ನು ತೆರವುಗೊಳಿಸಲಾಗಿದೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸಾರ್ವಜನಿಕರು, ಹಿರಿಯ ನಾಗರಿಕರು ಹಾಗೂ ಮಕ್ಕಳಿಗೆ ಸುರಕ್ಷಿತವಾಗಿ ಸಂಚರಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಮತ್ತೆ ಅತಿಕ್ರಮಣ ಮಾಡಿಕೊಳ್ಳುವುದನ್ನು ತಡೆಯಲು ಜಿಬಿಎ ವಲಯ ಅಧಿಕಾರಿಗಳು ಸಂಚಾರ ಮತ್ತು ಶಿಸ್ತು ಪಾಲನಾ ಪೊಲೀಸರೊಂದಿಗೆ ಜಂಟಿಯಾಗಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಸೋಮವಾರ ಒಂದೇ ದಿನ 1.20 ಕಿ.ಮೀ ಅತಿಕ್ರಮಣ ತೆರವುಗೊಳಿಸಲಾಗಿದ್ದು, ಜಯನಗರದ 9 ಮತ್ತು 10ನೇ ಮುಖ್ಯ ರಸ್ತೆ ಹಾಗೂ ಎಚ್‌ಎಸ್‌ಆರ್ ಲೇಔಟ್‌ನ 31ನೇ ಮುಖ್ಯ ರಸ್ತೆಯಲ್ಲಿ ತಳ್ಳುಗಾಡಿಗಳು ಮತ್ತು ತಾತ್ಕಾಲಿಕ ಶೆಡ್‌ಗಳನ್ನು ಜಪ್ತಿ ಮಾಡಲಾಗಿದೆ.

  • ಸೆಂಟ್ರಲ್ ವಲಯ: 195.85 ಕಿ.ಮೀ ತೆರವು
  • ಉತ್ತರ ವಲಯ: 175.75 ಕಿ.ಮೀ ತೆರವು
  • ಪಶ್ಚಿಮ ವಲಯ: 168.37 ಕಿ.ಮೀ ತೆರವು
  • ದಕ್ಷಿಣ ಮತ್ತು ಪೂರ್ವ ವಲಯ: ತಲಾ 116 ಕಿ.ಮೀಗೂ ಹೆಚ್ಚು ತೆರವು

ಪೀಣ್ಯ ಫ್ಲೈಓವರ್‌ನಲ್ಲಿ ಆಗಸ್ಟ್ 12 ರವರೆಗೆ ರಾತ್ರಿ ಸಂಚಾರ ನಿರ್ಬಂಧ!

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಪೀಣ್ಯ ಮೇಲ್ಸೇತುವೆಯ ರೀ-ಸರ್ಫೇಸಿಂಗ್ (ಡಾಂಬರೀಕರಣ) ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ, ಆಗಸ್ಟ್ 3 ರಿಂದ ಆಗಸ್ಟ್ 12 ರವರೆಗೆ ಪ್ರತಿ ರಾತ್ರಿ ಸಂಚಾರ ನಿಯಂತ್ರಣ ಹೇರಲಾಗಿದೆ. ಸೋಮವಾರದಿಂದ ಶುಕ್ರವಾರ) ರಾತ್ರಿ 10:00 ರಿಂದ ಬೆಳಗಿನ ಜಾವ 5:00 ರವರೆಗೆ ಸಂಚಾರ ನಿಷೇಧ. ಶನಿವಾರ ಮತ್ತು ಭಾನುವಾರ ಮಧ್ಯರಾತ್ರಿ 12:00 ರಿಂದ ಬೆಳಗಿನ ಜಾವ 5:00 ರವರೆಗೆ ಸಂಚಾರ ನಿಷೇಧ.

ಪರ್ಯಾಯ ಮಾರ್ಗ

ತುಮಕೂರು/ನೆಲಮಂಗಲ ಕಡೆಗೆ ಸಂಚರಿಸುವ ವಾಹನಗಳು ಎಸ್‌ಆರ್‌ಎಸ್ ಅಪ್ಪರ್ ರಾಂಪ್ ಬಳಿ ಕೆಳಗಿಳಿದು ಎನ್‌ಎಚ್-4 ಸರ್ವೀಸ್ ರಸ್ತೆ, ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ, 8ನೇ ಮೈಲಿ ಹಾಗೂ ಪಾರ್ಲೆ-ಜಿ ಟೋಲ್ ಮೂಲಕ ತೆರಳಲು ಸೂಚಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:55 am, Tue, 4 August 26

Follow Us
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!