ಬೆಂಗಳೂರು ಗಣರಾಜ್ಯೋತ್ಸವ: ಪೊಲೀಸ್​ ಭದ್ರತೆ, ಈ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ

| Updated By: ವಿವೇಕ ಬಿರಾದಾರ

Updated on: Jan 24, 2025 | 11:01 AM

ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಜನವರಿ 26ರ ಗಣರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ರಾಜ್ಯಪಾಲರು ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ. 1051 ಪೊಲೀಸ್ ಅಧಿಕಾರಿಗಳು ಭದ್ರತೆಗೆ ನಿಯೋಜಿಸಲಾಗುತ್ತದೆ. ವಿವಿಧ ಬಣ್ಣದ ಪಾಸ್‌ಗಳ ಮೂಲಕ ಪ್ರವೇಶ ವ್ಯವಸ್ಥೆ ಮಾಡಲಾಗಿದೆ. ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಬೆಂಗಳೂರು ಗಣರಾಜ್ಯೋತ್ಸವ: ಪೊಲೀಸ್​ ಭದ್ರತೆ, ಈ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ
ಬಿ ದಯಾನಂದ
Follow us on

ಬೆಂಗಳೂರು, ಜನವರಿ 24: ಜನವರಿ 26 ಗಣರಾಜ್ಯೋತ್ಸವ (Republic Day) ಹಿನ್ನೆಲೆಯಲ್ಲಿ ಬೆಂಗಳೂರಿನ (Bengaluru) ಮಾಣಿಕ್ ಷಾ ಪರೇಡ್ ಮೈದಾನದಲ್ಲಿ (Manik Shah Parade Ground) ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜನವರಿ 26ರ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ​ ದಯಾನಂದ್ ಮಾತನಾಡಿ, ಈ ಭಾರಿ ಗಣರಾಜ್ಯೋತ್ಸವಕ್ಕೆ ಸಕಲ ತಯಾರಿಯಾಗಿದೆ. ಯಾವುದೇ ಸಮಸ್ಯೆಯಾಗದಂತೆ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಪೊಲೀಸ್​ ಭದ್ರತೆ

8 ಮಂದಿ ಡಿಸಿಪಿ, 17 ಮಂದಿ ಎಸಿಪಿ, 44 ಮಂದಿ ಪಿಐ, 114 ಮಂದಿ ಪಿಎಸ್​​ಐ, 58 ಮಂದಿ ಎಎಸ್ಐ, 80 ಮಂದಿ ಸಿಬ್ಬಂದಿ, 30 ಜನ ಕ್ಯಾಮೆರಾ ಸಿಬ್ಬಂದಿ ಸೇರಿದಂತೆ ಒಟ್ಟು 1051 ಜನ ಅಧಿಕಾರಿಗಳು ಭದ್ರತೆಗೆ ಇರುತ್ತಾರೆ. ಬಂದೋಬಸ್ತ್​​ಗೆ 10 ಕೆಎಸ್​ಆರ್​ಪಿ ತುಕಡಿ, 2 ಅಗ್ನಿಶಾಮಕ ವಾಹನ, ಕ್ಷಿಪ್ರ ಕಾರ್ಯಾಚರಣೆ ತಂಡ ಇರುತ್ತದೆ. ಮೈದಾನದ ಸುತ್ತ 103 ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ.

ಪ್ರವೇಶ ದ್ವಾರಗಳ ವಿವರ

ಕಲರ್ ಕೋಡ್​ಗಳ ಮೂಲಕ ಪಾಸ್ ವಿತರಿಸಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಪಿಂಕ್ ಬಣ್ಣದ ಪಾಸ್ ನೀಡಲಾಗುತ್ತದೆ. ವಿಐಪಿ ಪಾಸ್ ಗೇಟ್-2ರ ಮೂಲಕ ಪ್ರವೇಶಿಸಬಹುದಾಗಿದೆ. ಮುಖ್ಯ ಅತಿಥಿಗಳು, ಗಣ್ಯರು ಗೇಟ್-3 ಮೂಲಕ ಪ್ರವೇಶಿಸಬಹುದು. ಗೇಟ್-4ರಲ್ಲಿ ಬಿಳಿ ಪಾಸ್ ನೀಡಲಾಗುತ್ತದೆ, ಇಲ್ಲಿ ಮಾಧ್ಯಮದವರಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಗಣರಾಜ್ಯೋತ್ಸವ: ಜಲಜೀವನ್​ ಮಿಷನ್​ಗೆ ಕೊಡುಗೆ ನೀಡಿದ ಕರ್ನಾಟಕದ ಐದು ಜಲ ಯೋಧರಿಗೆ ಆಹ್ವಾನ

ವಾಹನ ಸಂಚಾರ ನಿರ್ಬಂಧ

ಜ.26ರಂದು ಬೆಳಗ್ಗೆ 8.30 ರಿಂದ 10.30ರವರೆಗೆ ಕಬ್ಬನ್ ರಸ್ತೆ, ಕಾಮರಾಜ ರಸ್ತೆ, ಬಿಆರ್​ವಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ರಸ್ತೆಗಳಲ್ಲಿ ಸಂಚರಿಸಲು ನಗರ ಸಂಚಾರ ಪೊಲೀಸರ ಸೂಚನೆ ನೀಡಿದ್ದಾರೆ.

ವಾಹನ ನಿಲುಗಡೆಗೆ ನಿಷೇಧ

ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತ, ಶಿವಾಜಿನಗರ ಬಸ್ ನಿಲ್ದಾಣ, ಕಬ್ಬನ್ ರಸ್ತೆ, ಸಿಟಿಒ ವೃತ್ತದಿಂದ ಕೆ.ಆರ್.ರಸ್ತೆ, ಕಬ್ಬನ್ ಜಂಕ್ಷನ್​​ವರೆಗೆ, ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:57 am, Fri, 24 January 25