AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Republic Day Celebration: ಬೆಂಗಳೂರಿನ ಮಾಣಿಕ್ ಷಾ ​ಮೈದಾನದಲ್ಲಿ ಸಕಲ ಸಿದ್ಧತೆ, ಪರೇಡ್​ನಲ್ಲಿ 38 ತುಕಡಿಗಳು ಭಾಗಿ

ಜನವರಿ 26ರ ಗಣರಾಜ್ಯೋತ್ಸವ ಸಂಭ್ರಮಾಚರಣೆಗೆ ಬೆಂಗಳೂರಿನ ಮಾಣಿಕ್ ಷಾ ಪರೇಡ್​ ಮೈದಾನದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಹಲವು ವಿಶೇಷತೆಗಳು ಕೂಡಿರಲಿವೆ. ಈ ಬಗ್ಗೆ ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್, ಬೆಂಗಳೂರು ಪೊಲೀಸ್​ ಆಯುಕ್ತ​ ಬಿ. ದಯಾನಂದ ಮತ್ತು ಜಿಲ್ಲಾಧಿಕಾರಿ ಕೆ.ಎ ದಯಾನಂದ​ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.

Republic Day Celebration: ಬೆಂಗಳೂರಿನ ಮಾಣಿಕ್ ಷಾ ​ಮೈದಾನದಲ್ಲಿ ಸಕಲ ಸಿದ್ಧತೆ, ಪರೇಡ್​ನಲ್ಲಿ 38 ತುಕಡಿಗಳು ಭಾಗಿ
ಮಾಣಿಕ್ ಷಾ ಪರೇಡ್​ ಮೈದಾನ
TV9 Web
| Edited By: |

Updated on:Jan 24, 2024 | 10:44 AM

Share

ಬೆಂಗಳೂರು, ಜನವರಿ 24: ಗಣರಾಜ್ಯೋತ್ಸವಕ್ಕೆ (Republic Day Celebration) ಮಾಣಿಕ್ ಷಾ ಪರೇಡ್​ ಮೈದಾನದಲ್ಲಿ (Manik Shah Parade Ground) ಸಿದ್ಧತೆ ಮಾಡಿಕೊಳ್ಳಲಾಗಿದೆ. ಜನವರಿ 26ರ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ ಬಾರಿ ಗಣರಾಜ್ಯೋತ್ಸವದಲ್ಲಿ ಕೇರಳ ಪೊಲೀಸ್​ ಪಡೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಎನ್​​ಸಿಸಿ, ಸೇವಾದಳ, ವಿವಿಧ ಶಾಲಾ ತಂಡಗಳು ಸೇರಿದಂತೆ 38 ತುಕಡಿಗಳಲ್ಲಿ ಒಟ್ಟು 1,150 ಜನರು ಭಾಗಿಯಾಗಲಿದ್ದಾರೆ ಎಂದು ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ತಿಳಿಸಿದರು.

ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್, ಬೆಂಗಳೂರು ಪೊಲೀಸ್​ ಆಯುಕ್ತ​ ಬಿ. ದಯಾನಂದ ಮತ್ತು ಜಿಲ್ಲಾಧಿಕಾರಿ ಕೆ.ಎ ದಯಾನಂದ​ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಶಾಲಾ ಮಕ್ಕಳ ಬ್ಯಾಂಡ್, ಪಥಸಂಚಲನ ಸೇರಿದಂತೆ 1,500 ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತವೆ. ಸಾರ್ವಜನಿಕರಿಗೆ ಮುಕ್ತ ಅವಕಾಶವಿದ್ದು, ಎಲ್ಲ ವ್ಯವಸ್ಥೆ ಮಾಡಲಾಗಿದೆ. ಪ್ರವೇಶಕ್ಕಾಗಿ ಈ ಬಾರಿ ಐದು ಗೇಟ್ ನಿರ್ಮಿಸಲಾಗಿದೆ.

ಪ್ರವೇಶ ದ್ವಾರಗಳ ವಿವರ

ಜಿ2-ಗಣ್ಯವ್ಯಕ್ತಿಗಳ ಪ್ರವೇಶ

ಜಿ4 – ಅತಿಗಣ್ಯ, ಹಾಗೂ ಎಲ್ಲಾ ಇಲಾಖೆಯ ಅಧಿಕಾರಿಗಳು, ನಿವೃತ್ತ ಸೇನಾಧಿಕಾರಿಗಳಿಗೆ ಪ್ರವೇಶ

ಜಿ5-ಸಾರ್ವಜನಿಕರಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಮನಗೆದ್ದ ಕೊಳ್ಳೆಗಾಲದ ಕವಿ ಮಂಜುನಾಥ್​ಗೆ ಗಣರಾಜ್ಯೋತ್ಸವದ ಆಹ್ವಾನ

ಗಣರಾಜ್ಯೋತ್ಸವಕ್ಕೆ ಪೊಲೀಸ್ ಭದ್ರತೆ

ಕಳೆದ 15 ದಿನದಿಂದ ಸಿಬ್ಬಂದಿಯನ್ನು ನಿಯೋಜಿಸಿದ್ದೇವೆ. ನಗರದ ಆಯಕಟ್ಟಿನ ಪ್ರದೇಶಗಳಲ್ಲಿ ನಿಗಾ ಇಡಲಾಗಿದೆ. 9 ಡಿಸಿಪಿ, 16 ಎಸಿಪಿ, 46 ಇನ್ಸ್​ಪೆಕ್ಟರ್​ಗಳು ಸೇರಿದಂತೆ 575 ಅಧಿಕಾರಿಗಳು, 1000 ಸಿಬ್ಬಂದಿ ನಿಯೋಜಿಸಿದ್ದೇವೆ. ಜೊತೆಗೆ ಆರ್ಮಡ್ ಫೋರ್ಸ್, ಶ್ವಾನದಳ ಇರಲಿದೆ. ಬ್ಯಾಗೇಜ್ ಸ್ಕ್ಯಾನರ್ ಮತ್ತು 100 ಸಿಸಿಟಿವಿಗಳನ್ನ ಅಳವಡಿಸಲಾಗಿದೆ. ವಾಹನ ಸಂಚಾರದಲ್ಲೂ ಕೆಲ ಬದಲಾವಣೆ ಮಾಡಲಾಗಿದೆ. ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಿದ್ದೇವೆ ಎಂದು ಬೆಂಗಳೂರು ಪೊಲೀಸ್​ ಆಯುಕ್ತ ಬಿ.​ ದಯಾನಂದ್ ಹೇಳಿದರು.

ಕಾರ್ಯಕ್ರಮಕ್ಕೆ ಬರುವವರು 8.30ರೊಳಗೆ ಹಾಜರಿರಬೇಕು. ಯಾವ ಯಾವ ಗೇಟ್ ನಿಗದಿಯಾಗಿದೆ ಅಲ್ಲಿಂದಲ್ಲೇ ಬರಬೇಕು. ಸಿಗರೇಟ್, ಚಾಕು, ಕಪ್ಪು ಕರವಸ್ತ್ರ, ಪಟಾಕಿ ಸೇರಿ ಹಲವು ವಸ್ತುಗಳಿಗೆ ನಿಷೇಧವಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರವಹಿಸಿದ್ದೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:42 am, Wed, 24 January 24

Follow Us
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ