ಬೆಂಗಳೂರು ಡಬಲ್​ ಡೆಕ್ಕರ್​ ಫ್ಲೈ​ ಓವರ್ ಸುತ್ತಮುತ್ತಲಿನ ನಿವಾಸಿಗಳಿಗೆ ಟ್ರಾಫಿಕ್​ ಕಿರಿ ಕಿರಿ

ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಗಿಗುಡ್ಡ ಮತ್ತು ಸೆಂಟ್ರಲ್​ ಸಿಲ್ಕ್​ ಬೋರ್ಡ್​ ನಡುವೆ ಡಬಲ್​ ಡೆಕ್ಕರ್​ ಫ್ಲೈ​ ಓವರ್ ನಿರ್ಮಾಣವಾಗಿದೆ. ಫ್ಲೈ ಓವರ್​ ನಿರ್ಮಾಣದಿಂದ ಸೆಂಟ್ರಲ್​ ಸಿಲ್ಕ್​ ಬೋಡ್​ನಲ್ಲಿನ ಟ್ರಾಫಿಕ್​ ಸಮಸ್ಯೆಗೆ ಪರಿಹಾರ ಸಿಕ್ಕಂತಾಗಿದೆ, ಆದರೆ ಫೈ ಓರ್ವರ್​ ಸುತ್ತಮುತ್ತಲಿನ ಏರಿಯಾದ ಜನರು ಪರದಾಡುವಂತಾಗಿದೆ.

ಬೆಂಗಳೂರು ಡಬಲ್​ ಡೆಕ್ಕರ್​ ಫ್ಲೈ​ ಓವರ್ ಸುತ್ತಮುತ್ತಲಿನ ನಿವಾಸಿಗಳಿಗೆ ಟ್ರಾಫಿಕ್​ ಕಿರಿ ಕಿರಿ
ಡಬಲ್​ ಡೆಕ್ಕರ್​ ಫ್ಲೈ​ ಓವರ್
Follow us
ವಿವೇಕ ಬಿರಾದಾರ
|

Updated on:Sep 17, 2024 | 11:47 AM

ಬೆಂಗಳೂರು, ಸೆಪ್ಟೆಂಬರ್​​ 17: ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಗಿಗುಡ್ಡ ಮತ್ತು ಸೆಂಟ್ರಲ್​ ಸಿಲ್ಕ್​ ಬೋರ್ಡ್​ ನಡುವೆ ನಿರ್ಮಾಣವಾಗಿರುವ 3.3 ಕಿಮೀ ಉದ್ದದ ಡಬ್ಬಲ್​ ಡೆಕ್ಕರ್​ ಫ್ಲೈ ಓವರ್ (Double Decker Flyover)​​ ಜುಲೈನಲ್ಲಿ ಉದ್ಘಾಟನೆಗೊಂಡಿತ್ತು. ಫ್ಲೈ ಓವರ್​ ನಿರ್ಮಾಣದಿಂದ ಸೆಂಟ್ರಲ್​ ಸಿಲ್ಕ್​ ಬೋಡ್​ನಲ್ಲಿನ ಟ್ರಾಫಿಕ್​ ಸಮಸ್ಯೆಗೆ ಪರಿಹಾರ ಸಿಕ್ಕಂತಾಗಿದೆ, ಆದರೆ ಫ್ಲೈ ಓರ್ವರ್​ ಸುತ್ತಮುತ್ತಲಿನ ಏರಿಯಾದ ಜನರು ಪರದಾಡುವಂತಾಗಿದೆ.

ಫ್ಲೈ ಓವರ್​ ಸುತ್ತಮುತ್ತ ಸಂಚಾರ ದಟ್ಟಣೆ ಹೆಚ್ಚಿರುವುದರಿಂದ ಅಕ್ಕ-ಪಕ್ಕದ ಏರಿಯಾದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಫ್ಲೈಓವರ್‌ನ ರ‍್ಯಾಂಪ್‌ನತ್ತ ಸಾಗಲು ಜಯನಗರ ಮತ್ತು ಜೆಪಿ ನಗರದಲ್ಲಿ ವಾಹನ ಸಂಚಾರ ಮಾರ್ಪಾಡು ಮಾಡಲಾಗಿದೆ. ಇದರಿಂದ ಆ ಏರಿಯಾದ ನಿವಾಸಿಗಳಿಗೆ ತೊಂದರೆಯಾಗಿದೆ. ಜಯನಗರ ಮತ್ತು ಜೆಪಿ ನಗರದ ಜಂಕ್ಷನ್​ಗಳಲ್ಲಿ ಬಲ ತಿರುವನ್ನು ನಿರ್ಬಂಧಿಸಲಾಗಿದೆ. ಇದರಿಂದ ಈ ನಗರದಲ್ಲಿ ವಾಸಿಸುವ ವಾಹನ ಸವಾರರು ಬಹಳ ದೂರದ ತನಕ ಹೋಗಿ ಬಲ ತಿರುವು ಪಡೆದು ಮರಳಿ ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಇದರಿಂದ ಸಾಕಷ್ಟು ತೊಂದರೆಯಾಗುತ್ತಿದೆ. ಈ ಸಂಬಂಧ ಜಯನಗರ ಮತ್ತು ಜೆಪಿ ನಗರದ ನಿವಾಸಿಗಳು ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಕೂಡಲೆ ಸರ್ಕಾರ ನಮ್ಮ ಸಮಸ್ಯೆಗೆ ಸ್ಪಂದಿಸಬೇಕು, ಕೂಡಲೆ ಕ್ರಮ ಕೈಗೊಳ್ಳಬೇಕೆಂದು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಇನ್ಮುಂದೆ ಎಲ್ಲೇ ಮೆಟ್ರೋ ಮಾಡಿದ್ರೂ ಡಬಲ್ ಡೆಕ್ಕರ್​ ಮಾಡಲು ತಿರ್ಮಾನ: ಡಿಕೆ ಶಿವಕುಮಾರ್​​

ದಕ್ಷಿಣ ಭಾರತದ ಮೊದಲ ಡಬಲ್​ಡೆಕ್ಕರ್​ ಫ್ಲೈ ಓವರ್​

ದಕ್ಷಿಣ ಭಾರತದ ಅತಿ ಎತ್ತರದ ರೋಡ್-ಕಮ್-ರೈಲು ಮೇಲ್ಸೇತುವೆಯನ್ನು ಒಟ್ಟು 449 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಈ ಫ್ಲೈ ಓವರ್‌ ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ (ಸಿಎಸ್‌ಬಿ) ಜಂಕ್ಷನ್‌ವರೆಗೆ ಸಂಪರ್ಕ ಕಲ್ಪಿಸುತ್ತದೆ. ಇದು ಪ್ರಯಾಣದ ಸಮಯವನ್ನು ಶೇ 25 ರಿಂದ 30 ರಷ್ಟು ಕಡಿಮೆ ಮಾಡಿದೆ.

ಡಬಲ್ ಡೆಕ್ಕರ್-ಫ್ಲೈ ಓವರ್ ಮೇಲಿನ ಡೆಕ್‌ನಲ್ಲಿ ಎಲಿವೇಟೆಡ್ ಮೆಟ್ರೋ ಕಾರಿಡಾರ್ ಇದ್ದರೆ. ಕೆಳಗಿನ ಡೆಕ್‌ನಲ್ಲಿ ವಾಹನ ಸಂಚಾರಕ್ಕಾಗಿ ಎಲಿವೇಟೆಡ್ ರಸ್ತೆಯನ್ನು ಒಳಗೊಂಡಿದೆ. ಎಲಿವೇಟೆಡ್ ರಸ್ತೆಯ ಮೇಲೆ ಮೆಟ್ರೋ ಮಾರ್ಗವನ್ನು ಹೊಂದಿರುವ ದಕ್ಷಿಣ ಭಾರತದಲ್ಲಿ ಇದು ಮೊದಲ ಫ್ಲೈ ಓವರ್ ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:37 am, Tue, 17 September 24

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ