AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಟನ್​​ ಎಂದು ಗ್ರಾಹಕರಿಗೆ ಬೀಫ್​​ ನೀಡುತ್ತಿದ್ದ ​ಬೆಂಗಳೂರಿನ ಹೋಟೆಲ್​​ ಮಾಲೀಕರ ಬಂಧನ

ಬೆಂಗಳೂರಿನ ಬೊಮ್ಮನಹಳ್ಳಿಯ ರೆಸ್ಟೋರೆಂಟ್‌ವೊಂದರಲ್ಲಿ ಮಟನ್ ಖಾದ್ಯಗಳ ಹೆಸರಿನಲ್ಲಿ ಗ್ರಾಹಕರಿಗೆ ಗೋಮಾಂಸ (ಬೀಫ್) ನೀಡುತ್ತಿದ್ದ ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ. ಹೋಟೆಲ್ ಕಳ್ಳಾಟದ​​ ಬಗ್ಗೆ ಮೇಲಿಂದ ಮೇಲೆ ದೂರುಗಳು ಬರುತ್ತಿದ್ದ ಹಿನ್ನೆಲೆ ಮಫ್ತಿಯಲ್ಲಿ ತೆರಳಿದ್ದ ಪೊಲೀಸ್​​ ಸಿಬ್ನಂದಿ ಓರ್ವರು ಈ ಹೋಟೆಲ್​​ನಲ್ಲಿ ಮಟನ್​​ ಆರ್ಡರ್​​ ಮಾಡಿದ್ದರು. ಪರೀಕ್ಷಿಸಿದಾಗ ಅದು ಬೀಫ್​​ ಎಂಬುದು ದೃಢಪಟ್ಟ ಹಿನ್ನೆಲೆ ಆರೋಪಿಗಳನ್ನು ಬಂಧಿಸಲಾಗಿದೆ.

ಮಟನ್​​ ಎಂದು ಗ್ರಾಹಕರಿಗೆ ಬೀಫ್​​ ನೀಡುತ್ತಿದ್ದ ​ಬೆಂಗಳೂರಿನ ಹೋಟೆಲ್​​ ಮಾಲೀಕರ ಬಂಧನ
ಸಾಂದರ್ಭಿಕ ಚಿತ್ರImage Credit source: bbc.co.uk
ಪ್ರಸನ್ನ ಹೆಗಡೆ
|

Updated on: May 31, 2026 | 10:56 AM

Share

ಬೆಂಗಳೂರು, ಮೇ 31: ಮಟನ್ ಎಂದು ಹೇಳಿ ಗ್ರಾಹಕರಿಗೆ ಗೋಮಾಂಸ (ಬೀಫ್) ನೀಡುತ್ತಿದ್ದ ಆರೋಪದ ಮೇಲೆ ಪೊಲೀಸರು ಇಬ್ಬರು ಹೋಟೆಲ್​​ ಮಾಲೀಕರನ್ನು ಬಂಧಿಸಿರುವ ಘಟನೆ ಬೆಂಗಳೂರಲ್ಲಿ (Bengaluru) ನಡೆದಿದೆ. ಬಂಧಿತರನ್ನು ಬ್ಯಾರತಿ ಗ್ರಾಮದ ಜಿಜೂ ಅಲೆಕ್ಸಾಂಡರ್ ಹಾಗೂ ಟಿಪ್ಪಣ್ಣ ಲೇಔಟ್‌ನ ಶಿಬು ಕೆ.ಬಿ. ಎಂದು ಗುರುತಿಸಲಾಗಿದೆ. ಕೇರಳ ಮೂಲದವರಾದ ಇವರು ಭೈರತಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಆರೋಪಿಗಳು ಬೊಮ್ಮನಹಳ್ಳಿಯಲ್ಲಿರುವ ಐಸಿರಿ ಹಬ್ ಕಾಯಲೋರಂ ರೆಸ್ಟೋರೆಂಟ್‌ನ ಮಾಲೀಕರು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಕಾಯಲೋರಂ ರೆಸ್ಟೋರೆಂಟ್‌ನಲ್ಲಿ ಮಟನ್ ಎಂದು ಹೇಳಿ ಬೀಫ್ ನೀಡಲಾಗುತ್ತಿದೆ ಎಂಬ ಆರೋಪದ ಕುರಿತು ಗ್ರಾಹಕರಿಂದ ಹಲವು ದೂರುಗಳು ಬಂದಿದ್ದವು. ರೆಸ್ಟೋರೆಂಟ್‌ನ ಮೆನು ಕಾರ್ಡ್‌ನಲ್ಲಿ ಎಲ್ಲಿಯೂ ಬೀಫ್ ಉಲ್ಲೇಖಿಸಿರಲಿಲ್ಲ. ಆದರೆ ಮಟನ್ ಖಾದ್ಯಗಳನ್ನು ಆರ್ಡರ್ ಮಾಡಿದಾಗ ಗೋಮಾಂಸವನ್ನು ನೀಡಲಾಗುತ್ತಿದೆ ಎಂದು ಅನೇಕರು ದೂರಿದ್ದರು. ಈ ದೂರುಗಳ ಆಧಾರದ ಮೇಲೆ ಸಿವಿಲ್ ಉಡುಪಿನಲ್ಲಿದ್ದ ಪೊಲೀಸ್ ಅಧಿಕಾರಿಯನ್ನು ಗ್ರಾಹಕರ ಸೋಗಿನಲ್ಲಿ ಕಳುಹಿಸಲಾಗಿತ್ತು. ಅವರು ಖರೀದಿಸಿ ತಂದಿದ್ದ ಮಟನ್​​ ಖಾದ್ಯಗಳನ್ನು ಪರಿಶೀಲಿಸಿದಾಗ ಅದು ಮಟನ್ ಅಲ್ಲ, ಗೋಮಾಂಸ ಎಂಬುದು ದೃಢಪಟ್ಟಿತ್ತು.

ಇದನ್ನೂ ಓದಿ: ಬೆಂಗಳೂರಿನ ಬಹುತೇಕ ಕೆರೆಗಳ ನೀರಲ್ಲಿ ಯುರೇನಿಯಂ ಪತ್ತೆ; ಆತಂಕಕಾರಿ ಸತ್ಯ ಬಿಚ್ಚಿಟ್ಟ ಐಐಎಸ್ಸಿ ವರದಿ

ಆರೋಪಿಗಳ ವಿರುದ್ಧ ಕರ್ನಾಟಕ ಗೋಹತ್ಯೆ ನಿಷೇಧ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ-2020 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಪ್ರಕರಣದ ಮತ್ತೊಬ್ಬ ಪಾಲುದಾರ ಅಭಿಲಾಶ್ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ ಎಂದು ದಿ ಟೈಮ್ಸ್​​ ಆಫ್​​ ಇಂಡಿಯಾ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ