AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Road rage: ಬೆಂಗಳೂರಿನಲ್ಲಿ ನಡು ರಸ್ತೆಯಲ್ಲಿ ಕಾಲೇಜು ಪ್ರಾಧ್ಯಾಪಕನ ಮೇಲೆ ಹಲ್ಲೆ: ಮೂವರ ಬಂಧನ

ವಿಂಗ್ ಕಮಾಂಡರ್ ರೋಡ್ ರೇಜ್ ಪ್ರಕರಣ ದೇಶಾದ್ಯಂತ ಸದ್ದು ಮಾಡಿತ್ತು. ಅದರ ಬೆನ್ನಲ್ಲೆ ಮತ್ತೊಂದು ಅಂಥದ್ದೇ ಕೃತ್ಯ ಬೆಳಕಿಗೆ ಬಂದಿದೆ. ರಸ್ತೆಯ ಮೇಲೆ ಕಸ ಬಿಸಾಡಬೇಡಿ ಎಂದಿದ್ದಕ್ಕೆ ಮೂವರು ಯುವಕರು ರಾದ್ದಾಂತ ಮಾಡಿ ಖಾಸಗಿ ಕಾಲೇಜು ಪ್ರಾಧ್ಯಾಪಕರೊಬ್ಬರಿಗೆ ನಡುರಸ್ತೆಯಲ್ಲಿ ಥಳಿಸಿರುವುದು ಬಯಲಾಗಿದೆ. ಇದೀಗ ಆರೋಪಿಗಳು ಜೈಲು ಪಾಲಾಗಿದ್ದಾರೆ.

Bengaluru Road rage: ಬೆಂಗಳೂರಿನಲ್ಲಿ ನಡು ರಸ್ತೆಯಲ್ಲಿ ಕಾಲೇಜು ಪ್ರಾಧ್ಯಾಪಕನ ಮೇಲೆ ಹಲ್ಲೆ: ಮೂವರ ಬಂಧನ
ಬೆಂಗಳೂರು: ನಡು ರಸ್ತೆಯಲ್ಲಿ ಕಾಲೇಜು ಪ್ರಾಧ್ಯಾಪಕನ ಮೇಲೆ ಹಲ್ಲೆ
ರಾಚಪ್ಪಾಜಿ ನಾಯ್ಕ್
| Edited By: |

Updated on:Apr 28, 2025 | 7:27 AM

Share

ಬೆಂಗಳೂರು, ಏಪ್ರಿಲ್ 28: ಬೆಂಗಳೂರಿನ ಕುಮಾರಸ್ವಾಮಿ ಲೇಔಟ್​ ಸಮೀಪದ ಜೆಹೆಚ್ ಬಿಸಿ ಲೇಔಟ್​ನಲ್ಲಿ ಕಾಲೇಜು ಪ್ರಾಧ್ಯಾಪಕ ಅರಬಿಂದ್ ಗುಪ್ತಾ ಎಂಬವರ ಮೇಲೆ ಯುವಕರು ಹಲ್ಲೆ ನಡೆಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ವಿಂಗ್ ಕಮಾಂಡರ್ ರೋಡ್ ರೇಜ್ ಪ್ರಕರಣ (Bengaluru Road Rage Case) ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಸಂದರ್ಭದಲ್ಲೇ ಈ ಘಟನೆಯೂ ನಡೆದಿದೆ. ಏಪ್ರಿಲ್ 21 ರಂದು ಸಂಜೆ 6 ರಿಂದ 7 ಗಂಟೆಯ ಸಮಯದಲ್ಲಿ ಕುಮಾರಸ್ವಾಮಿ ಲೇಔಟ್​ನ (Kumaraswamy Layout)  ಜೆಹೆಚ್ ಬಿಸಿ ಲೇಔಟ್​ನಲ್ಲಿ ಖಾಸಗಿ ಕಾಲೇಜು ಪ್ರಾಧ್ಯಾಪಕ ಅರಬಿಂದ್ ಗುಪ್ತಾ ಬೈಕ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಆಟೋದಲ್ಲಿ ತೆರಳುತ್ತಿದ್ದ ಮೂವರು ಯುವಕರು, ತಿಂಡಿ ತಿಂದು ಕಸವನ್ನು ರಸ್ತೆ ಮೇಲೆಯೇ ಬಿಸಾಡಿದ್ದರು. ಆ ವೇಳೆ, ಪ್ರಾಧ್ಯಾಪಕ ಅರಬಿಂದ್ ಗುಪ್ತಾ (Arbind Gupta) ಇದನ್ನು ಪ್ರಶ್ನಿಸಿದ್ದರು. ಕಸ ರಸ್ತೆ ಮೇಲೆ ಕಸ ಬಿಸಾಡಬೇಡಿ ಎಂದಿದ್ದರು. ಇದರಿಂದ ಕೋಪಗೊಂಡ ಯುವಕರು ಪ್ರಾಧ್ಯಾಪಕನ ಮೇಲೆ ಹಲ್ಲೆ ನಡೆಸಿದ್ದರು.

ಘಟನೆಯ ವೀಡಿಯೋ ಮಾಡಿದ್ದ ಅರಬಿಂದ್ ಗುಪ್ತಾ ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್ ಮಾಡಿದ್ದರು. ಬೈಯಪ್ಪನಹಳ್ಳಿಯಲ್ಲಿ ನಡೆದಿದ್ದ  ರೋಡ್​ ರೇಜ್ ಬಳಿಕ (ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಪ್ರಕರಣ) ಇದು ಕೂಡ ಸಾಕಷ್ಟು ಸದ್ದು ಮಾಡಿತ್ತು.

ನಂತರ ಪ್ರಕರಣ ದಾಖಲಿಸಿಕೊಂಡಿದ್ದ ಕೆಎಸ್ ಲೇಔಟ್ ಪೊಲೀರು ಮೂವರು ಆರೋಪಿಗಳಾದ ಭಾನುಪ್ರಸಾದ್, ಶರತ್, ಅಮೃತ್ ಕುಮಾರ್​​ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಸದ್ಯ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿರಿಸಲಾಗಿದೆ.

ಇದನ್ನೂ ಓದಿ
Image
ಕೊಲೆಯತ್ನ ಕೇಸ್: ಹೈಕೋರ್ಟ್​ ಮೊರೆ ಹೋದ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್
Image
ಬೆಂಗಳೂರಿನಲ್ಲಿ ವಿಂಗ್ ಕಮಾಂಡರ್​ ರೌಡಿ ವರ್ತನೆ: ಅಸಲಿಗೆ ಆಗಿದ್ದೇನು?

ಆಟೋ ಪಾರ್ಕಿಂಗ್​ಗೆ ಜಾಗ ಕೊಡಲಿಲ್ಲ ಎಂದು ಕ್ಯಾಬ್​ಗೆ ಡಿಕ್ಕಿ ಹೊಡೆಸಿ ದರ್ಪ

ಆಟೋ ಪಾರ್ಕಿಂಗ್​ಗೆ ಜಾಗ ಕೊಡಲಿಲ್ಲ ಎಂದು ಕ್ಯಾಬ್​ಗೆ ಡಿಕ್ಕಿ ಹೊಡೆಸಿ ದರ್ಪ ಮೆರೆದ ಘಟನೆ ಬೆಂಗಳೂರಿನ ಬಿವಿಕೆ ಅಯ್ಯಂಗಾರ್ ರಸ್ತೆಲ್ಲಿ ನಡೆದಿದೆ. ಶುಕ್ರವಾರ ಸಂಜೆ 5-30 ರ ಸಮಯದಲ್ಲಿ ಕ್ಯಾಬ್ ಚಾಲಕರೊಬ್ಬರು ಬಿವಿಕೆ ಅಯ್ಯಂಗಾರ್ ರಸ್ತೆಗೆ ವ್ಯಕ್ತಿಯೊಬ್ಬರನ್ನು ಡ್ರಾಪ್ ಮಾಡಲು ತೆರಳಿದ್ದರು. ಈ ವೇಳೆ ಅಲ್ಲಿಗೆ ಬಂದ ಆಟೋ ಚಾಲಕ, ‘ಕ್ಯಾಬ್ ತೆಗಿ’ ಎಂದು ಅವಾಜ್ ಹಾಕಿದ್ದಾನೆ. ಕ್ಯಾಬ್ ಚಾಲಕ ಸುಂದರ್ ಅಲ್ಲಿಂದ ಕ್ಯಾಬ್ ಹಿಂದಕ್ಕೆ ತೆಗೆದಿದ್ದಾರೆ. ಆದರೂ ಆಟೋ ಚಾಲಕ ಮತ್ತೆ ವಾಪಸ್ಸು ಬಂದು, ಇದು ನನ್ನ ಜಾಗ ಎಂದು ಕಿರಿಕ್ ಮಾಡಿ ಕೆಟ್ಟ ಪದಗಳಿಂದ ನಿಂದಿಸಿ ಆಟೋದಿಂದ ಕ್ಯಾಬ್​ಗೆ ಡಿಕ್ಕಿ ಹೊಡೆದು ದರ್ಪ ಮೆರೆದಿದ್ದಾನೆ.

ಈ ಆಟೋ ಚಾಲಕ ಆಟೋದಿಂದ ಕ್ಯಾಬ್​ಗೆ ಡಿಕ್ಕಿ ಹೊಡೆಸಿದ್ದನ್ನು ವಿಡಿಯೋ ಮಾಡಲು ಕ್ಯಾಬ್ ಚಾಲಕ ಮುಂದಾದಾಗ ಅದನ್ನು ತಡೆದು ಹಲ್ಲೆಗೆ ಯತ್ನಿಸಲಾಗಿದೆ ಎಂಬ ದೂರು ಕೇಳಿಬಂದಿದೆ.

ಇದನ್ನೂ ಓದಿ: ಕೊಲೆಯತ್ನ ಕೇಸ್: ಹೈಕೋರ್ಟ್​ ಮೊರೆ ಹೋದ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್

ಕೆಲ ಆಟೋ ಚಾಲಕರು ಮಾಡುವ ಇಂಥ ಕೃತ್ಯಗಳಿಂದ ಎಲ್ಲಾ ಆಟೋ ಚಾಲಕರಿಗೆ ಕೆಟ್ಟ ಹೆಸರು ಬರುತ್ತಿದೆ. ದುಷ್ಕೃತ್ಯ ಮೆರೆದ ಆಟೊ ಚಾಲಕನ ಮೇಲೆ ಪೋಲಿಸರು ಕ್ರಮ ಕೈಗೊಳ್ಳಬೇಕೆಂದು ಆಟೋ ಚಾಲಕರು ಆಗ್ರಹಿಸಿದ್ದಾರೆ.

ಒಟ್ಟಿನಲ್ಲಿ ಬೆಂಗಳೂರಿನಲ್ಲಿ ಕೆಲ ಕಿಡಿಗೇಡಿಗಳ ಅಟ್ಟಹಾಸ, ರೋಡ್​​ರೇಜ್ ಪ್ರಕರಣಗಳು ಮುಂದುವರಿದಿದ್ದು, ಇದಕ್ಕೆ ಪೋಲಿಸ್ ಇಲಾಖೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಬ್ರೇಕ್ ಹಾಕಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:15 am, Mon, 28 April 25

Follow Us
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್