ಬೆಂಗಳೂರು: ಯುವಕನ ಜೀವ ತೆಗೆದ ರೋಡ್‌ ರೇಜ್‌ ರೋಷ, ಬೈಕ್‌ ಟಚ್‌ ಆಗಿದ್ದಕ್ಕೆ ಕಾರಲ್ಲಿ ಗುದ್ದಿ ಕೊಲೆ

Bengaluru road rage: ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ರೊಡ್ ರೇಜ್ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಕಳೆದ ಎರಡು ದಿನಗಳಲ್ಲೇ ನಾಲ್ಕಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಆದರೆ, ಬುಧವಾರ ರಾತ್ರಿ ನಡೆದ ರೋಡ್‌ ರೇಜ್‌ ಕೇಸ್‌ ಮಾತ್ರ ಎಲ್ಲವುಗಳನ್ನೂ ಮೀರಿಸಿದೆ. ಸಣ್ಣ ರೋಡ್‌ ರೇಜ್‌ ಗಲಾಟೆಗೆ ಒಬ್ಬ ಯುವಕನ ಕೊಲೆಯೇ ಆಗಿದೆ.

ಬೆಂಗಳೂರು: ಯುವಕನ ಜೀವ ತೆಗೆದ ರೋಡ್‌ ರೇಜ್‌ ರೋಷ, ಬೈಕ್‌ ಟಚ್‌ ಆಗಿದ್ದಕ್ಕೆ ಕಾರಲ್ಲಿ ಗುದ್ದಿ ಕೊಲೆ
ಅಪಘಾತದ ಚಿತ್ರ
Follow us
Prajwal Kumar NY
| Updated By: Ganapathi Sharma

Updated on: Aug 22, 2024 | 7:00 AM

ಬೆಂಗಳೂರು, ಆಗಸ್ಟ್ 22: ಬೆಂಗಳೂರಿನಲ್ಲಿ ದಿನನಿತ್ಯ ರೋಡ್‌ ರೇಜ್‌ ಘಟನೆಗಳು ಸರ್ವೇಸಾಮಾನ್ಯ ಎಂಬಂತೆ ನಡೆಯುತ್ತಿದೆ. ಆದರೆ, ಬುಧವಾರ ರಾತ್ರಿ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆ ಮಾತ್ರ ಆಘಾತಕಾರಿಯಾಗಿದೆ. ಕಾರಿಗೆ ಬೈಕ್‌ ಟಚ್‌ ಆಯಿತು ಎಂದು ಶುರುವಾದ ಜಗಳದಲ್ಲಿ ಒಬ್ಬನ ಜೀವವನ್ನೇ ತೆಗೆದುಬಿಟ್ಟಿದ್ದಾರೆ. ಡೆಲಿವರಿ ಬಾಯ್ ಮಹೇಶ್ ಎಂಬಾತನೇ ಮೃತಪಟ್ಟ ಯುವಕ.

ಮಹೇಶ್, ಬುಧವಾರ ಸಂಜೆ ಗೆಳೆಯರಾದ ಬಾಲಾಜಿ ಮತ್ತು ನಿಖಿಲ್ ಜೊತೆ ಟೀ ಕುಡಿಯಲು ಹೋಗಿದ್ದ. ಟೀ ಕುಡಿದು ಬೈಕ್‌ನಲ್ಲಿ ಬರುವಾಗ ಸ್ಪೀಡಾಗಿ ಬಂದ ಕಾರು ಹಾರ್ನ್‌ ಮಾಡಿದರೂ ಸೈಡ್‌ ಕೊಟ್ಟಿಲ್ಲ. ಈ ವೇಳೆ ಕಾರಿಗೆ ಬೈಕ್‌ ಸ್ವಲ್ಪ ಟಚ್‌ ಆಗಿತ್ತಂತೆ. ಇದೇ ಸಿಟ್ಟಲ್ಲಿ ಕಾರು ಚಾಲಕ ಅರವಿಂದ್, ಬೈಕ್‌ ಚಾಲಕನನ್ನ ಚೇಸ್ ಮಾಡಿಕೊಂಡು ಹೋಗಿದ್ದಾನೆ. ಮುಖ್ಯ ರಸ್ತೆಯಿಂದ ತಿರುಗಿಸುವಾಗ ಬೈಕ್‌ನಲ್ಲಿ ಹಿಂಬದಿ ಕೂತಿದ್ದ ಇಬ್ಬರು ಕೆಳಗೆ ಬಿದ್ದಿದ್ದಾರೆ. ಆದರೆ, ಜಿಕೆವಿಕೆ ಲೇಔಟ್‌ಗೆ ನುಗ್ಗಿದ ಮಹೇಶ್ ಬೈಕ್‌ಗೆ ಕಾರು ಚಾಲಕ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ತಿರುವಿನಲ್ಲಿದ್ದ ಮನೆಯ ಕಾಂಪೌಂಡ್‌ಗೆ ಮಹೇಶ್ ತಲೆ ಬಡಿದಿದೆ.

ಇನ್ನು, ಅಪಘಾತದ ನಂತರ ಗಾಯಗೊಂಡಿದ್ದ ಮಹೇಶ್‌ನನ್ನ ಹೊತ್ತೊಯ್ಯಲು ಕಾರು ಚಾಲಕ ಮುಂದಾಗಿದ್ದಾನೆ. ಆದರೆ, ರಕ್ತದ ಮಡುವಿನಲ್ಲಿದ್ದ ಮಹೇಶ್ ಸಾವನ್ನಪ್ಪಿದ್ದಾನೆ.

Bengaluru road rage: Delivery boy was punched and killed in a car for touching a bike, Kannada news

ಮೃತ ಯುವಕ ಮಹೇಶ್

ನಂತರ ಆರೋಪಿ ಅರವಿಂದ್‌ ಮತ್ತು ಕೇಶವ್‌ನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಪ್ಪಿಕೊಂಡ ಬಾಲಾಜಿ ಎಂಬ ಯುವಕ ನೀಡಿದ ದೂರಿನ ಅನ್ವಯ ವಿದ್ಯಾರಾಣ್ಯಪುರ ಪೊಲೀಸರು ಕೊಲೆ ಕೇಸ್ ದಾಖಲಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್​ರನ್ನು ಹೊಗಳಿದ್ದಕ್ಕೆ ಪತ್ನಿಯ ಮೈ ಸುಟ್ಟು, ತ್ರಿವಳಿ ತಲಾಖ್ ನೀಡಿದ ಗಂಡ

ಒಟ್ಟಿನಲ್ಲಿ ಕೋಟ್ಯಂತರ ವಾಹನಗಳಿರುವ ಬೆಂಗಳೂರಿನಲ್ಲಿ ನಿತ್ಯವೂ ಸಣ್ಣ ಪುಟ್ಟ ಅಪಘಾತಗಳು ಸಾಮಾನ್ಯವಾಗಿಬಿಟ್ಟಿದೆ. ಆದರೆ ಇದನ್ನೇ ದೊಡ್ಡದು ಮಾಡಿ, ತಾಳ್ಮೆ ಕಳೆದುಕೊಂಡರೆ ಏನೆಲ್ಲಾ ಅನಾಹುತ ಆಗಬಹುದು ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ