AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ 7.11 ಕೋಟಿ ದರೋಡೆ ಕೇಸ್​: ಮತ್ತೆ 42 ಲಕ್ಷ ರೂ. ಜಪ್ತಿ; ಈವರೆಗೆರಿ ಕವರಿಯಾದ ಹಣವೆಷ್ಟು?

ಬೆಂಗಳೂರಿನಲ್ಲಿ 7.11 ಕೋಟಿ ರೂ. ದರೋಡೆ ಪ್ರಕರಣ ಸಂಬಂಧ, ಪೊಲೀಸರು ಮತ್ತೆ 47 ಲಕ್ಷ ರೂಪಾಯಿ ಹಣ ಜಪ್ತಿ ಮಾಡಿದ್ದಾರೆ. ಹೈದರಾಬಾದ್​​ನ ಲಾಡ್ಜ್​​ ಒಂದರಲ್ಲಿ ಸಿಕ್ಕಿಬಿದ್ದಿದ್ದ ಆರೋಪಿ ನವೀನ್ ನೀಡಿದ್ದ ಮಾಹಿತಿ ಆಧಾರದಲ್ಲಿ ಈ ಹಣ ವಶಕ್ಕೆ ಪಡೆಯಲಾಗಿದೆ. ಕೇಸ್​ ಸಂಬಂಧ ಒಟ್ಟು 9 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಉಳಿದ ಹಣಕ್ಕಾಗಿ ತನಿಖೆ ಮುಂದುವರಿದಿದೆ.

ಬೆಂಗಳೂರಲ್ಲಿ 7.11 ಕೋಟಿ ದರೋಡೆ ಕೇಸ್​: ಮತ್ತೆ 42 ಲಕ್ಷ ರೂ. ಜಪ್ತಿ; ಈವರೆಗೆರಿ ಕವರಿಯಾದ ಹಣವೆಷ್ಟು?
ದರೋಡೆಯಾಗಿದ್ದ ಹಣದ ಪೈಕಿ 11.01 ಕೋಟಿ ರೂ. ಈವರೆಗೆ ವಶಕ್ಕೆ.
ರಾಚಪ್ಪಾಜಿ ನಾಯ್ಕ್
| Edited By: |

Updated on: Nov 25, 2025 | 11:40 AM

Share

ಬೆಂಗಳೂರು, ನವೆಂಬರ್​​ 25: ಎಟಿಂಗಳಿಗೆ ಹಣ ಒಯ್ಯುತ್ತಿದ್ದ ವಾಹನವನ್ನು ಅಧಿಕಾರಿಗಳ ಸೋಗಿನಲ್ಲಿ ತಡೆದು 7.11 ಕೋಟಿ ರೂಪಾಯಿ ದರೋಡೆ ಪ್ರಕರಣ ಸಂಬಂಧ 47 ಲಕ್ಷ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಆ ಮೂಲಕ ಕೇಸ್​ ಸಂಬಂಧ ಈವರೆಗೆ 7.01 ಕೋಟಿ ರೂಪಾಯಿ ರಿಕವರಿ ಆದಂತಾಗಿದೆ. ಉಳಿದ 10 ಲಕ್ಷ ರೂಪಾಯಿ ಬಗ್ಗೆ ತನಿಖೆ ಮುಂದುವರಿದಿದ್ದು, ಬಂಧಿತ 9 ಆರೋಪಿಗಳ ವಿಚಾರಣೆ ತೀವ್ರಗೊಂಡಿದೆ.

ಕುಪ್ಪಂನ ಮನೆಯಲ್ಲಿ ಹಣ ಜಪ್ತಿ

ಪ್ರಕರಣ ಸಂಬಂಧ ನವೀನ್​ ಎಂಬಾತನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದು, ಹೈದರಾಬಾದ್​​ನ ಲಾಡ್ಜ್​​ ಒಂದರಲ್ಲಿ 53 ಲಕ್ಷ ರೂ. ಹಣದ ಜೊತೆಗೆ ಆರೋಪಿ ಸಿಕ್ಕಿಬಿದ್ದಿದ್ದ. ಎರಡು ದಿನಗಳ ಕಾಲ ಆತನ ಸತತ ವಿಚಾರಣೆ ನಡೆಸಲಾಗಿದ್ದು, ಈ ವೇಳೆ ನವೀನ್​ ನೀಡಿರುವ ಮಾಹಿತಿ ಆಧರಿಸಿ ನಿನ್ನೆ ರಾತ್ರಿ ಕುಪ್ಪಂನ ಮನೆಯೊಂದರಲ್ಲಿದ್ದ 47 ಲಕ್ಷ ಹಣವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಬೆನ್ನತ್ತಿದ್ದ ಪೊಲೀಸರು ಹೊಸಕೋಟೆಯ ಪಾಳುಬಿದ್ದ ಮನೆಯಲ್ಲಿ ಆರೋಪಿಗಳು ಬಚ್ಚಿಟ್ಟಿದ್ದ 5.56 ಕೋಟಿ ರೂ.ಗಳನ್ನು ಈಗಾಗಲೇ ಪತ್ತೆ ಮಾಡಿದ್ದರು. ಆ ಬಳಿಕ ಹಂತ ಹಂತವಾಗಿ ಒಟ್ಟು 7.01 ಕೋಟಿ ರೂಪಾಯಿಗಳನ್ನು ರಿಕವರಿ ಮಾಡಲಾಗಿದೆ.

ಇದನ್ನೂ ಓದಿ: ಖಾಕಿ ತನಿಖೆ ವೇಳೆ ಬಯಲಾಯ್ತು 7.11 ಕೋಟಿ ಹಣ ದರೋಡೆಯ ಗುಟ್ಟು!

ಹಣಕಾಸಿನ ಸಮಸ್ಯೆಯಿಂದ ಬಳಲುತ್ತಿದ್ದ ಆರೋಪಿಗಳು, ಸಾಲ ತೀರಿಸುವ ಉದ್ದೇಶದಿಂದ ಹಣ ದರೋಡೆ ಮಾಡಿದ್ದರು. ಉಳಿದ ಹಣದಲ್ಲಿ ಐಷಾರಾಮಿ ಜೀವನ ನಡೆಸುವ ಕನಸು ಅವರದ್ದಾಗಿತ್ತು ಎಂಬುದು ಪೊಲೀಸ್​​ ತನಿಖೆ ವೇಳೆ  ಬಯಲಾಗಿದೆ . ಮುಖ್ಯ ಆರೋಪಿಗಳಾದ ಗೋಪಿ ಮತ್ತು ಕ್ಸೇವಿಯರ್ 17 ಸಾವಿರ ರೂಪಾಯಿ ಸಂಬಳ ಪಡೆಯುತ್ತಿದ್ದರು. ಆ ಪೈಕಿ ಕ್ಸೇವಿಯರ್ ಒಂದು ವರ್ಷದ ಹಿಂದೆಯೇ ಕೆಲಸ ಬಿಟ್ಟಿದ್ದ. ಕುಡಿತ, ಜೂಜಿನ ಚಟದಿಂದಾಗಿ ಆರೋಪಿಗಳು ಹಣಕಾಸು ಸಮಸ್ಯೆಗೆ ಸಿಲುಕಿದ್ದರು. ಈ ಹಿನ್ನಲೆ ಪೊಲೀಸ್ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ಪ್ಲ್ಯಾನ್ ಪ್ರಕಾರ ATM ವಾಹನ ದರೋಡೆ ಮಾಡಲಾಗಿದ್ದು, ಹಾಲಿ ಸಿಬ್ಬಂದಿ ಗೋಪಿಯೇ ದರೋಡೆ ಪ್ರಕರಣದ ಮಾಸ್ಟರ್ ಮೈಂಡ್​ ಎಂಬುದು ಬಹಿರಂಗವಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.