ಬೆಂಗಳೂರಿನಲ್ಲಿ ರೌಡಿಶೀಟರ್ ಸಿದ್ದಾಪುರ ಮಹೇಶ್ ಕೊಲೆ ಕೇಸ್, 11 ಆರೋಪಿಗಳು ಪೊಲೀಸ್ ವಶಕ್ಕೆ

ಬೆಂಗಳೂರಿನಲ್ಲಿ ರೌಡಿಶೀಟರ್ ಸಿದ್ದಾಪುರ ಮಹೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 11 ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರಿನಲ್ಲಿ ರೌಡಿಶೀಟರ್ ಸಿದ್ದಾಪುರ ಮಹೇಶ್ ಕೊಲೆ ಕೇಸ್, 11 ಆರೋಪಿಗಳು ಪೊಲೀಸ್ ವಶಕ್ಕೆ
ಬಂಧಿತ ಆರೋಪಿಗಳು
Follow us
Prajwal Kumar NY
| Updated By: ರಮೇಶ್ ಬಿ. ಜವಳಗೇರಾ

Updated on: Aug 07, 2023 | 7:00 AM

ಬೆಂಗಳೂರು, (ಆಗಸ್ಟ್ 07): ಮೊನ್ನೇ ಜೈಲಿನಿಂದ ಹೊರಬಂದ ಕೆಲವೇ ಗಂಟೆಗಳಲ್ಲಿ ರೌಡಿಶೀಟರ್(Rowdy Sheeter)​ ಸಿದ್ದಾಪುರ ಮಹೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 11 ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತಮಿಳುನಾಡಿನ ಹೊಸೂರು ಬಳಿ 11 ಆರೋಪಿಗಳನ್ನು ಬೆಂಗಳೂರಿನ (Bengaluru) ಪರಪ್ಪನ ಅಗ್ರಹಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಿದ್ದಾಪುರ ಸುನೀಲ್,‌ ಕಣ್ಣನ್ ವೇಲ, ಪ್ರದೀಪ್, ಮನು, ಗ್ರೇಸ್ ವಾಲ್ಟರ್, ಶ್ರೀನಿವಾಸ ಅಲಿಯಾಸ್​​​ ಪಾಪ, ಗೋಕುಲ್, ಸುರೇಶ್​​​​​, ಕಾರ್ತಿಕ್, ವಾಲೆ ಪ್ರವೀಣ ಸೇರಿ 11 ಆರೋಪಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಆದ್ರೆ, ರೌಡಿಶೀಟರ್​ ವಿಲ್ಸನ್​ಗಾರ್ಡನ್​ ನಾಗ ತಲೆಮರೆಸಿಕೊಂಡಿದ್ದಾನೆ.

ಇದನ್ನೂ ಓದಿ: ಮಚ್ಚು ಹಿಡಿದು ಮೆರೆದವನು ಮಚ್ಚಿನಿಂದಲೇ ಅಂತ್ಯ, ತನ್ನ ಭವಿಷ್ಯವನ್ನು ತಾನೇ ನುಡಿದಿದ್ದ ಹತ್ಯೆಯಾದ ರೌಡಿಶೀಟರ್

ಮೊನ್ನೆ (ಆಗಸ್ಟ್ 06) ಜೈಲಿನಿಂದ ಹೊರ ಬಂದ ಕಲವೇ ಗಂಟೆಗಳಲ್ಲಿ ಮಹೇಶ್​ನನ್ನು ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗನ ಗ್ಯಾಂಗ್ ಹತ್ಯೆ ಮಾಡಿತ್ತು. ಈ ಸಂಬಂಧ ರೌಡಿಶೀಟರ್​​​ ವಿಲ್ಸನ್​​ಗಾರ್ಡನ್​​​ ನಾಗ, ಡಬಲ್ ಮೀಟರ್​ ಮೋಹನ್​​, ಸುನೀಲ್​ ಸೇರಿದಂತೆ ಹಲವರ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಇದೀಗ ವಿಲ್ಸನ್ ಗಾರ್ಡನ್ ನಾಗನ ಗ್ಯಾಂಗ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದೆ. ಇನ್ನು ತಲೆಮರೆಸಿಕೊಂಡಿರುವ ಡಬಲ್ ಮೀಟರ್ ಮೋಹನ್ ಹಾಗೂ ವಿಲ್ಸನ್​ ಗಾರ್ಡನ್​ ನಾಗನಿಗಾಗಿ ಪೊಲೀಸರ ಹುಡುಕಾಟ ನಡೆಸಿದ್ದಾರೆ.

ಗ್ಯಾಂಗ್​ ವಾರ್​​, ಹಳೇ ದ್ವೇಷದ ಹಿನ್ನೆಲೆಯಲ್ಲಿ ಮಹೇಶ್​ನನ್ನು ಕೊಲೆ ಮಾಡಲಾಗಿತ್ತು. ಮುಖ್ಯವಾಗಿ ವಿಲ್ಸನ್​ಗಾರ್ಡನ್​​​ ನಾಗನ ಕೊಲೆಗೆ ಮಹೇಶ್ ಸಂಚು ರೂಪಿಸಿದ್ದ. ಹೀಗಾಗಿ ರೌಡಿಶೀಟರ್​ ಸಿದ್ದಾಪುರ ಮಹೇಶ್ ನಾಗನ ವಿರೋಧಿಗಳನ್ನು ಒಗ್ಗೂಡಿಸಿದ್ದ​ ಎನ್ನಲಾಗಿದೆ. ಸುಮಾರು 30 ರೌಡಿಗಳ ಗ್ಯಾಂಗ್​ ಕಟ್ಟಿಕೊಂಡು ನಾಗನ ಹತ್ಯೆಗೆ ಸಂಚು ರೂಪಿಸಿದ್ದ. ಈ ಸಂಚಿನ ಬಗ್ಗೆ ತಿಳಿದ ನಾಗನ ಗ್ಯಾಂಗ್, ಮಹೇಶ್ ನನ್ನೇ ಹತ್ಯೆ ಮಾಡಿದೆ.

ಈ ಹಿಂದೆ ಶಾಂತಿನಗರ ಲಿಂಗನನ್ನು ನಾಗನ ಗ್ಯಾಂಗ್ ಕೊಲೆ ಮಾಡಿತ್ತು. ಅದಕ್ಕೆ ಪ್ರತೀಕಾರವಾಗಿ ಮಹೇಶ, ನಾಗನ ಗೆಳೆಯ ಮದನ್​ನನ್ನು ಕೊಲೆ ಮಾಡಿದ್ದ. ಮದನ ಕೊಲೆಗೆ ಸೇಡು ತೀರಿಸಿಕೊಳ್ಳಲು ಮಹೇಶನನ್ನು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್